AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ವಿರುದ್ಧದ ಖಾಸಗಿ ದೂರು ವಜಾಗೊಳಿಸಿದ ಬೆಂಗಳೂರು ಕೊರ್ಟ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಖಾಸಗಿ ದೂರನ್ನು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿದೆ. ಜಿಯಾಉರ್ ರಹಮಾನ್‌ ನೊಮಾನಿ ಸಲ್ಲಿಸಿದ್ದ ಖಾಸಗಿ ದೂರನ್ನು ವಜಾ ಮಾಡಿ 42ನೇ ಎಸಿಎಂಎಂ ಜಡ್ಜ್ ಕೆ.ಎನ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧದ ಖಾಸಗಿ ದೂರು ವಜಾಗೊಳಿಸಿದ ಬೆಂಗಳೂರು ಕೊರ್ಟ್
ನರೇಂದ್ರ ಮೋದಿ
Ramesha M
| Updated By: ರಮೇಶ್ ಬಿ. ಜವಳಗೇರಾ|

Updated on: Jul 16, 2024 | 4:04 PM

Share

ಬೆಂಗಳೂರು, (ಜುಲೈ 16): ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಖಾಸಗಿ ದೂರನ್ನು ಬೆಂಗಳೂರಿನ 42ನೇ ಎಸಿಎಂಎಂ ವಜಾಗೊಳಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತು ಮುಸ್ಲಿಮರಿಗೆ ಮರು ಹಂಚಿಕೆ ಮಾಡಲಾಗುತ್ತೆ ಎನ್ನುವ ಹೇಳಿಕೆ ಮೂಲಕ ಪ್ರಧಾನಿ ಮೋದಿ ಅವರು ದ್ವೇಷ ಭಾಷಣ ಮಾಡಿದ್ದಾರೆಂದು ಆರೋಪಿಸಿ ಜಿಯಾಉರ್ ರಹಮಾನ್‌ ನೊಮಾನಿ ಅವರು ಖಾಸಗಿ ದೂರು ಸಲ್ಲಿಸಿದ್ದರು. ಈ ಖಾಸಗಿ ದೂರನ್ನು ಬೆಂಗಳೂರಿನ 42ನೇ ಎಸಿಎಂಎಂ ಜಡ್ಜ್ ಕೆ.ಎನ್.ಶಿವಕುಮಾರ್ ಇಂದು (ಜುಕೈ 16) ವಾಜಾ ಮಾಡಿ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತೆ ಎಂದು ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ಮೋದಿ ಹೇಳಿದ್ದರು. ಅಲ್ಲದೇ ಮೋದಿ ಮಾಜಿ ಪ್ರಧಾನಿಯವರು ಮನಮೋಹನ್ ಸಿಂಗ್ ಹೇಳಿಕೆಯನ್ನು ಉಲ್ಲೇಖಿಸಿದ್ದರು. ಆದ್ರೆ, ಈ ಹೇಳಿಕೆ ಮೂಲಕ ದ್ವೇಷ ಭಾಷಣ ಮಾಡಿದ್ದಾರೆಂದು ಆರೋಪಿಸಿ ಜಿಯಾಉರ್ ರಹಮಾನ್‌ ನೊಮಾನಿ ಎನ್ನುವವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೂರು ಖಾಸಗಿ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ಆರೋಪ; ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ 2 ಪ್ರತ್ಯೇಕ ದೂರು

ಪ್ರಧಾನಿಯ ಭಾಷಣವು ಮುಸ್ಲಿಮರನ್ನು ನಿಂದಿಸುವಂತಿದೆ. ಈ ದೇಶದ ಸಂಪತ್ತನ್ನು ಲೂಟಿ ಹೊಡೆದ ನುಸುಳುಕೋರರಿಗೆ ಇಲ್ಲಿರುವ ಮುಸ್ಲಿಮರನ್ನು ಹೋಲಿಕೆ ಮಾಡುವಂತೆ ಉಳಿದ ಜನರನ್ನು ಪ್ರೇರೇಪಿಸುವಂತಿದೆ. ಹಾಗಾಗಿ, ಸಮಾಜದಲ್ಲಿ ದ್ವೇಷ ಹರಡಿದ, ಶಾಂತಿ ಭಂಗ ಉಂಟು ಮಾಡಿದ ಆರೋಪದ ಮೇಲೆ ಪ್ರಧಾನಿ ಮೋದಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಬೆಂಗಳೂರಿನ ಹೆಬ್ಬಾಳದ ನಿವಾಸಿ 32 ವರ್ಷದ ಜಿಯಾವುರ್‌ ರಹಮಾನ್‌ ನೊಮಾನಿ ಬೆಂಗಳೂರಿನ 42ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಮೇ 23ರಂದು ಖಾಸಗಿ ದೂರು ಸಲ್ಲಿಸಿದ್ದರು.

ಕಳೆದ ತಿಂಗಳು ರಾಜಸ್ಥಾನದಲ್ಲಿ ನಡೆದಿದ್ದ ಪ್ರಚಾರ ಭಾಷಣದಲ್ಲಿ ಸಮಾಜ ಮತ್ತು ಧರ್ಮಗಳ ನಡುವೆ ದ್ವೇಷ ಬಿತ್ತುವ, ಸಾರ್ವಜನಿಕ ಶಾಂತಿಗೆ ಭಂಗ ಹಾಗೂ ಕ್ರಿಮಿನಲ್‌ ಪ್ರಚೋದನೆ ನೀಡುವ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ಗಳಾದ 153ಎ, 153ಬಿ, 295ಎ, 503, 504, 505(2) ಅಡಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಕರಣ ದಾಖಲಿಸಲು ಅಮೃತಹಳ್ಳಿ ಠಾಣಾ ಪೊಲೀಸರಿಗೆ ನಿರ್ದೇಶಿಸುವಂತೆ ಖಾಸಗಿ ದೂರಿನಲ್ಲಿ ಮನವಿ ಮಾಡಿದ್ದರು. ಆದ್ರೆ, ಕೋರ್ಟ್, ದ್ವೇಷ ಭಾಷಣದ ಯಾವುದೇ ಅಂಶಗಳಿಲ್ಲವೆಂದು ದೂರನ್ನು ವಜಾ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ