AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲ್ಕ್ ಬೋರ್ಡ್ ಟ್ರಾಫಿಕ್​ಗೆ ಶೀಘ್ರ ಮುಕ್ತಿ: ಡಬಲ್ ಡೆಕ್ಕರ್ ಫ್ಲೈಓವರ್ ಮತ್ತೊಂದು ಭಾಗ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿನ ವಾಹನ ದಟ್ಟಣೆ ಸಮಸ್ಯೆಗೆ ಶೀಘ್ರ ಪರಿಹಾರ ಸಿಗಲಿದೆ. ಬಹುನಿರೀಕ್ಷಿತ ಡಬಲ್ ಡೆಕ್ಕರ್ ಫ್ಲೈಓವರ್‌ನ ಎರಡನೇ ಭಾಗ ಮಾರ್ಚ್ ಅಂತ್ಯ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ. ಈ 3.36 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಸಂಪೂರ್ಣವಾಗಿ ಲಭ್ಯವಾದರೆ, ಸಿಲ್ಕ್ ಬೋರ್ಡ್ ಪ್ರದೇಶದಲ್ಲಿನ ಟ್ರಾಫಿಕ್ ದಟ್ಟಣೆ ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆ ಇದೆ.

ಸಿಲ್ಕ್ ಬೋರ್ಡ್ ಟ್ರಾಫಿಕ್​ಗೆ ಶೀಘ್ರ ಮುಕ್ತಿ: ಡಬಲ್ ಡೆಕ್ಕರ್ ಫ್ಲೈಓವರ್ ಮತ್ತೊಂದು ಭಾಗ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್
ಡಬಲ್ ಡೆಕ್ಕರ್ ಫ್ಲೈಓವರ್ ಮತ್ತೊಂದು ಭಾಗದ ಕಾಮಗಾರಿ ಬಹುತೇಕ ಪೂರ್ಣImage Credit source: tv9
ಕಿರಣ್​ ಸೂರ್ಯ
| Edited By: |

Updated on: Mar 13, 2026 | 7:45 AM

Share

ಬೆಂಗಳೂರು, ಮಾರ್ಚ್ 13: ಬೆಂಗಳೂರಿನ (Bangalore) ಅತ್ಯಂತ ದಟ್ಟಣೆಯ ಮತ್ತು ಟ್ರಾಫಿಕ್ ಸಮಸ್ಯೆಗೆ ಕುಪ್ರಸಿದ್ಧವಾದ ಪ್ರದೇಶಗಳಲ್ಲಿ ಸಿಲ್ಕ್ ಬೋರ್ಡ್ ಜಂಕ್ಷನ್ ಪ್ರಮುಖವಾಗಿದೆ. ಈ ಭಾಗದಲ್ಲಿ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್‌ನಲ್ಲಿ ಸಿಲುಕುವುದು ಸಾಮಾನ್ಯವಾಗಿದೆ. ಆದರೆ ಈಗ ಈ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗುವ ಸಾಧ್ಯತೆ ಇದ್ದು, ಈ ಭಾಗದ ಸವಾರರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಶುಭ ಸುದ್ದಿ ನೀಡಿದೆ. ಸಿಲ್ಕ್ ಬೋರ್ಡ್ ಭಾಗದ ಬಹುನಿರೀಕ್ಷಿತ ಡಬಲ್ ಡೆಕ್ಕರ್ ಫ್ಲೈಓವರ್‌ನ ಇನ್ನೊಂದು ಭಾಗವನ್ನು ಸಂಚಾರಕ್ಕೆ ತೆರೆಯಲು ಬಿಎಂಆರ್‌ಸಿಎಲ್ ಸಿದ್ಧತೆ ನಡೆಸಿದೆ. ಈ ಮಾರ್ಗವನ್ನು ಮಾರ್ಚ್ ಕೊನೆಯ ವಾರ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸುವ ಸಾಧ್ಯತೆ ಇದೆ.

ಸುಮಾರು 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಡಬಲ್ ಡೆಕ್ಕರ್ ಫ್ಲೈಓವರ್ 3.36 ಕಿಲೋಮೀಟರ್ ಉದ್ದ ಹೊಂದಿದ್ದು, ಲೂಪ್ ಮತ್ತು ಇಳಿಜಾರುಗಳನ್ನು ಸೇರಿಸಿ ಒಟ್ಟು 5.12 ಕಿಲೋಮೀಟರ್ ವಿಸ್ತೀರ್ಣ ಹೊಂದಿದೆ.

2024ರಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಗಿಗುಡ್ಡದಿಂದ ಎಚ್‌ಎಸ್‌ಆರ್ ಲೇಔಟ್, ಹೊಸೂರು ರಸ್ತೆ ಮತ್ತು ಬೊಮ್ಮನಹಳ್ಳಿ ಮಾರ್ಗದ ಡಬಲ್ ಡೆಕ್ಕರ್ ಫ್ಲೈಓವರ್‌ನ ಒಂದು ಭಾಗವನ್ನು ಪ್ರಾಯೋಗಿಕವಾಗಿ ಸಂಚಾರಕ್ಕೆ ಮುಕ್ತಗೊಳಿಸಿದ್ದರು. ಇದರಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿ ಹೆಚ್ಚಾಗುತ್ತಿದ್ದ ಟ್ರಾಫಿಕ್ ಸಮಸ್ಯೆ ಕೆಲ ಮಟ್ಟಿಗೆ ಕಡಿಮೆಯಾಗಿತ್ತು.

ಡಬಲ್ ಡೆಕ್ಕರ್ ಫ್ಲೈಓವರ್ ಮತ್ತೊಂದು ಭಾಗದ ಕಾಮಗಾರಿ ಬಹುತೇಕ ಪೂರ್ಣ

ಆದರೆ ಫ್ಲೈಓವರ್‌ನ ಇನ್ನೊಂದು ಭಾಗದ ಕಾಮಗಾರಿ ಪೂರ್ಣಗೊಳ್ಳದ ಕಾರಣ ಮಾರ್ಗವನ್ನು ಸಂಪೂರ್ಣವಾಗಿ ಬಳಸಲು ಸಾಧ್ಯವಾಗಿರಲಿಲ್ಲ. ಇದರ ಪರಿಣಾಮವಾಗಿ ಎಚ್‌ಎಸ್‌ಆರ್ ಲೇಔಟ್ ಕಡೆಯಿಂದ ರಾಗಿಗುಡ್ಡ ಮಾರ್ಗಕ್ಕೆ ಸಂಚರಿಸುವ ವಾಹನ ಸವಾರರು ಇನ್ನೂ ಸಿಲ್ಕ್ ಬೋರ್ಡ್ ಜಂಕ್ಷನ್, ಬಿಟಿಎಂ ಲೇಔಟ್ ಜಂಕ್ಷನ್ ಸೇರಿದಂತೆ ಹಲವು ಸ್ಥಳಗಳಲ್ಲಿ ಟ್ರಾಫಿಕ್ ದಟ್ಟಣೆಯನ್ನು ಎದುರಿಸುತ್ತಿದ್ದರು. ಪ್ರಸ್ತುತ ಫ್ಲೈಓವರ್‌ನ ಸಿವಿಲ್ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಪೇಂಟಿಂಗ್ ಮತ್ತು ಎಲೆಕ್ಟ್ರಿಕಲ್ ಕೆಲಸಗಳು ಮಾತ್ರ ಬಾಕಿಯಿವೆ. ಈ ಕಾರ್ಯಗಳು ಈ ತಿಂಗಳ ಕೊನೆಯೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಈ ಮಾರ್ಗ ಸಂಚಾರಕ್ಕೆ ತೆರೆಯಲಾದ ನಂತರ ಔಟರ್ ರಿಂಗ್ ರೋಡ್ ಹಾಗೂ ಎಚ್‌ಎಸ್‌ಆರ್ ಲೇಔಟ್ ಭಾಗದಿಂದ ಬರುವ ವಾಹನ ಸವಾರರು ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನ ಹಿಂಭಾಗದಲ್ಲೇ ಫ್ಲೈಓವರ್ ಮೂಲಕ ನೇರವಾಗಿ ಸಾಗುವ ಅವಕಾಶ ದೊರೆಯಲಿದೆ. ಇದರಿಂದ ಈ ಭಾಗದಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆ ಸುಮಾರು ಅರ್ಧದಷ್ಟು ಕಡಿಮೆಯಾಗಬಹುದು ಎಂದು ವಾಹನ ಸವಾರರು ಆಶಾಭಾವ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಜನಗಳೇ ಗ್ಯಾಸ್ ಸಿಲಿಂಡರ್ ಚಿಂತೆ ಬಿಡಿ: ಆಹಾರ ಇಲಾಖೆ ಆಯುಕ್ತರ ಸ್ಪಷ್ಟನೆ ಕೇಳಿ

ಒಟ್ಟಿನಲ್ಲಿ, ಹಲವು ವರ್ಷಗಳಿಂದ ಟ್ರಾಫಿಕ್ ಸಮಸ್ಯೆಯಿಂದ ಕಂಗೆಟ್ಟಿದ್ದ ಸಿಲ್ಕ್ ಬೋರ್ಡ್ ಭಾಗದ ಜನರಿಗೆ ಮತ್ತು ವಾಹನ ಸವಾರರಿಗೆ ಶೀಘ್ರದಲ್ಲೇ ದೊಡ್ಡ ಮಟ್ಟದ ಪರಿಹಾರ ಸಿಗುವ ನಿರೀಕ್ಷೆ ಮೂಡಿದೆ. ಎಲ್ಲವೂ ಯೋಜನೆಯಂತೆ ನಡೆದರೆ ಮಾರ್ಚ್ ಕೊನೆಯ ವಾರ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಈ ಮಾರ್ಗ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ