ಬೆಂಗಳೂರು ರಾಜ್ಯದಲ್ಲೇ ಅತ್ಯುತ್ತಮ ಆರ್​ಆರ್​ಆರ್​ ನಗರವಾಗಿ ಆಯ್ಕೆ

ಪೌರಾಡಳಿತ ನಿರ್ದೇಶನಾಲಯ ನಡೆಸಿದ ಮೈ ಲೈಫ್ ಮೈ ಸಿಟಿ ಬೆಂಗಳೂರು ರಾಜ್ಯದಲ್ಲೇ ಅತ್ಯುತ್ತಮ ಆರ್​ಆರ್​ಆರ್ ನಗರವಾಗಿ ಆಯ್ಕೆಯಾಗಿದೆ.

ಬೆಂಗಳೂರು ರಾಜ್ಯದಲ್ಲೇ ಅತ್ಯುತ್ತಮ ಆರ್​ಆರ್​ಆರ್​ ನಗರವಾಗಿ ಆಯ್ಕೆ
ಬಿಬಿಎಂಪಿ
Follow us
ವಿವೇಕ ಬಿರಾದಾರ
|

Updated on:Jul 28, 2023 | 3:44 PM

ಬೆಂಗಳೂರು: ಪೌರಾಡಳಿತ ನಿರ್ದೇಶನಾಲಯ ನಡೆಸಿದ ನನ್ನ ಜೀವನ ನನ್ನ ನಗರ (My Life My City) ಅಭಿಯಾನದಲ್ಲಿ ಬೆಂಗಳೂರು (Bengaluru) ರಾಜ್ಯದಲ್ಲೇ ಅತ್ಯುತ್ತಮ ಆರ್​ಆರ್​ಆರ್ (RRR)​ (ರೆಡ್ಯೂಸ್​, ರಿಯೂಸ್​​ ಹಾಗೂ ರಿಸೈಕಲ್​) ನಗರವಾಗಿ ಆಯ್ಕೆಯಾಗಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನನ್ನ ಜೀವನ, ನನ್ನ ಸ್ವಚ್ಛ ನಗರ ಎಂಬ ದ್ಯೇಯೆಯೊಂದಿಗೆ ಮೇ 15 ರಿಂದ ಪರಿಸರ ದಿನವಾದ ಜೂನ್ 5 ರವರೆಗೆ ದೊಡ್ಡ ಪ್ರಮಾಣದ ಮತ್ತು ಉನ್ನತ-ಪ್ರಭಾವದ ರಾಷ್ಟ್ರೀಯ ಅಭಿಯಾನವನ್ನು ಪ್ರಾರಂಭಿಸಿತು. ಈ ಸಂಬಂಧ ಪೌರಾಡಳಿತ ನಿರ್ದೇಶನಾಲಯವು ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೈ ಲೈಫ್ ಮೈ ಸಿಟಿ ಎಂಬ ಧ್ಯೇಯದೊಂಗಿದೆ ರೆಡ್ಯೂಸ್​, ರಿಯೂಸ್​ ಹಾಗೂ ರಿಸೈಕಲ್​-ಆರ್​.ಆರ್​.ಆರ್​ ಕೇಂದ್ರಗಳನ್ನು ಸ್ಥಾಪಿಸಲು ಸೂಚಿಸಿತ್ತು.

ಈ ಅಭಿಯಾನದಡಿ ಬಿಬಿಎಂಪಿ 49 ವಾರ್ಡ್‌ಗಳಲ್ಲಿ ಆರ್.ಆರ್.ಆರ್ ಕೇಂದ್ರಗಳನ್ನು ತೆರೆದಿದೆ. ಈ ಕೇಂದ್ರಗಳು ಮನೆಗಳಲ್ಲಿ ಬಳಕೆಯಾಗದ ಪುಸ್ತಕಗಳು, ಆಟಿಕೆಗಳು, ಕಬ್ಬಿಣದ ಉತ್ಪನ್ನ ಹಾಗೂ ಪ್ಲಾಸ್ಟಿಕ್ ಉತ್ಪನ್ನಗಳನ್ನು ಪಡೆದು ಪುನರ್ ಬಳಕೆ ಮಾಡುವ ಜತೆಗೆ ನಗರವನ್ನು ಸ್ವಚ್ಛ ನಗರವನ್ನಾಗಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

ಇದನ್ನೂ ಓದಿ: ಬೆಂಗಳೂರು: ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬೇಡಿ: ಬಿಬಿಎಂಪಿಗೆ ಶಾಲಾ ಶಿಕ್ಷಣ ಇಲಾಖೆ ಆಗ್ರಹ

ಗುರುವಾರ ಬೆಂಗಳೂರಿನ ದಿ ಚಾನ್ಸೆರಿ ಪೆವಿಲಿಯನ್ ಹೋಟೆಲ್‌ನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕುರಿತು ಪೌರಾಡಳಿತ ನಿರ್ದೇಶನಾಲಯ ನಡೆಸಿದ ಕಾರ್ಯಾಗಾರದಲ್ಲಿ ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಗೆ ಅತ್ಯುತ್ತಮ ಆರ್​ಆರ್​ಆರ್​ ಪ್ರಶಸ್ತಿ ನೀಡಿ ಗೌರವಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Fri, 28 July 23

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ