AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಹಿಳೆ ಎದುರು ಪ್ಯಾಂಟ್ ಬಿಚ್ಚಿ ಸೆಕ್ಯೂರಿಟಿಯಿಂದ ಅಸಭ್ಯ ವರ್ತನೆ!

ಬೆಂಗಳೂರಿನ ಕೆಂಗೇರಿಯಲ್ಲಿ ಜಾಗದ ವಿಚಾರವಾಗಿ ಮಹಿಳೆ ಮತ್ತು ಸೆಕ್ಯೂರಿಟಿ ಮಧ್ಯೆ ಗಲಾಟೆ ಉಂಟಾಗಿದೆ. ಈ ವೇಳೆ ಸಾರ್ವಜನಿಕವಾಗಿ ಮಹಿಳೆಯನ್ನು ನಿಂದಿಸುವುದರೊಂದಿಗೆ ಪ್ಯಾಂಟ್ ಜಿಪ್ ಅನ್ನು ತೆಗೆದು ಮಾರ್ಮಾಂಗ ತೋರಿಸಲು ಮುಂದಾಗಿರುವಂತಹ ಘಟನೆ ನಡೆದಿದೆ. ಸದ್ಯ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಮಹಿಳೆ ಎದುರು ಪ್ಯಾಂಟ್ ಬಿಚ್ಚಿ ಸೆಕ್ಯೂರಿಟಿಯಿಂದ ಅಸಭ್ಯ ವರ್ತನೆ!
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Aug 04, 2025 | 1:37 PM

Share

ಬೆಂಗಳೂರು, ಆಗಸ್ಟ್​ 04: ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಸೆಕ್ಯೂರಿಟಿ ಅಸಭ್ಯ ವರ್ತನೆ (miss behave) ತೋರಿರುವಂತಹ ಘಟನೆ ಕೆಂಗೇರಿ ಉಪನಗರದಲ್ಲಿ‌ ನಡೆದಿದೆ. ಮಾರ್ಟ್​​ವೊಂದರಲ್ಲಿ ಕೆಲಸ ಮಾಡುವ ಚಂದ್ರಹಾಸ ಎಂಬಾತನಿಂದ ಕೃತ್ಯವೆಸಗಲಾಗಿದೆ. ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಸೆಕ್ಯೂರಿಟಿ ಚಂದ್ರಹಾಸ ಪಕ್ಕದ ಅಂಗಡಿಯ ಮಹಿಳೆಯ ನಡುವೆ ಜಾಗದ ವಿಚಾರವಾಗಿ ಜಗಳ ತೆಗೆದಿದ್ದಾನೆ. ಈ ವೇಳೆ ಅಶ್ಲೀಲವಾಗಿ ನಿಂದಿಸಿದ್ದಾನೆ. ಅಷ್ಟೇ ಅಲ್ಲದೆ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ. ಸದ್ಯ ದೂರು ನೀಡಿರುವ ಮಹಿಳೆ ಚಂದ್ರಹಾಸ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಮಹಿಳೆ ದೂರಿನಲ್ಲೇನಿದೆ?

ಮಹಿಳೆ ದೂರಿನ ಪ್ರಕಾರ, ತಾನು ನಂ 26/3, ಔಟರ್ ರಿಂಗ್ ರಸ್ತೆ, ಕೆಂಗೇರಿ ಉಪನಗರದಲ್ಲಿ ಸುಮಾರು ನಾಲ್ಕು ವರ್ಷಗಳಿಂದ ವಾಸವಾಗಿದ್ದು, ಆಗಸ್ಟ್​ 02ರಂದು ಸುಮಾರು ರಾತ್ರಿ 09 ಗಂಟೆಗೆ ಫಿಶ್ ಅಂಗಡಿ ಜಾಗದ ವಿಚಾರಕ್ಕೆ ಮೆಗಾ ಮಾರ್ಟ್​ನ ಸೆಕ್ಯೂರಿಟಿ ಚಂದ್ರಹಾಸ ನನ್ನೊಂದಿಗೆ ಜಗಳ ಮಾಡಿದ್ದು, ಈ ವಿಷಯವಾಗಿ ಆತನಿಗೆ ಬುದ್ಧಿ ಹೇಳಿಸಲು ಮಾರ್ಟ್​​ನ ಮ್ಯಾನೇಜರ್​ಗೆ ದೂರು ಹೇಳಲು ಹೋದ ಸಂದರ್ಭದಲ್ಲಿ ಚಂದ್ರಹಾಸ ಏಕಏಕಿ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಪ್ರತಿಷ್ಠಿತ ಕಾಲೇಜ್​ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪಿಜಿ ಮಾಲೀಕನ ಬಂಧನ

ಸಾರ್ವಜನಿಕರ ಸಮ್ಮುಖದಲಿಯೇ ಆತನು ತನ್ನ ಪ್ಯಾಂಟ್ ಜಿಪ್ ಅನ್ನು ತೆಗೆದು ಮಾರ್ಮಾಂಗ ತೋರಿಸಲು ಮುಂದಾಗಿದ್ದು ಹಾಗೂ ನನ್ನ ಮೇಲೆ ಚೂಪಾದ ವಸ್ತುವಿನಿಂದ ಕಿವಿ ಹಾಗೂ ಕುತ್ತಿಗೆ ಭಾಗಕ್ಕೆ ಬಲವಾಗಿ ಹೊಡೆದು ಗಾಯ ಮಾಡಿದ್ದು, ಅದೇ ಸಮಯದಲ್ಲಿ ಸಾರ್ವಜನಿಕರು 112 ಗೆ ಕರೆ ಮಾಡಿದಾಗ ಪೊಲೀಸರು ಬಂದು ಮುಂದಿನ ಅನಾಹುತವನ್ನು ತಪ್ಪಿಸಿರುತ್ತಾರೆ.

ಇದನ್ನೂ ಓದಿ: ಅನುಮತಿ ಇಲ್ಲದೆ ಕಬ್ಬನ್ ಪಾರ್ಕ್​​ನಲ್ಲಿ ಡೇಟಿಂಗ್? ಅಧಿಕಾರಿಗಳೇ ಶಾಕ್!

ನಂತರ ನನಗೆ ನೋವು ತಳಲಾರದೇ ವಿಕ್ಟೋರಿಯಾ ಅಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು, ಆಗಸ್ಟ್​ 03 ರಂದು ಠಾಣೆಗೆ ಬಂದು ದೂರು ನೀಡಿರುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿರುವ ಚಂದ್ರಹಾಸನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಉಲೇಖಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:36 pm, Mon, 4 August 25

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!