AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಎಸ್​ಎಂವಿಟಿ ರೈಲು ನಿಲ್ದಾಣದಲ್ಲಿ ಹೊಸ ನಿಯಮ ಜಾರಿ, ಪ್ರಯಾಣಿಕರಿಗೆ ಸಂಕಷ್ಟ

ಜನರು ರೈಲಿನಲ್ಲಿ ಪ್ರಯಾಣ ಮಾಡುವುದು ಟಿಕೆಟ್ ದರ ಕಡಿಮೆ ಇರುತ್ತದೆ, ಆರಾಮವಾಗಿ ಗಮ್ಯ ತಲುಪಬಹುದು ಎಂದು. ಆದರೆ ಇದೀಗ ರೈಲ್ವೆ ಇಲಾಖೆ ಬೆಂಗಳೂರಿನ ಎಸ್ಎಂವಿಟಿ ರೈಲ್ವೆ ಸ್ಟೇಷನ್​ಗೆ ಬಂದು ಹೋಗುವ ವಾಹನಗಳಿಗೆ ಪಾರ್ಕಿಂಗ್ ಚಾರ್ಜ್ ವಿಧಿಸಲು ಮುಂದಾಗಿದೆ. ಇದಕ್ಕೆ ವಾಹನ ಸವಾರರು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು: ಎಸ್​ಎಂವಿಟಿ ರೈಲು ನಿಲ್ದಾಣದಲ್ಲಿ ಹೊಸ ನಿಯಮ ಜಾರಿ, ಪ್ರಯಾಣಿಕರಿಗೆ ಸಂಕಷ್ಟ
ಎಸ್​ಎಂವಿಟಿ ರೈಲು ನಿಲ್ದಾಣ
ಕಿರಣ್​ ಸೂರ್ಯ
| Edited By: |

Updated on: Sep 10, 2024 | 6:58 AM

Share

ಬೆಂಗಳೂರು, ಸೆಪ್ಟೆಂಬರ್ 10: ಬೆಂಗಳೂರಿನ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣಕ್ಕೆ ಪ್ರಯಾಣಿಕರನ್ನು ಇಳಿಸಲು ಮತ್ತು ಕರೆದುಕೊಂಡು ಹೋಗಲು ಬರುವ ವಾಹನಗಳು ಸೋಮವಾರದಿಂದ ಪಾರ್ಕಿಂಗ್ ಶುಲ್ಕ ಕಟ್ಟಲೇಬೇಕಾಗಿದೆ. ಸರ್​​​ಎಂ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣದಲ್ಲಿ ಇದೀಗ ಹೊಸ ನಿಯಮ ಜಾರಿಯಾಗಿದೆ. ನಿಲ್ದಾಣದ ಆವರಣದಲ್ಲಿ ಹತ್ತು ನಿಮಿಷಕ್ಕಿಂತ ಹೆಚ್ಚು ಕಾಲ ವಾಹನಗಳು ಇದ್ದರೆ ಪಾರ್ಕಿಂಗ್ ಹಣ ನೀಡಬೇಕು. ಹತ್ತು ನಿಮಿಷಗಳ ಒಳಗೆ ಪಿಕ್ ಅಪ್, ಡ್ರಾಪ್ ಮಾಡಿ ಹೋದರೆ ಯಾವುದೇ ಶುಲ್ಕವಿಲ್ಲ. ಹನ್ನೊಂದು ನಿಮಿಷ ಆದರೂ ಹಣ ಪಾವತಿ ಮಾಡಲೇಬೇಕು.

ಒಂದು ವೇಳೆ ಸ್ಟೇಷನ್ ಒಳಗೆ ಬಂದು ಹತ್ತು ನಿಮಿಷಕ್ಕಿಂತ ಹೆಚ್ಚಿನ ಸಮಯ ಆಗುತ್ತದೆ ಎಂದಾದರೆ, ಅಂತಹ ವಾಹನ ಮಾಲೀಕರು ಸ್ಟೇಷನ್​ನಲ್ಲಿರುವ ಪಾರ್ಕಿಂಗ್ ಸ್ಟ್ಯಾಂಡ್​​ನಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಬಹುದು.

ರೈಲ್ವೆ ಸಚಿವ ಸೋಮಣ್ಣ ಏನಂತಾರೆ?

ಈ ಹೊಸ ನಿಯಮದ ಬಗ್ಗೆ ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಪ್ರಶ್ನಿಸಿದಾಗ, ರೈಲ್ವೆ ಅಧಿಕಾರಿಗಳ ಜೊತೆಗೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಎಸ್​​ಎಂವಿಟಿಯಲ್ಲಿ ಪಾರ್ಕಿಂಗ್ ಶುಲ್ಕ ಎಷ್ಟು?

  • ಹತ್ತು ನಿಮಿಷದಿಂದ ಇಪ್ಪತ್ತು ನಿಮಿಷಗಳ ವರೆಗೆ ದ್ವಿಚಕ್ರ ವಾಹನಗಳಿಗೆ ಒಂದು ವಾಹನಕ್ಕೆ 40 ರೂಪಾಯಿ. ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳಿಗೆ 50 ರೂಪಾಯಿ ನಿಗದಿಪಡಿಸಲಾಗಿದೆ.
  • 20 ರಿಂದ 30 ನಿಮಿಷಕ್ಕೆ ದ್ವಿಚಕ್ರ ವಾಹನಗಳಿಗೆ ಒಂದು ವಾಹನಕ್ಕೆ 100 ರೂಪಾಯಿ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳಿಗೆ 200 ರೂಪಾಯಿ ಶುಲ್ಕವಿದೆ.
  • 30 ನಿಮಿಷಗಳ ನಂತರ ದ್ವಿಚಕ್ರ ವಾಹನಗಳಿಗೆ ಒಂದು ವಾಹನಕ್ಕೆ 250 ರೂಪಾಯಿ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳಿಗೆ 500 ರೂಪಾಯಿ ಶುಲ್ಕವಿದೆ.

ದುಬಾರಿ ಪಾರ್ಕಿಂಗ್ ಶುಲ್ಕ

ರೈಲ್ವೆ ಇಲಾಖೆಯ ಹೊಸ ನಿಯಮಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರಿಯಾದ ಸಮಯಕ್ಕೆ ರೈಲುಗಳು ಬರುವುದಿಲ್ಲ. ಆ ಸಮಯದಲ್ಲಿ ತಂದೆ, ತಾಯಿಯನ್ನು ಕುಟುಂಬಸ್ಥರನ್ನು ಪಿಕ್ ಅಪ್ ಮಾಡಲು ಬಂದಿರುತ್ತೇವೆ. ಅದಕ್ಕೆ ಹಣ ಪಾವತಿ ಮಾಡಬೇಕು ಅಂದರೆ ಹೇಗೆ? ಅದೂ ಕೂಡ ಇಷ್ಟೊಂದು ದುಬಾರಿ ಶುಲ್ಕ ವಿಧಿಸಿದರೆ ಹೇಗೆ? ಇಲ್ಲಿ ದುಡಿದ ದುಡ್ಡನ್ನೆಲ್ಲ ಇವರಿಗೆ ನೀಡಿದರೆ ನಾವು ಜೀವನ ಮಾಡುವುದು ಹೇಗೆ ಎಂದು ಆಟೋ ಚಾಲಕರು ಮತ್ತು ಬೈಕ್ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Bengaluru SMVT Railway station Introduced high Parking Fees, waiting time is more than ten minutes, the fee is to be paid

ರೈಲ್ವೆ ಅಧಿಕಾರಿಗಳು ಹೇಳುವುದೇನು?

ವಾಹನ ಸವಾರರು ಪ್ರಯಾಣಿಕರನ್ನು, ತಮ್ಮವರನ್ನು ಪಿಕ್ ಅಪ್, ಡ್ರಾಪ್ ಮಾಡಲು ಬರುವ ವೇಳೆ ರೈಲ್ವೆ ಸ್ಟೇಷನ್​ನಲ್ಲಿ ಬೇಕಾಬಿಟ್ಟಿ ವಾಹನಗಳನ್ನು ಪಾರ್ಕ್ ಮಾಡಿ ಹೋಗಿ ಬಿಡುತ್ತಾರೆ. ಇದರಿಂದ ಪ್ರಯಾಣಿಕರಿಗೆ ತೊಂದರೆ ಆಗುತ್ತದೆ. ಅದಕ್ಕೆ ಈ ನಿಯಮ ‌ಜಾರಿಗೆ ತರಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಕಂಟೋನ್ಮೆಂಟ್​ ರೈಲು ನಿಲ್ದಾಣದ 2 ಪ್ಲಾಟ್​ಫಾರ್ಮ್ 92 ದಿನ ಬಂದ್: 44 ರೈಲುಗಳಿಗಿಲ್ಲ ನಿಲುಗಡೆ, ಇಲ್ಲಿದೆ ವಿವರ

ವಾಹನ ಸವಾರರು ಮಾತ್ರ ಈ ರೀತಿಯ ನಿಯಮ ಸರಿಯಲ್ಲ. ಇದರಿಂದ ತೊಂದರೆ ಆಗುತ್ತದೆ. ಹಣ ಪಾವತಿ ‌ಮಾಡಲು ಆಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ