AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಜೂನ್ 18 ರಿಂದ ಅನಿರ್ದಿಷ್ಟಾವಧಿ ಮುಷ್ಕರ

ವಿವಿಧ ಸರ್ಕಾರಿ ಅಧಿಕಾರಿಗಳ ಕಿರುಕುಳ ಮತ್ತು ತಾರತಮ್ಯದ ದಂಡನೆಗಳನ್ನು ಖಂಡಿಸಿ ಬೆಂಗಳೂರಿನ ಸಣ್ಣ ವ್ಯಾಪಾರಿಗಳು ಹಾಗೂ ಬೀದಿ ಬದಿ ವ್ಯಾಪಾರಿಗಳು ಜೂನ್ 18 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದ್ದಾರೆ. ಇದರಿಂದಾಗಿ ರಾಜಧಾನಿಯಾದ್ಯಂತ ಬೇಕರಿಗಳು, ಕಾಂಡಿಮೆಂಟ್ಸ್ ಹಾಗೂ ಸಣ್ಣ ಅಂಗಡಿಗಳು ಸಂಪೂರ್ಣ ಬಂದ್ ಆಗಲಿದ್ದು, ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಕಿರುಕುಳ ನಿಲ್ಲುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಸಂಘಟನೆಗಳು ತಿಳಿಸಿವೆ.

ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಜೂನ್ 18 ರಿಂದ ಅನಿರ್ದಿಷ್ಟಾವಧಿ ಮುಷ್ಕರ
ಸಾಮದರ್ಭಿಕ ಚಿತ್ರImage Credit source: gettyimages.com
ಭಾವನಾ ಹೆಗಡೆ
|

Updated on: Jun 17, 2026 | 8:46 AM

Share

ಬೆಂಗಳೂರು, ಜೂನ್ 17: ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳವನ್ನು ಖಂಡಿಸಿ ಮತ್ತು ತಮಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಬೆಂಗಳೂರಿನ (Bengaluru) ಸುಮಾರು 58,000ಕ್ಕೂ ಹೆಚ್ಚು ಬೇಕರಿ, ಬೀಡಾ ಅಂಗಡಿ ಮಾಲೀಕರು ಹಾಗೂ ಬೀದಿ ಬದಿ ವ್ಯಾಪಾರಿಗಳು ಜೂನ್ 18ರಿಂದ (ಗುರುವಾರ) ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಮುಖ್ಯಾಂಶಗಳು

  • ಅಧಿಕಾರಿಗಳ ಕಿರುಕುಳ ಖಂಡಿಸಿ ಸಣ್ಣ ವ್ಯಾಪಾರಿಗಳು ಮುಷ್ಕರಕ್ಕೆ ಕರೆ ನೀಡಿದ್ದಾರೆ.
  • ಜೂನ್ 18 ರಿಂದ ಬೆಂಗಳೂರಿನಾದ್ಯಂತ ಬೇಕರಿ, ಸಣ್ಣ ಅಂಗಡಿಗಳು ಬಂದ್ ಆಗಲಿವೆ.
  • ಪ್ಲಾಸ್ಟಿಕ್ ನಿಷೇಧ ಹೆಸರಿನಲ್ಲಿ ತಾರತಮ್ಯದ ದಂಡ ವಿಧಿಸುತ್ತಿರುವುದಕ್ಕೆ ವ್ಯಾಪಾರಿಗಳ ಆಕ್ರೋಶ.

ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯ ಅಧ್ಯಕ್ಷರಾದ ರವಿಶೆಟ್ಟಿ ಬೈಂದೂರು ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಣ್ಣ ವ್ಯಾಪಾರಿಗಳು ಕಾನೂನುಬದ್ಧವಾಗಿ ವ್ಯಾಪಾರ ಮಾಡುತ್ತಾ, ತೆರಿಗೆ ಪಾವತಿಸುತ್ತಿದ್ದರೂ ಸಹ ಅಧಿಕಾರಿಗಳಿಂದ ನಿರಂತರ ತಪಾಸಣೆ, ದಂಡ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

ರಾಜ್ಯಾದ್ಯಂತ ಭಾಗಶಃ ಬೆಂಬಲ

ಈ ಮುಷ್ಕರದ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಎಲ್ಲಾ ಬೇಕರಿಗಳು ಮತ್ತು ಸಣ್ಣ ಅಂಗಡಿಗಳು ಸಂಪೂರ್ಣ ಬಂದ್ ಆಗಲಿವೆ. ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದ್ದರೂ, ಕರ್ನಾಟಕದ ಇತರ ಭಾಗಗಳಲ್ಲಿ ಭಾಗಶಃ ಸಹಕರಿಸುವ ಸಾಧ್ಯತೆಯಿದೆ ಎಂದು ಪರಿಷತ್ ತಿಳಿಸಿದೆ.

ಅಧಿಕಾರಿಗಳ ಕಿರುಕುಳದ ವಿರುದ್ಧ ವ್ಯಾಪಾರಿಗಳ ಆಕ್ರೋಶ

ಸಣ್ಣ ವ್ಯಾಪಾರಿಗಳ ಅಸೋಸಿಯೇಷನ್ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ. ವ್ಯಾಪಾರಿಗಳನ್ನು ಪೊಲೀಸ್ ಠಾಣೆ ಹಾಗೂ ಪಾಲಿಕೆ ಕಚೇರಿಗಳಿಗೆ ಅಲೆದಾಡಿಸಿ, ಸುದೀರ್ಘ ವಿಚಾರಣೆ ನಡೆಸಿ ನಿಂದಿಸಲಾಗುತ್ತಿದೆ. ಅಲ್ಲದೆ ಯಾವುದೇ ಮುನ್ಸೂಚನೆ ಇಲ್ಲದೆ ಅಂಗಡಿಗಳನ್ನು ಮುಚ್ಚಿಸಲಾಗುತ್ತಿದೆ. ನಿಷೇಧಿತ ಪ್ಲಾಸ್ಟಿಕ್ ಕವರ್‌ಗಳನ್ನು ಉತ್ಪಾದಿಸುವ ದೊಡ್ಡ ಸಂಸ್ಥೆಗಳು ಮತ್ತು ಸಗಟು ವ್ಯಾಪಾರಿಗಳನ್ನು ಬಿಟ್ಟು, ಸಣ್ಣ ಚಿಲ್ಲರೆ ವ್ಯಾಪಾರಿಗಳ ಮೇಲೆ ಅಧಿಕಾರಿಗಳು ಭಾರಿ ಮೊತ್ತದ ದಂಡ ಹೇರುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ ರಸ್ತೆ ಗುಂಡಿಗಳ ಪತ್ತೆಗೆ ಎಐ ಮೊರೆಹೋದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ಅಲ್ಲದೆ ಸರ್ಕಾರದಿಂದ ಅನುಮತಿ ಪಡೆದ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದರೂ ಸಹ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ವ್ಯಾಪಾರಿಗಳು ದೂರಿದ್ದಾರೆ. ಹೀಗಾಗಿ ನಿಯಮಾವಳಿಗಳ ಹೆಸರಿನಲ್ಲಿ ನಡೆಯುತ್ತಿರುವ ಈ ಅನಗತ್ಯ ಕಿರುಕುಳ ನಿಲ್ಲುವವರೆಗೂ ಮುಷ್ಕರ ಮುಂದುವರಿಯಲಿದೆ ಎಂದು ಸಂಘಟನೆಗಳು ಎಚ್ಚರಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್