AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ!

ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಶಾಲಾ ಸಮಯವನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದು, ಪೋಷಕರು, ಸಂಚಾರ ಪೊಲೀಸ್ ಹಾಗೂ ಶಾಲಾ ಆಡಳಿತ ಮಂಡಳಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ!
ಬೆಂಗಳೂರಿನ ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ!
ಭಾವನಾ ಹೆಗಡೆ
|

Updated on: Sep 13, 2026 | 8:19 AM

Share

ಮುಖ್ಯಾಂಶಗಳು

  • ಬೆಂಗಳೂರಿನ ಟ್ರಾಫಿಕ್ ಕಡಿಮೆ ಮಾಡಲು ಶಾಲಾ ಸಮಯ ಬದಲಾವಣೆಗೆ ಚಿಂತನೆ.
  • ಶಾಲಾ ಇಲಾಖೆಯಿಂದ ಶೀಘ್ರದಲ್ಲೇ ಪೋಷಕರು ಮತ್ತು ಅಧಿಕಾರಿಗಳೊಂದಿಗೆ ಸಭೆ.
  • ಸಂಚಾರ ದಟ್ಟಣೆ ನಿಯಂತ್ರಿಸಲು ಹೈಕೋರ್ಟ್ ಸಲಹೆಯಂತೆ ಕ್ರಮಕ್ಕೆ ಚರ್ಚೆ.

ಬೆಂಗಳೂರು, ಸೆಪ್ಟೆಂಬರ್ 13: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತೀವ್ರ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ನಗರದ ಶಾಲೆಗಳ ವೇಳಾಪಟ್ಟಿಯನ್ನು ಬದಲಾಯಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತು ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಶಾಲಾ ಸಮಯವನ್ನು ಪರಿಷ್ಕರಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟ ಹಾಗೂ ಸಾರ್ವಜನಿಕರಿಂದ ಮನವಿಗಳು ಬಂದಿವೆ ಎಂದು ತಿಳಿಸಿದ್ದಾರೆ.

ಪೋಷಕರೊಂದಿಗೆ ಸುದೀರ್ಘ ಚರ್ಚೆ

ಶಾಲಾ ಸಮಯ ಬದಲಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯು ವಿವಿಧ ಇಲಾಖೆಗಳು, ಸಂಚಾರ ಪೊಲೀಸ್ ಅಧಿಕಾರಿಗಳು, ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಶಾಲಾ ವಾಹನ ಚಾಲಕರ ಸಂಘ ಮತ್ತು ಪೋಷಕರೊಂದಿಗೆ ಸುದೀರ್ಘ ಚರ್ಚೆ ನಡೆಸಲಿದೆ. ಎಲ್ಲ ಭಾಗಿದಾರ ಅಭಿಪ್ರಾಯಗಳನ್ನು ಸಂಗ್ರಹಿಸಿದ ನಂತರವೇ ಸೂಕ್ತ ಹಾಗೂ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಶಾಲಾ ವೇಳಾಪಟ್ಟಿ ಬದಲಾವಣೆ

ರಾಷ್ಟ್ರ ರಾಜಧಾನಿಯಂತೆಯೇ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಬೆಳಗ್ಗೆ ಮತ್ತು ಸಂಜೆ ಶಾಲಾ ವಾಹನಗಳು ಹಾಗೂ ಕಚೇರಿ ವಾಹನಗಳು ಒಂದೇ ಸಮಯದಲ್ಲಿ ರಸ್ತೆಗೆ ಇಳಿಯುವುದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಈ ಹಿಂದೆ ಉಚ್ಚ ನ್ಯಾಯಾಲಯ ಕೂಡ ಸಂಚಾರ ನಿಯಂತ್ರಣಕ್ಕಾಗಿ ಶಾಲಾ ಮತ್ತು ಕಚೇರಿ ವೇಳಾಪಟ್ಟಿಯಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಸರ್ಕಾರಕ್ಕೆ ಸಲಹೆ ನೀಡಿತ್ತು. ಶಾಲಾ ಸಮಯವನ್ನು ಸುಮಾರು 30 ನಿಮಿಷದಿಂದ 1 ಗಂಟೆಗಳ ಕಾಲ ಮುಂಚಿತವಾಗಿ ಅಥವಾ ಬದಲಾಯಿಸಿ ನಿಗದಿಪಡಿಸುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ಹೆಚ್ಚುವುದರ ಜೊತೆಗೆ ರಸ್ತೆಗಳಲ್ಲಿ ವಾಹನಗಳ ಒತ್ತಡ ಕಡಿಮೆಯಾಗಲಿದೆ ಎಂಬುದು ಇಲಾಖೆಯ ಲೆಕ್ಕಾಚಾರವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!