ಆರು ವರ್ಷ ಪ್ರೀತಿಸಿ ಬ್ರೇಕಪ್ ಎಂದ ಯುವತಿ; ಮನನೊಂದ ಯುವಕ ಆತ್ಮಹತ್ಯೆ

ಪ್ರೀತಿಸಿ ಆರು ವರ್ಷದ ನಂತರ ಯುವತಿ ಕೈಕೊಟ್ಟಳೆಂದು ಮನನೊಂದು ಯುವಕನೊಬ್ಬ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ಬೆಂಗಳೂರಿನ ಉಲ್ಲಾಳ ಉಪನಗರದಲ್ಲಿ ನಡೆದಿದೆ.

ಆರು ವರ್ಷ ಪ್ರೀತಿಸಿ ಬ್ರೇಕಪ್ ಎಂದ ಯುವತಿ; ಮನನೊಂದ ಯುವಕ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ರೋಹಿತ್
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 19, 2023 | 7:54 PM

ಬೆಂಗಳೂರು: ಇವರಿಬ್ಬರು ನಾನು ನಿನ್ನಗಾಗಿ, ನೀನು ನನಗಾಗಿ ಎಂದು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಇವರಿಬ್ಬರ ನಡುವೆ ಜಗಳ ನಡೆದಿದ್ದು, ಆರು ವರ್ಷಗಳ ಪ್ರೀತಿಗೆ ಯುವತಿ ಎಳ್ಳು ನೀರು ಬಿಟ್ಟಿದ್ದಾಳೆ (Love Breakup). ಇದರಿಂದ ಮನನೊಂದ ಪ್ರಿಯತಮ, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ. ಈ ಘಟನೆ ಬೆಂಗಳೂರು ನಗರದ ಉಲ್ಲಾಳ ಉಪನಗರದಲ್ಲಿ ನಡೆದಿದೆ. ಕೊರಿಯರ್ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ರೋಹಿತ್(25) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಲ್ಲಾಳ ಉಪನಗರದ ನಿವಾಸಿ ರೋಹಿತ್ ಮತ್ತು ಕಾಲೇಜು ವ್ಯಾಸಾಂಗ ಮಾಡುತ್ತಿದ್ದ ಯುವತಿಯೋರ್ವಳು ಕಳೆದ ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಜೋಡಿ ಹಕ್ಕಿಗಳಂತೆ ಇದ್ದರು. ಆದರೆ ಇತ್ತೀಚೆಗೆ ಭೇಟಿ ಮಾಡಿದಾಗ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಆರು ವರ್ಷಗಳ ಪ್ರೀತಿಗೆ ಎಳ್ಳು ನೀರು ಬಿಡಲು ನಿರ್ಧರಿಸಿದ ಯುವತಿ, ನಾವು ಬ್ರೇಕಪ್ ಮಾಡಿಕೊಳ್ಳೋಣ ಎಂದಿದ್ದಾಳೆ. ಆದರೆ ನಿತ್ಯ ಜಿಮ್ ಮಾಡಿಕೊಂಡು ದಷ್ಟಪುಷ್ಟವಾಗಿದ್ದ ರೋಹಿತ್, ಆಕೆಯನ್ನು ಬಿಟ್ಟಿರಲಾಗದೆ ಕೊರಗುತ್ತಿದ್ದನು.

ಇದನ್ನೂ ಓದಿ: ಪಾಂಡವಪುರಕ್ಕೂ ಕಾಲಿಟ್ಟ ಸೈಬರ್ ಚೋರರು: ಕಾರು ಗಿಫ್ಟ್ ಬಂದಿರುವುದಾಗಿ ಬಡ ರೈತನಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ!

ಯುವತಿ ಬ್ರೇಕಪ್ ಮಾಡಿಕೊಂಡ ನಂತರ ಆಕೆ ರೋಹಿತ್​ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದಳು. ಹೀಗಾಗಿ ಆಕೆಯ ಮನವೋಲಿಸುವ ನಿಟ್ಟಿನಲ್ಲಿ ರೋಹಿತ್ ಆಕೆ ವ್ಯಾಸಾಂಗ ಮಾಡುತ್ತಿದ್ದ ಕಾಲೇಜು ಬಳಿಯೂ ಹೋಗಿದ್ದನು. ಅಲ್ಲಿ ಆಕೆಯನ್ನು ಮಾತನಾಡಿಸಲು ಯತ್ನಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಮನನೊಂದ ರೋಹಿತ್ ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮನೆಮಗನನ್ನು ನೋಡಿದ ಪೋಷಕರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಜ್ಞಾನಭಾರತಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Thu, 19 January 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್