ಎಸ್​ಎಂ ಕೃಷ್ಣ ಭೇಟಿಯಾದ ಡಿಕೆ ಸುರೇಶ್; ಕುತೂಹಲ ಮೂಡಿಸಿದ ಬಿಜೆಪಿ-ಕಾಂಗ್ರೆಸ್ ನಾಯಕರ ಭೇಟಿ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿಕೆ ಸುರೇಶ್ ಅವರು ಸಹೋದರ ಡಿಕೆ ಶಿವಕುಮಾರ್ ಸೇರಿದಂತೆ ಹಿರಿಯರ ಆಶೀರ್ವಾದ ಪಡೆದು ರೋಡ್​ ಶೋ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ಬಿಜೆಪಿಯ ಹಿರಿಯ ನಾಯಕ ಎಸ್​ಎಂ ಕೃಷ್ಣ ಅವರನ್ನು ಡಿಕೆ ಸುರೇಶ್ ಭೇಟಿಯಾಗಿದ್ದಾರೆ.

ಎಸ್​ಎಂ ಕೃಷ್ಣ ಭೇಟಿಯಾದ ಡಿಕೆ ಸುರೇಶ್; ಕುತೂಹಲ ಮೂಡಿಸಿದ ಬಿಜೆಪಿ-ಕಾಂಗ್ರೆಸ್ ನಾಯಕರ ಭೇಟಿ
ಬಿಜೆಪಿ ನಾಯಕ ಎಸ್ ಎಂ ಕೃಷ್ಣ ಅವರನ್ನು ಭೇಟಿಯಾದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್
Follow us
ಪ್ರಸನ್ನ ಗಾಂವ್ಕರ್​
| Updated By: Rakesh Nayak Manchi

Updated on: Mar 29, 2024 | 2:35 PM

ಬೆಂಗಳೂರು, ಮಾ.29: ಗ್ರಾಮಾಂತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿಕೆ ಸುರೇಶ್ (D.K. Suresh) ಅವರು ಸಹೋದರ ಡಿಕೆ ಶಿವಕುಮಾರ್ ಸೇರಿದಂತೆ ಹಿರಿಯರ ಆಶೀರ್ವಾದ ಪಡೆದು ರೋಡ್​ ಶೋ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ಬಿಜೆಪಿಯ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ (S.M. Krishna) ಅವರನ್ನು ಡಿಕೆ ಸುರೇಶ್ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಕೃಷ್ಣ ಅವರೊಂದಿಗೆ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ಭೇಟಿ ಬಗ್ಗೆ ಎಕ್ಸ್ ಪೋಸ್ಟ್ ಮಾಡಿದ ಡಿಕೆ ಸುರೇಶ್, ಇಂದು ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿಗಳಾದ ಎಸ್‌.ಎಂ.ಕೃಷ್ಣ ದಂಪತಿಗಳ ಆಶೀರ್ವಾದ ಪಡೆದೆ. ಈ ವೇಳೆ ಅವರ ಸುದೀರ್ಘವಾದ ರಾಜಕೀಯ ಅನುಭವ ಮತ್ತು ಹಂಚಿಕೊಂಡ ಸಲಹೆಗಳು ಮತ್ತಷ್ಟು ನನಗೆ ಸ್ಫೂರ್ತಿಯನ್ನು ನೀಡಿವೆ ಎಂದಿದ್ದಾರೆ.

ಇದನ್ನೂ ಓದಿ: ನಾಮಪತ್ರ ಸಲ್ಲಿಸಿದ ಡಿಕೆ ಸುರೇಶ್‌ 593.04 ಕೋಟಿ ರೂ. ಒಡೆಯ, ಆದ್ರೂ ಒಂದು ಸ್ವಂತ ಕಾರು ಇಲ್ಲ!

ಬೆಂಗಳೂರು ಗ್ರಾಮಾಂತರ ಲೋಕಸಭಾ ರಣಕಣ ರಂಗೇರಿದೆ. ಕ್ಷೇತ್ರದ ಹಾಲಿ ಸಂಸದ ಡಿಕೆ ಸುರೇಶ್ ಅವರು ಮತ್ತೊಮ್ಮೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದು, ನಿನ್ನೆ (ಮಾರ್ಚ್ 28) ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮೀನಶನ್​ಗೂ ಮುನ್ನಾ ಟೆಂಪಲ್ ರನ್​ ಮಾಡಿದ್ದ ಅವರು, ಮನೆದೇವತೆ ಕೆಂಕೇರಮ್ಮ, ಕಬ್ಬಾಳಮ್ಮ‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಡಿಕೆ ಸುರೇಶ್ ಎಕ್ಸ್ ಪೋಸ್ಟ್

ಬಳಿಕ ಉಪಮುಖ್ಯಮಂತ್ರಿಯೂ ಆಗಿರುವ ಸಹೋದರ ಡಿಕೆ ಶಿವಕುಮಾರ್ ಸೇರಿದಂತೆ ಕುಟುಂಬದ ಹಿರಿಯರ ಆಶೀರ್ವಾದ ಪಡೆದ ಡಿಕೆ ಸುರೇಶ್, ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಬೃಹತ್ ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಿದರು.

ಇದನ್ನೂ ಓದಿ: ಬಿಜೆಪಿಗೆ ಆಘಾತ: ಬೆಂಗಳೂರು ಗ್ರಾಮಾಂತರದಲ್ಲಿ ಮಂಜುನಾಥ್​ ಹೆಸರಿನ ಮತ್ತೋರ್ವ ವ್ಯಕ್ತಿ ಸ್ಪರ್ಧೆ

ಇನ್ನೊಂದೆಡೆ, ಡಿಕೆ ಸುರೇಶ್ ಅವರ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಕಣದಲ್ಲಿದ್ದಾರೆ. ವೈದ್ಯಕೀಯ ವೃತ್ತಿಯಲ್ಲಿ ಮಾಡಿದ ಸಮಾಜ ಸೇವೆಯೇ ಮಂಜುನಾಥ್ ಅವರಿಗೆ ಶ್ರೀರಕ್ಷೆಯಾಗಿದೆ. ಹೀಗಾಗಿ ಈ ಬಾರಿ ಬೆಂಗಳೂರು ಗ್ರಾಮಾಂತರವು ಹೈವೋಲ್ಟೇಜ್​ ಲೋಕಸಭಾ ಕ್ಷೇತ್ರವಾಗಿ ಹೊರಹೊಮ್ಮಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ