ಐಟಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್‌ನ 13 ಹಿರಿಯ ನಾಯಕರಿಗೆ ಕೋರ್ಟ್‌ನಿಂದ ಸಮನ್ಸ್
ಐಟಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್‌ನ 13 ಹಿರಿಯ ನಾಯಕರಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ನೀಡಿದೆ.
ಬೆಂಗಳೂರು: ಆದಾಯ ತೆರಿಗೆ ಇಲಾಖೆ (ಐಟಿ) ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದ ಕರ್ನಾಟಕ ಕಾಂಗ್ರೆಸ್‌ನ(Karnataka Congress) 13 ಹಿರಿಯ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿ ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ (ಜನವರಿ 09) ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಬೆಂಗಳೂರಿನ ಐಟಿ ಕಚೇರಿಯ ಮುಂದೆ ಕಾಂಗ್ರೆಸ್ ನಾಯಕರ ನಿವಾಸದ ಮೇಲೆ ದಾಳಿ ಖಂಡಿಸಿ, ಕೋವಿಡ್ ಸಮಯದಲ್ಲಿ ಕೈ ಪಕ್ಷದ ನಾಯಕರು ಪ್ರತಿಭಟನೆ ನಡೆಸಿದ್ದರು. ಕೊರೋನಾ ಮಾರ್ಗಸೂಚಿ ನಿಯಮವಿದ್ದರೂ, ಇದನ್ನು ಗಾಳಿಗೆ ತೂರಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೈ ನಾಯಕರಿಗೆ ಸಮನ್ಸ್ ನೀಡಿದೆ.
ಕಾಂಗ್ರೆಸ್ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಯು.ಟಿ.ಖಾದರ್, ವೀರಪ್ಪ ಮೊಯ್ಲಿ, ಕೆ.ಜೆ.ಜಾರ್ಜ್, ರಿಜ್ವಾನ್ ಅರ್ಷದ್, ಟಿ.ಬಿ.ಜಯಚಂದ್ರ, ಎಂ.ನಾರಾಯಣ ಸ್ವಾಮಿ, ಪರಮೇಶ್ವರ್ ನಾಯ್ಕ್, ಸಲೀಂ ಅಹ್ಮದ್, ಶಾಸಕಿ ಸೌಮ್ಯಾ ರೆಡ್ಡಿ, ಕೆಪಿಸಿಸಿ ಯುವ ಘಟಕದ ಅಧ್ಯಕ್ಷ ನಲಪಾಡ್ ಸೇರಿದಂತೆ 13 ನಾಯಕರಿಗೆ ಸಮನ್ಸ್ ಜಾರಿ ಮಾಡಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ