ಬೆಂಗಳೂರಿನ ಶಾಲೆಗಳಿಗೆ ಬಾಂಬ್​ ಬೆದರಿಕೆ: ನಕಲಿ ​ಐಡಿ ಬಳಸಿ ಇ-ಮೇಲ್ ಸಂದೇಶ ರವಾನೆ, ತನಿಖೆಗೆ ವಿಶೇಷ ತಂಡ ರಚನೆ

ಶುಕ್ರವಾರ ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್​ ಸಂದೇಶ ಬಂದಿತ್ತು. ಈ ಬಾಂಬ್​ ಬೆದರಿಕೆ ಸಂದೇಶದಲ್ಲಿ ಉಗ್ರವಾದ ಪದ ಬಳಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ ದಯಾನಂದ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ.

ಬೆಂಗಳೂರಿನ ಶಾಲೆಗಳಿಗೆ ಬಾಂಬ್​ ಬೆದರಿಕೆ: ನಕಲಿ ​ಐಡಿ ಬಳಸಿ ಇ-ಮೇಲ್ ಸಂದೇಶ ರವಾನೆ, ತನಿಖೆಗೆ ವಿಶೇಷ ತಂಡ ರಚನೆ
ಬೆಂಗಳೂರು ಪೊಲೀಸ್​
Follow us
| Updated By: ವಿವೇಕ ಬಿರಾದಾರ

Updated on:Dec 02, 2023 | 12:44 PM

ಬೆಂಗಳೂರು ಡಿ.02: ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ (School) ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ (Bomb Threat) ಕರೆ ಪ್ರಕರಣ ಬೆಂಗಳೂರು ನಗರ ಪೊಲೀಸ್ (Police) ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಬಳಸಲಾದ ಇ-ಮೇಲ್​ ಐಡಿ ನಕಲು ಎಂಬುದು ಪತ್ತೆಯಾಗಿದೆ. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ಸೃಷ್ಟಿಸಿದ್ದಾರೆ.

ದುಷ್ಕರ್ಮಿ ವರ್ಚ್ಯುಯಲ್ ಪ್ರವೇಟ್ ನೆಟ್ವರ್ಕ್ (ವಿಪಿಎನ್) ಬಳಸಿ ಇ-ಮೇಲ್ ಸಂದೇಶಗಳನ್ನು ಕಳುಹಿಸಿದ್ದಾರೆ. ಹೀಗಾಗಿ ಪೊಲೀಸರು ದುಷ್ಕರ್ಮಿಗಳು ಬಳಸಿದ ಕಂಪ್ಯೂಟರ್, ಸೈಬರ್ ಕೆಫೆ ಅಥವಾ ಲ್ಯಾಪ್ ಟಾಪ್ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕಿಡಿಗೇಡಿ ದೂರದ ದೇಶದ ನೆಟ್ವರ್ಕ್ ಬಳಸಿ ಕೃತ್ಯ ಎಸಗಿದ್ದಾನೆ.

ಇದನ್ನೂ ಓದಿ: ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: 48 ಎಫ್ಐಆರ್ ದಾಖಲು

ಪೊಲೀಸ್ ಮೂಲಗಳ ಪ್ರಕಾರ ಕಿಡಿಗೇಡಿ ವಿದೇಶದ ಖಾಸಗಿ ಕಂಪನಿಯ ವಿಪಿಎನ್ ಬಳಸಿ ಇ-ಮೇಲ್​ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಂಪನಿಯ ಯಾವ ಸರ್ವರ್ ಬಳಸಲಾಗಿದೆ ? ಬಳಸಿದ ಐಡಿ, ಐಪಿ ಯಾವುದು ? ಈ ಬಗ್ಗೆ ಮಾಹಿತಿ ನೀಡುವಂತೆ ವಿದೇಶದ Cyrtus ಎಂಬ ಕಂಪನಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಪ್ರಕರಣ ಬೇಧಿಸಲು ಸಿದ್ಧವಾದ ಪೊಲೀಸರಿಗೆ ವಿದೇಶಿ ಒಪ್ಪಂದದ ಆತಂಕ ಶುರುವಾಗಿದೆ. ಕೃತ್ಯ ಎಸಗಲು ಬಳಸಿದ ವಿದೇಶಿ ಸರ್ವರ್​ನಿಂದ ಮಾಹಿತಿ ಪಡೆಯುವ ಸವಾಲು ಪೊಲೀಸರ ಮುಂದೆ ಇದೆ. ಈ ರೀತಿ ಮಾಹಿತಿ ಹಂಚಿಕೊಳ್ಳವ ಒಪ್ಪಂದ ಕೆಲವೇ ದೇಶಗಳ ಜೊತೆ ಇದೆ. ಸದ್ಯ 39 ದೇಶಗಳ ಜೊತೆ ಒಪ್ಪಂದವಿದ್ದು, ಮೂರು ದೇಶಗಳ ಜೊತೆ ಸಹಿ ಪ್ರಕ್ರಿಯೆ ಬಾಕಿ ಇದೆ.

ಹೀಗಾಗಿ ನುರಿತ ಸೈಬರ್ ಪೊಲೀಸ್ ಅಧಿಕಾರಿಗಳು ಹಾಗೂ ಸೈಬರ್ ತಜ್ಞರು, ಈ ಹಿಂದೆ ಬಂದಿದ್ದ ಹುಸಿ ಬಾಂಬ್ ಇ-ಮೇಲ್​ಗಳನ್ನೂ ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ಪದೇ ಪದೇ ನಡೆಯುತ್ತಿರುವ ಈ ಕೃತ್ಯದ ಹಿಂದಿರುವ ದುಷ್ಕರ್ಮಿಗಳ್ಯಾರು ? ಕೃತ್ಯದ ಹಿಂದಿನ ಅಸಲಿ ಕಾರಣವೇನು ? ಶಾಲೆಗಳನ್ನೇ ಟಾರ್ಗೆಟ್ ಮಾಡಿ ಇ-ಮೇಲ್ ಕಳುಹಿಸುತ್ತಿರುವ ಹಿಂದಿನ ಉದ್ದೇಶವೇನು ? ಈ ಕೃತ್ಯಕ್ಕೆ ಇ-ಮೇಲ್ ಬಳಸುತ್ತಿರುವ ಆ ದುಷ್ಕರ್ಮಿ ಯಾರು ಎಂದು ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:19 am, Sat, 2 December 23

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ