AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಇಲಾಖೆಗೆ ತೆರಿಗೆ ವಂಚಿಸುತ್ತಿದ್ದ ಕಾರು ಮಾಲೀಕರಿಗೆ ಶಾಕ್: 3 ಕೋಟಿ ರೂ. ದಂಡ ವಸೂಲಿ ಮಾಡಿದ RTO

ಬೆಂಗಳೂರು ಆರ್‌ಟಿಒ ಇಂದು ತೆರಿಗೆ ವಂಚಿಸುತ್ತಿದ್ದ ಹೊರರಾಜ್ಯ ನೋಂದಣಿಯ 200ಕ್ಕೂ ಹೆಚ್ಚು ವಾಹನಗಳನ್ನು ಜಪ್ತಿ ಮಾಡಿ, 3 ಕೋಟಿ ರೂ. ದಂಡ ವಸೂಲಿ ಮಾಡಿದೆ. ಕರ್ನಾಟಕದಲ್ಲಿ ರಸ್ತೆ ತೆರಿಗೆ ಕಟ್ಟದೆ ಐಷಾರಾಮಿ ವಾಹನಗಳನ್ನು ಚಲಾಯಿಸುತ್ತಿದ್ದವರ ವಿರುದ್ಧ ಈ ಬೃಹತ್ ಕಾರ್ಯಾಚರಣೆ ನಡೆಸಲಾಗಿದೆ. ರಾಜ್ಯ ಸಾರಿಗೆ ಇಲಾಖೆಗೆ ನೂರಾರು ಕೋಟಿ ರಾಜಸ್ವ ನಷ್ಟವಾಗುತ್ತಿದ್ದು, ಈ ತಿಂಗಳಾಂತ್ಯದವರೆಗೂ ಕಾರ್ಯಾಚರಣೆ ಮುಂದುವರಿಯಲಿದೆ.

ಸಾರಿಗೆ ಇಲಾಖೆಗೆ ತೆರಿಗೆ ವಂಚಿಸುತ್ತಿದ್ದ ಕಾರು ಮಾಲೀಕರಿಗೆ ಶಾಕ್: 3 ಕೋಟಿ ರೂ. ದಂಡ ವಸೂಲಿ ಮಾಡಿದ RTO
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 17, 2026 | 2:37 PM

Share

ಬೆಂಗಳೂರು, ಆ.17 : ರಾಜ್ಯ ಸಾರಿಗೆ ಇಲಾಖೆಗೆ ನೂರಾರು ಕೋಟಿ ರೂಪಾಯಿ ತೆರಿಗೆ ವಂಚಿಸುತ್ತಿದ್ದ ಹೊರರಾಜ್ಯ ನೋಂದಣಿಯ ಐಷಾರಾಮಿ ಹಾಗೂ ನಾರ್ಮಲ್ ವಾಹನಗಳ ವಿರುದ್ಧ ಬೆಂಗಳೂರಿನಲ್ಲಿ ಆರ್‌ಟಿಒ (RTO) ಅಧಿಕಾರಿಗಳು ಇಂದು (ಆ.17) ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಸಾರಿಗೆ ಇಲಾಖೆ ಆಯುಕ್ತರ ಖಡಕ್ ಸೂಚನೆ ಮೇರೆಗೆ 10 ಪ್ರತ್ಯೇಕ ತಂಡಗಳನ್ನು ರಚಿಸಿಕೊಂಡು ದಾಳಿ ನಡೆಸಿದ ಅಧಿಕಾರಿಗಳು, ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ 200ಕ್ಕೂ ಹೆಚ್ಚು ಕಾರುಗಳನ್ನು ಜಪ್ತಿ (Seize) ಮಾಡಿ, 3 ಕೋಟಿ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ.

ಪಾಂಡಿಚೇರಿ, ತಮಿಳುನಾಡು, ನಾಗಾಲ್ಯಾಂಡ್, ಉತ್ತರ ಪ್ರದೇಶ, ಮಹಾರಾಷ್ಟ್ರ, ಗೋವಾ, ಗುಜರಾತ್, ಉತ್ತರಾಖಂಡ ಹಾಗೂ ಹರಿಯಾಣ ನೋಂದಣಿಯ ಆಡಿ , ಬೆಂಜ್, ಟಾಟಾ ಹ್ಯಾರಿಯರ್, ಮಹೀಂದ್ರಾ ಸ್ಕಾರ್ಪಿಯೋ ಸೇರಿದಂತೆ 200ಕ್ಕೂ ಹೆಚ್ಚು ವಾಹನಗಳನ್ನು ಜಪ್ತಿ ಮಾಡಲಾಗಿದೆ. KA-03 ಕಸ್ತೂರಿ ನಗರ RTO ವ್ಯಾಪ್ತಿಯ ಒಂದೇ ಕಡೆಯಲ್ಲಿ 30ಕ್ಕೂ ಹೆಚ್ಚು ಹೊರರಾಜ್ಯದ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ಆರ್‌ಟಿಒ ಅಧಿಕಾರಿಗಳನ್ನು ಕಂಡು ಓಡಿಸ್ಸಾ (OD) ನೋಂದಣಿಯ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಮೇತ ಇಬ್ಬರು ಸವಾರರು ರಸ್ತೆಯಲ್ಲಿ ಮುಗ್ಗರಿಸಿ ಬಿದ್ದ ಘಟನೆಯೂ ಜರುಗಿದೆ. ಕರ್ನಾಟಕದಲ್ಲಿ ರಸ್ತೆ ತೆರಿಗೆ (Road Tax) ಪಾವತಿಸುವುದ ತಪ್ಪಿಸಲು ವಾಹನ ಮಾಲೀಕರು ಬೇರೆ ರಾಜ್ಯಗಳಲ್ಲಿ ಐಷಾರಾಮಿ ಕಾರುಗಳನ್ನು ಖರೀದಿ ಮಾಡಿ, ಬೆಂಗಳೂರಿನಲ್ಲಿ ತಂದು ಓಡಿಸುತ್ತಿದ್ದರು.

ಇದನ್ನೂ ಓದಿ: ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರ ಬಲಿ ಪ್ರಕರಣ: ಘಟನೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ!

ನಿಯಮಗಳ ಪ್ರಕಾರ ಹೊರರಾಜ್ಯದ ವಾಹನಗಳನ್ನು ದೀರ್ಘಕಾಲದವರೆಗೆ ಸ್ಥಳೀಯ ರಸ್ತೆ ತೆರಿಗೆ ಕಟ್ಟದೆ ಬಳಸುವುದು ಕಾನೂನುಬಾಹಿರ. ಇದರಿಂದ ರಾಜ್ಯ ಸಾರಿಗೆ ಇಲಾಖೆಗೆ ನೂರಾರು ಕೋಟಿ ರೂಪಾಯಿ ರಾಜಸ್ವ ನಷ್ಟ ಉಂಟಾಗುತ್ತಿತ್ತು. ಈ ತಿಂಗಳ ಕೊನೆಯವರೆಗೂ ಹೊರರಾಜ್ಯದ ಎಲ್ಲಾ ಅಕ್ರಮ ವಾಹನಗಳ ವಿರುದ್ಧ ಕಠಿಣ ಕಾರ್ಯಾಚರಣೆ ಮುಂದುವರಿಸಲು ಆಯುಕ್ತರು ಸ್ಪಷ್ಟ ಆದೇಶ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು