ಶಾಸಕ ಮುನಿರತ್ನಗೆ ಜಾಮೀನು, ಜೈಲಿನಿಂದ ಆಚೆ ಬಂದರೂ ಸಂಕಷ್ಟ ತಪ್ಪಿದ್ದಲ್ಲ

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್​​ ಬಿಗ್ ರಿಲೀಫ್​ ನೀಡಿದೆ. ಈಗಾಗಲೇ ಮೊದಲ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿರುವ ಮುನಿರತ್ನಗೆ ಎರಡನೇ ಕೇಸ್​ನಲ್ಲೂ ಜಾಮೀನು ಸಿಕ್ಕಿದೆ. ಆದ್ರೆ, ಲೈಂಗಿಕ ದೌರ್ಜನ್ಯ ಕೇಸ್ ಸಂಕಷ್ಟ​ ಎದುರಾಗಿದೆ.

ಶಾಸಕ ಮುನಿರತ್ನಗೆ ಜಾಮೀನು,  ಜೈಲಿನಿಂದ ಆಚೆ ಬಂದರೂ ಸಂಕಷ್ಟ ತಪ್ಪಿದ್ದಲ್ಲ
ಬಿಜೆಪಿ ಶಾಸಕ ಮುನಿರತ್ನ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Sep 19, 2024 | 5:59 PM

ಬೆಂಗಳೂರು, (ಸೆಪ್ಟೆಂಬರ್ 19): ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್​ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ. 2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಬೆಂಗಳೂರಿನ 82ನೇ ಸಿಸಿಹೆಚ್ ಕೋರ್ಟ್​​ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಜಮೀನು ನೀಡಿ ಆದೇಶ ಹೊರಡಿಸಿದ್ದಾರೆ.

ಸದ್ಯ ಮುನಿರತ್ನ ಪರ ವಕೀಲರು ಜಾಮೀನು ಷರತ್ತು ಪೂರೈಸುತ್ತಿದ್ದು, ಇಂದು ಸಂಜೆ ಜೈಲಿನಿಂದ ಮುನಿರತ್ನ ಬಿಡುಗಡೆ ಸಾಧ್ಯತೆ ಇದೆ. ಆದ್ರೆ, ಜೈಲಿನಿಂದ ಬಿಡುಗಡೆಯಾದರೂ ಸಹ ಅತ್ಯಾಚಾರ ಕೇಸ್​ನಲ್ಲಿ ಮತ್ತೆ ಬಂಧನ ಸಾಧ್ಯತೆ ಇದೆ.

ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ: ದಾಖಲಾಯ್ತು ಇನ್ನೊಂದು ಗಂಭೀರ ಪ್ರಕರಣ

ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಎನ್ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಈ ಸಂಬಂಧ ಮುನಿರತ್ನ ಅವರು ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದರು. ನಿನ್ನೆ ವಾದ ಪ್ರತಿವಾದ ಆಲಿಸಿದ್ದ ಕೋರ್ಟ್, ಇಂದಿಗೆ ಜಾಮೀನು ಆದೇಶ ಕಾಯ್ದಿರಿಸಿತ್ತು.

ಮುನಿರತ್ನಗೆ ಮತ್ತೊಂದು ಕೇಸ್ ಸಂಕಷ್ಟ

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಎರಡು ಕೇಸ್ ದಾಖಲಾಗಿರುವ ಮುನಿರತ್ನ ಆತನ ಗನ್ ಮ್ಯಾನ್ ವಿಜಯ್ ಕುಮಾರ್, ಸುಧಾಕರ್, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಸೇರಿದಂಕೆ 7 ಮಂದಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಕೃತ್ಯ ನಡೆದ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಬುಧವಾರ ತಡರಾತ್ರಿ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಖಾಸಗಿ ರೆಸಾರ್ಟ್ ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತೆ ಡಿವೈಎಸ್ ಪಿ ದಿನಕರ ಶೆಟ್ಟಿ ಸಮ್ಮುಖದಲ್ಲಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.

ಸಮಾಜ ಸೇವಕಿಯಾಗಿ ಗುರುತಿಸಿಕೊಂಡಿರುವ, ಬಿಜೆಪಿಯಲ್ಲೂ ಸಕ್ರಿಯವಾಗಿರುವ ತನ್ನ ಮೇಲೆ 2020ರಿಂದ 2022ರವರೆಗೆ ಅತ್ಯಾಚಾರ ನಡೆಸಿ ಹನಿಟ್ರ್ಯಾಪ್ ಗೆ ಬಳಸಿಕೊಂಡಿರುವ ಕುರಿತು ದೂರು ನೀಡಿದ್ದಾರೆ. ದೂರು ಪರಿಶೀಲಿಸಿದ ನಂತರ ಠಾಣೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡಿವೈ ಎಸ್ ದಿನಕರ ಶೆಟ್ಟಿ ನೇತೃತೃತ್ವದಲ್ಲಿ ಜೆ. ಪಿ. ಪಾರ್ಕ್ ಬಳಿಯ ಗೋಡೌನ್ ನಲ್ಲಿ ಸಂತ್ರಸ್ತೆಯನ್ನು ಕರೆತಂದು ಸ್ಥಳ ಮಹಜರು ನಡೆಸಲಾಯಿತು. ಈ ಪ್ರಕರಣ ಸಂಬಂಧ ರಾಮನಗರ ಪೊಲೀಸರು ಮುನಿರತ್ನ ಅವರನ್ನು ಬಂಧಿಸುವ ಸಾಧ್ಯತೆಗಳಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:50 pm, Thu, 19 September 24