ಬೆಂಗಳೂರು, ನ.21: ರಾತ್ರಿ ವೇಳೆ ಹಾಸ್ಟೆಲ್‌ಗೆ ಹೋಗಿ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ (sexual harassment) ನೀಡುತ್ತಿರುವ ಆರೋಪ ಒಕ್ಕಲಿಗ(Vokkaliga) ರ ಸಂಘದ ನಿರ್ದೇಶಕರಾದ ಗಂಗಾಧರ್ ಹಾಗೂ ರಾಜು ಎಂಬುವವರ ವಿರುದ್ಧ ಕೇಳಿಬಂದಿದೆ. ಶ್ರೀಗಂಧಕಾವಲಿ (Srigandadakavalu)ನಲ್ಲಿರುವ ಒಕ್ಕಲಿಗರ ಸಂಘದ ವಿದ್ಯಾರ್ಥಿನಿಯರ ಹಾಸ್ಟೆಲ್(Hostel)ನಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಒಕ್ಕಲಿಗರ ಸಂಘದ ಅಧ್ಯಕ್ಷರಿಗೆ ಕೆಲ ನಿರ್ದೇಶಕರು ದೂರು ನೀಡಿದ್ದಾರೆ. ಅಲ್ಲದೆ ಈ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳನ್ನೂ ಕೂಡ ನೀಡಿದ್ದಾರೆ.
ಇನ್ನು ಲೈಂಗಿಕ ದೌರ್ಜನ್ಯ ಸಂಬಂಧ ಲಿಖಿತ ರೂಪದಲ್ಲಿ ಕೆಲ ನಿರ್ದೇಶಕರುಗಳು ದೂರು ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷರು, ಈ ಬಗ್ಗೆ ಪರಿಶೀಲಿಸಿ ತಪ್ಪು ಕಂಡುಬಂದಲ್ಲಿ ಆ ಕುರಿತು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಡಿ.ಹನುಮಂತಯ್ಯ ಭರವಸೆ ನೀಡಿದ್ದಾರೆ. ಆದಷ್ಟು ಬೇಗ ಈ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ದ ಕಠೀಣ ಕ್ರಮ ಕೈಗೊಳ್ಳಬೇಕಿದ್ದು, ಜೊತೆಗೆ ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕಾಗಿದೆ.
ಇದನ್ನೂ ಓದಿ:ಇಂಟರ್ ವ್ಯೂ ಇದೆ ಎಂದು ಹೊಟೇಲ್ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ, ಉಪನ್ಯಾಸಕ ಅರೆಸ್ಟ್
ಬೆಂಗಳೂರು: ವಿದ್ಯಾರ್ಥಿನಿಯನ್ನು ಇಂಟರ್ ವ್ಯೂ ಇದೆ ಎಂದು ಹೊಟೇಲ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಖಾಸಗಿ ಕಾಲೇಜಿನ ಉಪನ್ಯಾಸಕನನ್ನು ಬೆಂಗಳೂರಿನ ಗಂಗಮ್ಮನಗುಡಿ ಠಾಣೆ ಪೊಲೀಸರು ಬಂಧಿಸಿದ್ದ ಘಟನೆ ನಡೆದಿತ್ತು. ಉಪನ್ಯಾಸಕ ಮದನ್ ಕುಮಾರ್ ಬಂಧಿತ ಆರೋಪಿ. ಇತನ ಬಳಿ ವಿದ್ಯಾರ್ಥಿನಿ ಪಾರ್ಟ್ ಟೈಮ್ ಕೆಲಸ ಕೊಡಿಸುವಂತೆ ಕೇಳಿದ್ದರು. ಈ ಹಿನ್ನಲೆ ಹೊಟೇಲ್ಗೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದ ಘಟನೆ ನಡೆದಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:14 pm, Tue, 21 November 23