AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡುಗೆ ವಿಷಯದಲ್ಲಿ ಅತ್ತೆ ಕಿರಿಕ್; ನೊಂದ ಸೊಸೆ ಸಾವಿಗೆ ಶರಣು!

ಬೆಂಗಳೂರಿನ ಅಬ್ಬಿಗೆರೆಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಸುಷ್ಮಾ ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆ ಅತ್ತೆಯಿಂದ ಅಡುಗೆ ವಿಚಾರದಲ್ಲಿ ಪದೇ ಪದೇ ಕಿರುಕುಳ ಅನುಭವಿಸುತ್ತಿದ್ದರು. ವರದಕ್ಷಿಣೆ ಕಿರುಕುಳ ಆರೋಪದಡಿ ಪತಿ ಪುನೀತ್ ಕುಮಾರ್ ಬಂಧಿತನಾಗಿದ್ದು, ಅತ್ತೆ ಪರಾರಿಯಾಗಿದ್ದಾರೆ. ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಅಡುಗೆ ವಿಷಯದಲ್ಲಿ ಅತ್ತೆ ಕಿರಿಕ್; ನೊಂದ ಸೊಸೆ ಸಾವಿಗೆ ಶರಣು!
ಸುಶ್ಮಾ ಮತ್ತು ಆಕೆಯ ಪತಿ ಪುನೀತ್ ಕುಮಾರ್Image Credit source: INDIA tv
ಭಾವನಾ ಹೆಗಡೆ
|

Updated on: Mar 04, 2026 | 2:41 PM

Share

ಬೆಂಗಳೂರು, ಮಾರ್ಚ್​ 04: ಕೌಟುಂಬಿಕ ಕಲಹದ ಹಿನ್ನೆಲೆ ಸಾಫ್ಟ್‌ವೇರ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಅಬ್ಬಿಗೆರೆ (Bengaluru) ಪ್ರದೇಶದಲ್ಲಿ ನಡೆದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅತ್ತೆಯ ಕಾಟದಿಂದ ಬೇಸತ್ತಿದ್ದ ಮಹಿಳೆ ಈ ನಿರ್ಧಾರ ತೆಗೆದುಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಅಡಿಗೆ ವಿಷಯಕ್ಕೆ ಅತ್ತೆಯಿಂದ ಕಿರುಕುಳ

ಬೆಂಗಳೂರು ನಿವಾಸಿ ಸುಶ್ಮಾ (35) ಡೆಲ್ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಐದು ವರ್ಷಗಳ ಹಿಂದೆ ಪುನೀತ್ ಕುಮಾರ್​ನನ್ನು ವಿವಾಹವಾಗಿದ್ದರು. ಈ ದಂಪತಿಗೆ ನಾಲ್ಕು ವರ್ಷದ ಮಗನೂ ಇದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯಲ್ಲಿ ಸಣ್ಣಪುಟ್ಟ ವಿಚಾರಗಳ ಕುರಿತಾಗಿ ಆಗಾಗ್ಗೆ ಕಲಹಗಳು ನಡೆಯುತ್ತಿದ್ದವು ಎನ್ನಲಾಗಿದೆ. ಮಂಗಳವಾರ ಅತ್ತೆ ಕಲ್ಪನಾ ಅವರೊಂದಿಗೆ ಅಡುಗೆ ಮಾಡುವ ವಿಚಾರದಲ್ಲಿ ವಾಗ್ವಾದ ಉಂಟಾಗಿತ್ತು. ಸುಶ್ಮಾ ಕುಟುಂಬದವರ ಆರೋಪದಂತೆ, ಆಕೆಯ ಅತ್ತೆ ಪದೇಪದೇ ಅಡುಗೆ ಮಾಡುವ ವಿಷಯದಲ್ಲಿ ಕಿರಿಕ್ ಮಾಡುತ್ತಿದ್ದು, ಇತರೆ ವಿಷಯಗಳಲ್ಲಿಯೂ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ ಹಾಡು ಹಗಲಲ್ಲೇ 59 ಲಕ್ಷ ರೂ. ಮೌಲ್ಯದ ಬೆಳ್ಳಿ ಕಳ್ಳತನ; ಸಿಬ್ಬಂದಿಯಿಂದಲೇ ಕೃತ್ಯ!

ಈ ಪರಿಸ್ಥಿತಿಯಿಂದ ಮಾನಸಿಕವಾಗಿ ಅಸಹನೀಯಗೊಂಡ ಸುಶ್ಮಾ, ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯ ನಂತರ ತಿಳಿಸಿದ್ದಾರೆ. ಇದೀಗ ವರದಕ್ಷಿಣೆ ಕಿರುಕುಳ ಆರೋಪದ ಮೇರೆಗೆ ಪತಿ ಪುನೀತ್ ಕುಮಾರ್​ನನ್ನೂ ಪೊಲೀಸರು ಬಂಧಿಸಿದ್ದು, ಪರಾರಿಯಾಗಿರುವ ಅತ್ತೆ ಕಲ್ಪನಾ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಪೂರ್ವಾಪರ ವಿಚಾರಗಳನ್ನು ಪೊಲೀಸರು ಸವಿಸ್ತಾರವಾಗಿ ಪರಿಶೀಲಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!