ಬೆಂಗಳೂರು ಯುವತಿ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮೇಲೆ ಎಫ್​ಐಆರ್ ದಾಖಲು

Bengaluru Sexual Assault Case: ಕೊರಮಂಗಲದಿಂದ ಹೆಚ್ಎಸ್​ಆರ್ ಲೇಔಟ್ ನ ಶೆಡ್ ಬಳಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಸದ್ಯ ಆಸ್ಪತ್ರೆ ಸೇರಿರುವ ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮೇಲೆ ಎಫ್​ಐಆರ್ ದಾಖಲಾಗಿದೆ. ಆಟೋ ಚಾಲಕ ನೀಡಿದ ದೂರಿನ ಮೇರೆಗೆ ಎಫ್​ಐಆರ್ ದಾಖಲಾಗಿದೆ. ಏಕೆ ಎಂಬ ಪ್ರಶ್ನೆಗೆ ಈ ಸುದ್ದಿ ಓದಿ.

ಬೆಂಗಳೂರು ಯುವತಿ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮೇಲೆ ಎಫ್​ಐಆರ್ ದಾಖಲು
ಆಡುಗೋಡಿ ಪೊಲೀಸ್ ಠಾಣೆ
Follow us
Jagadisha B
| Updated By: ಆಯೇಷಾ ಬಾನು

Updated on: Aug 20, 2024 | 7:23 AM

ಬೆಂಗಳೂರು, ಆಗಸ್ಟ್​.20: ಹೆಚ್​ಎಸ್​ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿಗೆ ಈಗ ಸಂಕಷ್ಟ ಎದುರಾಗಿದೆ. ಸದ್ಯ ಅತ್ಯಾಚಾರ ವೇಳೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಹಾಗೂ ಆತನ ಸ್ನೇಹಿತನ ವಿರುದ್ಧ ಆಟೋ ಚಾಲಕ ದೂರು ನೀಡಿದ್ದು ದೂರಿನ ಮೇರೆಗೆ ಆಡುಗೋಡಿ ಸಂಚಾರಿ ಠಾಣೆಯಲ್ಲಿ (Adugodi Police Station) ಎಫ್​ಐಆರ್ ದಾಖಲಾಗಿದೆ.

ಸಂತ್ರಸ್ತೆ ವಿರುದ್ಧ ಪ್ರಕರಣ ದಾಖಲಾಗಿದ್ಯಾಕೆ?

ಡ್ರಾಪ್​ಗಾಗಿ ಸಂತ್ರಸ್ತೆ ಬೈಕ್​ನಲ್ಲಿ ತೆರಳುವ ಮುನ್ನ ಅಂದು ರಾತ್ರಿ (ಆಗಸ್ಟ್​.17) ಕೊರಮಂಗಲಕ್ಕೆ ಗೆಳೆಯನ ಜೊತೆ ಬಂದಿದ್ದಳು. ಊಟ ಮುಗಿಸಿಕೊಂಡು ಗೆಳೆಯನ ಜೊತೆ ಕಾರಿನಲ್ಲಿ ತೆರಳುವಾಗ ತಾನೇ ಕಾರು ಚಾಲನೆ ಮಾಡಿಕೊಂಡು ಹೋಗಿದ್ದಳು. ಈ ವೇಳೆ ಟಾನಿಕ್ ಬಳಿಯ ಮಂಗಳ ಜಂಕ್ಷನ್ ಬಳಿ ಕಾರು ಅಪಘಾತವಾಗಿದೆ. ಅಪಘಾತದಲ್ಲಿ ಒಂದಲ್ಲಾ ಎರಡಲ್ಲ‌ ಮೂರು ವಾಹನಗಳು ಜಖಂ ಆಗಿವೆ. ಎರಡು ಆಟೋ ಹಾಗೂ ಒಂದು ಬೈಕ್​ಗೆ ಡಿಕ್ಕಿ ಹೊಡೆದು ಕಾರನ್ನೂ ನಿಲ್ಲಿಸದೆ ಫೋರಂ ಮಾಲ್ ಕಡೆ ಚಲಾಯಿಸಿಕೊಂಡು ಹೋಗಿದ್ದಾಳೆ. ತಕ್ಷಣವೇ ಜಖಂ ಆಗಿದ್ದ ಎರಡು ಆಟೋಗಳು ಕಾರನ್ನು ಫಾಲೋ ಮಾಡಿ ಪ್ರಶ್ನಿಸಿದ್ದಾರೆ. ಆಗ ಕಾರಿನಿಂದ ಇಳಿದ ಸಂತ್ರಸ್ತೆ ಏಕಾಏಕಿ ಕಾರು ಅಲ್ಲೇ ಬಿಟ್ಟು ತೆರಳಿದ್ದಾಳೆ. ಆಗ ಆಕೆ ಸ್ನೇಹಿತ ಚಾಲಕರ ಜೊತೆ ವಾದ ಮಾಡಿ ಪರಿಸ್ಥಿತಿ ನಿಭಾಯಿಸಿ ಬಳಿಕ ಯುವತಿಗಾಗಿ ಹುಡುಕಾಡಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ನಗರದ ಹಲವೆಡೆ ಬಲಿಗಾಗಿ ಕಾಯುತ್ತಿವೆ ಬೃಹತ್ ಮರಗಳು, ಹದಿನೈದು ದಿನದಲ್ಲಿ ಏಳು ಜನರ ಮೇಲೆ ಬಿದ್ದ ಮರ

ಅಪರಿಚಿತ ವ್ಯಕ್ತಿಯಿಂದ ಡ್ರಾಪ್ ಪಡೆದ ಯುವತಿ

ಇನ್ನು ಯುವತಿಯನ್ನು ಹುಡುಕಾಡುವಾಗ ಯುವತಿ ರಸ್ತೆ ಬಳಿ ಹೋಗಿ ಡ್ರಾಪ್ ಕೇಳುತ್ತಿದ್ದದ್ದನ್ನು ನೋಡಿದ ಸ್ನೇಹಿತ ವಿಚಾರಿಸಿದಾಗ, ಯುವತಿ ತಾನು ಮೊಬೈಲ್ ಅನ್ನು ಪಬ್​ನಲ್ಲೇ ಬಿಟ್ಟು ಬಂದಿದ್ದೇನೆ ಎಂದು ತಿಳಿಸಿದ್ದಾಳೆ. ಈ ವೇಳೆ ಇಬ್ಬರೂ ಒಬ್ಬರಿಗೊಬ್ಬರು ತಪ್ಪಿಕೊಂಡು ಸಮಾಧಾನ ಮಾಡಿಕೊಂಡಿದ್ದಾರೆ. ನಂತರ ಅಪರಿಚಿತ ವ್ಯಕ್ತಿಯಿಂದ ಡ್ರಾಪ್ ಕೇಳಿ ಯುವತಿ ಅಲ್ಲಿಂದ ಹೊರಟಿದ್ದಾಳೆ. ಈ ವೇಳೆ ಯುವತಿಯ ಮೇಲೆ ಅತ್ಯಾಚಾರದ ಯತ್ನ ನಡೆದಿದೆ. ಸದ್ಯ ಯುವತಿ ಹಾಗೂ ಆಕೆಯ ಸ್ನೇಹಿತನ ವಿರುದ್ಧ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಜಾಗರೂಕತೆ ಮತ್ತು ಅತಿಯಾದ ಚಾಲನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಚೇತರಿಕೆಗೊಳ್ತಿದ್ದಂತೆಯೆ ಕೇಸ್ ಸಂಬಂಧ ವಿಚಾರಣೆ ನಡೆಸಲಾಗುವುದು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ