ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿ ಆರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

|

Updated on: Feb 23, 2023 | 4:05 PM

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸೇರಿದಂತೆ ಆರು ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈಗಾಗಲೇ KSRP 1ನೇ ಬೆಟಾಲಿಯನ್ ಕಮಾಂಡೆಂಟ್ ಆಗಿರುವ ವಂಶಿಕೃಷ್ಣ ಅವರಿಗೆ ವೈರ್​ಲೆಸ್​ ಎಸ್​ಪಿ ಹುದ್ದೆ ಹೆಚ್ಚುವರಿ ಹೊಣೆ ನೀಡಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿ ಆರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಎನ್.ಶಶಿಕುಮಾರ್ (ಎಡಚಿತ್ರ)
Follow us on

ಬೆಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ (N. Shashi Kumar) ಸೇರಿದಂತೆ ಆರು ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ (IPS officers transfers) ಮಾಡಲಾಗಿದ್ದು, ಓರ್ವ ಅಧಿಕಾರಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ನೇಮಕ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗುಪ್ತಚರ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಡೆಕ್ಕ ಕಿಶೋರ್ ಬಾಬು ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ದಕ್ಷಿಣ ವಿಭಾಗದ ಟ್ರಾಫಿಕ್​ ಡಿಸಿಪಿಯಾಗಿ ಮೊಹಮ್ಮದ್ ಸುಜೀತ, ಬೆಂಗಳೂರು ನಗರ ಸಿಎಆರ್​ನ ಡಿಸಿಪಿಯಾಗಿ ಅರುಣಾಂಗ್ಷು ಗಿರಿ ಅವರನ್ನು ನೇಮಕ ಮಾಡಲಾಗಿದೆ. ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ (ಎಸ್​ಪಿ)ಯಾಗಿ ಯಶೋಧಾ ವಂಟಗೋಡಿ ಅವರನ್ನು ನೇಮಕ ಮಾಡಲಾಗಿದೆ. ಇನ್ನು, KSRP 1ನೇ ಬೆಟಾಲಿಯನ್ ಕಮಾಂಡೆಂಟ್ ಆಗಿರುವ ಡಾ.ಕೋನ ವಂಶಿಕೃಷ್ಣ ಅವರಿಗೆ ವೈರ್​ಲೆಸ್​ ಎಸ್​ಪಿ ಹುದ್ದೆ ಹೆಚ್ಚುವರಿ ಹೊಣೆಯಾಗಿ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:01 pm, Thu, 23 February 23