AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 7 ಮಂದಿಯ ಸರಣಿ ಕೊಲೆ ಹಿಂದಿನ ಅಸಲಿ ಕಾರಣ ಇನ್ನೂ ನಿಗೂಢ!

ಬೆಂಗಳೂರಿನಲ್ಲಿ ಏಳು ಮಂದಿಯ ಹತ್ಯೆ ಪ್ರಕರಣದಲ್ಲಿ ಆರೋಪಿ ಇಂದುಶೇಖರ್‌ಗೆ 12 ದಿನ ಪೊಲೀಸ್ ಕಸ್ಟಡಿ ನೀಡಲಾಗಿದೆ. ಸರಣಿ ಕೊಲೆಗಳ ಹಿಂದಿನ ನಿಖರ ಕಾರಣವನ್ನು ಆರೋಪಿ ಇನ್ನೂ ಪೊಲೀಸರ ಬಳಿ ಸ್ಪಷ್ಟಪಡಿಸಿಲ್ಲ ಎನ್ನಲಾಗಿದೆ. ಉಳಿದ ಆರು ಮೃತದೇಹಗಳಿಗಾಗಿ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯಲಿದೆ.

ಬೆಂಗಳೂರು: 7 ಮಂದಿಯ ಸರಣಿ ಕೊಲೆ ಹಿಂದಿನ ಅಸಲಿ ಕಾರಣ ಇನ್ನೂ ನಿಗೂಢ!
ಆರೋಪಿಯ ಪುತ್ರ, ಕೊಲೆಯಾದ ಪುನೀತ್ ಒಳಚಿತ್ರದಲ್ಲಿ
ಶಿವಪ್ರಸಾದ್​ ಬಿ.
| Edited By: |

Updated on:Nov 07, 2026 | 6:57 AM

Share

ಮುಖ್ಯಾಂಶಗಳು

  • ಆರೋಪಿ ಇಂದುಶೇಖರ್‌ಗೆ 12 ದಿನ ಪೊಲೀಸ್ ಕಸ್ಟಡಿ
  • ಸರಣಿ ಕೊಲೆ ಹಿಂದಿನ ಕಾರಣ ಇನ್ನೂ ನಿಗೂಢ
  • ಉಳಿದ ಆರು ಮೃತದೇಹಗಳಿಗಾಗಿ ತೀವ್ರ ಶೋಧ

ಬೆಂಗಳೂರು, ನವೆಂಬರ್ 7: ಪತ್ನಿಯ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ಇಂದುಶೇಖರ್, ಸರಣಿ ಕೊಲೆಗಳ ಹಿಂದಿನ ನಿಖರ ಕಾರಣವನ್ನು ಇನ್ನೂ ಪೊಲೀಸರಿಗೆ ಸ್ಪಷ್ಟವಾಗಿ ಬಿಟ್ಟುಕೊಟ್ಟಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತೀವ್ರ ವಿಚಾರಣೆ ವೇಳೆ ಆರೋಪಿ ದ್ವಂದ್ವ ಹಾಗೂ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದು, ಈ ಭೀಕರ ಹತ್ಯಾಕಾಂಡದ ಹಿಂದಿನ ಅಸಲಿ ಉದ್ದೇಶ ಇನ್ನೂ ನಿಗೂಢವಾಗಿಯೇ ಉಳಿದಿದೆ.

ಪತ್ನಿಯೊಂದಿಗೆ ಇದ್ದ ವಿರಸ ಹಾಗೂ ಆಕೆಯ ಕುಟುಂಬದ ಮೇಲಿನ ದ್ವೇಷವೇ ಹತ್ಯೆಗೆ ಕಾರಣ ಎಂದು ಆರೋಪಿ ಹೇಳಿಕೆ ನೀಡಿದ್ದಾನೆ ಎಂಬುದು ತಿಳಿದುಬಂದಿದೆ. ಆದರೆ ಶ್ರೀರಾಮಪುರದಲ್ಲಿರುವ ಎರಡು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿ ಸೇರಿದಂತೆ ಇತರ ಯಾವುದೇ ಕಾರಣಗಳು ಈ ಕೃತ್ಯದ ಹಿಂದೆ ಇವೆಯೇ ಎಂಬ ಅನುಮಾನಗಳನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೆತ್ತ ಮಗಳ ಸಹಾಯ ಪಡೆದಿದ್ದಾನಾ ಆರೋಪಿ?

ಪ್ರಕರಣದ ತನಿಖೆಯಲ್ಲಿ ಮತ್ತೊಂದು ಗಂಭೀರ ಅಂಶವೂ ಹೊರಬಂದಿದ್ದು, ಪತ್ನಿಯ ಹತ್ಯೆ ನಡೆಸುವ ವೇಳೆ ಹೆತ್ತ ಮಗಳ ಸಹಾಯ ಪಡೆದಿರುವ ಸಾಧ್ಯತೆಯ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಈ ಕುರಿತು ಸ್ಪಷ್ಟ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಪತ್ನಿಯ ಕುಟುಂಬದ ಸದಸ್ಯರ ವಿರುದ್ಧ ದ್ವೇಷ ಬೆಳೆಸಿಕೊಂಡಿದ್ದ ಆರೋಪಿ, ಒಬ್ಬೊಬ್ಬರನ್ನಾಗಿ ಮನೆಗೆ ಕರೆಸಿ ಹತ್ಯೆ ನಡೆಸಿದ್ದಾನೆ ಎಂಬ ಆರೋಪ ಈಗಾಗಲೇ ಕೇಳಿಬಂದಿದೆ. ಆದರೆ ಇಷ್ಟೊಂದು ಭೀಕರ ಕೃತ್ಯ ನಡೆಸಲು ನಿಖರವಾಗಿ ಯಾವ ಕಾರಣ ಪ್ರೇರಣೆಯಾಯಿತು ಎಂಬ ಪ್ರಶ್ನೆಗೆ ಆರೋಪಿ ಇನ್ನೂ ಸ್ಪಷ್ಟ ಉತ್ತರ ನೀಡುತ್ತಿಲ್ಲ ಎಂಬುದು ತಿಳಿದುಬಂದಿದೆ.

ಆರೋಪಿ ಇಂದುಶೇಖರ್‌ಗೆ 12 ದಿನ ಪೊಲೀಸ್ ಕಸ್ಟಡಿ

ಸದ್ಯ ಸಾಮೂಹಿಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶೇಖರ್‌ನನ್ನು 12 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. 32ನೇ ಎಸಿಜೆಎಂ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಕಸ್ಟಡಿ ಅವಧಿಯಲ್ಲಿ ಪ್ರಕರಣದ ಪ್ರತಿಯೊಂದು ಆಯಾಮದ ಕುರಿತು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ. ಹತ್ಯೆಯ ಹಿಂದಿನ ನಿಖರ ಉದ್ದೇಶ, ಘಟನೆಗೆ ಸಂಬಂಧಿಸಿದ ಇತರ ಸಾಧ್ಯತೆಗಳು ಹಾಗೂ ಆರೋಪಿಯ ಹೇಳಿಕೆಗಳ ಸತ್ಯಾಸತ್ಯತೆ ಪರಿಶೀಲನೆಗೆ ತನಿಖಾಧಿಕಾರಿಗಳು ಮುಂದಾಗಿದ್ದಾರೆ.

ಉಳಿದ ಆರು ಮೃತದೇಹಗಳಿಗಾಗಿ ಶೋಧ

ಸದ್ಯ ಮೃತದೇಹಗಳ ಪತ್ತೆಗಾಗಿ ಆರೋಪಿ ಶೇಖರ್‌ನನ್ನು ವಿವಿಧ ಸ್ಥಳಗಳಿಗೆ ಕರೆದೊಯ್ಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ತಮಿಳುನಾಡಿನ ಸೇಲಂ ಸೇರಿದಂತೆ ಚಾರ್ಮಾಡಿ ಘಾಟ್, ಶಿರಾಡಿ ಘಾಟ್, ನಂದಿಬೆಟ್ಟ ಮತ್ತು ಚಾಮುಂಡಿಬೆಟ್ಟ ಪ್ರದೇಶಗಳಲ್ಲಿ ಮೃತದೇಹಗಳನ್ನು ಎಸೆದಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹತ್ಯೆಗೀಡಾದ ಬಾಲಕ ಪುನೀತ್‌ನ ಮೃತದೇಹ ಈಗಾಗಲೇ ನಂದಿಬೆಟ್ಟದಲ್ಲಿ ಪತ್ತೆಯಾಗಿದೆ. ಉಳಿದ ಆರು ಮೃತದೇಹಗಳ ಪತ್ತೆಗಾಗಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಶೋಧ ಕಾರ್ಯ ಮುಂದುವರಿಯಲಿದೆ.

ಇದನ್ನೂ ಓದಿ: 7 ಜನರ ಹತ್ಯೆ ಪ್ರಕರಣ: ಎಲ್ಲರೂ ಪ್ರವಾಸಕ್ಕೆ ಹೋಗಿದ್ದೇವೆ ಎಂದಿದ್ದ ಆರೋಪಿಯ ಕಳ್ಳಾಟ ಬಯಲಾಗಿದ್ದೇ ರೋಚಕ!

ಪ್ರಕರಣದ ಸಂಪೂರ್ಣ ವಿವರಗಳನ್ನು ಕಲೆಹಾಕಲು ಸ್ಥಳ ಮಹಜರು ಪ್ರಕ್ರಿಯೆಯನ್ನೂ ನಡೆಸಲಾಗುತ್ತದೆ. ಆರೋಪಿ ನೀಡುತ್ತಿರುವ ಹೇಳಿಕೆಗಳನ್ನು ಪರಿಶೀಲಿಸಿ, ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಈ ಸಾಮೂಹಿಕ ಹತ್ಯೆ ಪ್ರಕರಣದಲ್ಲಿ ಮುಂದಿನ ತನಿಖೆಯಿಂದ ಮತ್ತಷ್ಟು ಮಹತ್ವದ ಮಾಹಿತಿ ಹೊರಬರುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:54 am, Sat, 7 November 26

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು
ಒಂದೇ ಕುಟುಂಬ 7 ಜನರ ಹತ್ಯೆ: ಶವಗಳನ್ನ ಸಾಗಿದ ಸಿಸಿಟಿವಿ ದೃಶ್ಯ ಇಲ್ಲಿದೆ
ಒಂದೇ ಕುಟುಂಬ 7 ಜನರ ಹತ್ಯೆ: ಶವಗಳನ್ನ ಸಾಗಿದ ಸಿಸಿಟಿವಿ ದೃಶ್ಯ ಇಲ್ಲಿದೆ
70 ಕೋಟಿ ರೂ. ವೆಚ್ಚದ ಸೋಲಾರ್ ಪ್ಲಾಂಟ್‌ಗೆ ಭಾರಿ ಯಶಸ್ಸು
70 ಕೋಟಿ ರೂ. ವೆಚ್ಚದ ಸೋಲಾರ್ ಪ್ಲಾಂಟ್‌ಗೆ ಭಾರಿ ಯಶಸ್ಸು
ಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ
ಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ
ಪಟಾಕಿ ಹಣ ಉಳಿಸಿ ಗಿಡ ನೆಡಿ, ಪುಸ್ತಕ ಕೊಳ್ಳಿ
ಪಟಾಕಿ ಹಣ ಉಳಿಸಿ ಗಿಡ ನೆಡಿ, ಪುಸ್ತಕ ಕೊಳ್ಳಿ
ಸೌಜನ್ಯ ಕೇಸ್​​: ಮಹೇಶ್ ಶೆಟ್ಟಿ , ವಿಟ್ಠಲ್ ಗೌಡ ವಿರುದ್ದ SITಗೆ ದೂರು
ಸೌಜನ್ಯ ಕೇಸ್​​: ಮಹೇಶ್ ಶೆಟ್ಟಿ , ವಿಟ್ಠಲ್ ಗೌಡ ವಿರುದ್ದ SITಗೆ ದೂರು