ಕೈ ನಾಯಕರಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರಬಹುದು: ಇದು ಬಿಟ್ಟು ಪಕ್ಷವನ್ನು ಅಧಿಕಾರಕ್ಕೆ ತರೋಣ- ಸಿದ್ದರಾಮಯ್ಯ
ಕಾಂಗ್ರೆಸ್ ನಾಯಕರಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರಬಹುದು, ಆದರೆ ಇದನ್ನು ಬಿಟ್ಟು ಮಲ್ಲಿಕಾರ್ಜು ಖರ್ಗೆ ಅವರ ಅಪೇಕ್ಷೆಯಂತೆ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಹೇಳಿದ್ದಾರೆ
ಬೆಂಗಳೂರು: ಕಾಂಗ್ರೆಸ್ (Congress) ನಾಯಕರಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರಬಹುದು, ಆದರೆ ಇದನ್ನು ಬಿಟ್ಟು ಮಲ್ಲಿಕಾರ್ಜು ಖರ್ಗೆ (Mallikarjun Kharge) ಅವರ ಅಪೇಕ್ಷೆಯಂತೆ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋಣ. ರಾಜ್ಯದಲ್ಲಿರುವ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಗುರಿ ಎಂದು ಸರ್ವೋದಯ ಸಮಾವೇಶದಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಲಾದ ಸರ್ವೋದಯ ಸಮಾವೇಶದಲ್ಲಿ ಮಾತನಾಡಿದ ಅವರು 40 ಪರ್ಸೆಂಟ್ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿದ್ದರು. ಗುತ್ತಿಗೆದಾರರ ಸಂಘದ ಪತ್ರದ ಬಗ್ಗೆ ಈವರೆಗೆ ಕ್ರಮ ಕೈಗೊಂಡಿಲ್ಲ ಎಂದರು.
ಸಿಎಂ ಬೊಮ್ಮಾಯಿ, ಗೃಹಸಚಿವ ಆರಗ ರಾಜೀನಾಮೆ ನೀಡಬೇಕಿತ್ತು
ಕೆ.ಆರ್.ಪುರಂ ಠಾಣೆಯ ಇನ್ಸ್‌ಪೆಕ್ಟರ್ ನಂದೀಶ್ ಸಾವು ಪ್ರಕರಣದ ಕುರಿತು ಮಾತನಾಡಿದ ಅವರು ಸಚಿವ ಎಂಟಿಬಿ ಹೇಳಿಕೆ ನೀಡುತ್ತಿದ್ದಂತೆ, ಸಿಎಂ ಬೊಮ್ಮಾಯಿ, ಗೃಹಸಚಿವ ಆರಗ ರಾಜೀನಾಮೆ ನೀಡಬೇಕಿತ್ತು. ಮಾನ, ಮರ್ಯಾದೆ, ಘನತೆ, ಗೌರವವಿದ್ರೆ ರಾಜೀನಾಮೆ ನೀಡಬೇಕಿತ್ತು. ಬಿಜೆಪಿಯವರಿಗೆ ಯಾವುದೇ ಮಾನ, ಮರ್ಯಾದೆ ಇಲ್ಲ ಎಂದು ವಾಗ್ದಾಳಿ ಮಾಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ