ಬೆಂಗಳೂರು ಕಾಲ್ತುಳಿತ: ಸಂಭ್ರಮಾಚರಣೆಗೆ ಕರೆ ಕೊಟ್ಟಿದ್ದೇ ಸರ್ಕಾರ, ಹೈಕೋರ್ಟ್​ಗೆ ಕೆಎಸ್​ಸಿಎ ರಿಟ್ ಅರ್ಜಿ

ಆರ್‌ಸಿಬಿ ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ್ದ ಕಾಲ್ತುಳಿತ ಘಟನೆಗೆ ಇದೀಗ ಮತ್ತೊಂದು ಟ್ವಿಸ್ಟ್ ದೊರೆತಿದೆ. ವಿಧಾನಸೌಧ ಮುಂದೆ ಸಂಭ್ರಮಾಚರಣೆಗೆ ಕರೆ ಕೊಟ್ಟಿದ್ದೇ ಸರ್ಕಾರ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹೈಕೋರ್ಟ್​ಗೆ ರಿಟರ್ಜಿ ಸಲ್ಲಿಸಿದೆ. ಆ ಮೂಲಕ ಸರ್ಕಾರ ಹಾಗೂ ಕೆಎಸ್​ಸಿಎ ನಡುವೆ ಸಂಘರ್ಷ ಸನ್ನಿಹಿತವಾಗಿದೆ.

ಬೆಂಗಳೂರು ಕಾಲ್ತುಳಿತ: ಸಂಭ್ರಮಾಚರಣೆಗೆ ಕರೆ ಕೊಟ್ಟಿದ್ದೇ ಸರ್ಕಾರ, ಹೈಕೋರ್ಟ್​ಗೆ ಕೆಎಸ್​ಸಿಎ ರಿಟ್ ಅರ್ಜಿ
ಸಂಭ್ರಮಾಚರಣೆಗೆ ಕರೆ ಕೊಟ್ಟಿದ್ದೇ ಸರ್ಕಾರ, ಹೈಕೋರ್ಟ್​ಗೆ ಕೆಎಸ್​ಸಿಎ ರಿಟ್ ಅರ್ಜಿ
Edited By:

Updated on: Jun 06, 2025 | 2:09 PM

ಬೆಂಗಳೂರು, ಜೂನ್ 6: ಮಹತ್ವದ ಬೆಳವಣಿಗೆಯೊಂದರಲ್ಲಿ, ಆರ್​ಸಿಬಿ (RCB) ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಕರೆ ಕೊಟ್ಟಿದ್ದೇ ಸರ್ಕಾರ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಆರೋಪಿಸಿದೆ. ಇಷ್ಟೇ ಅಲ್ಲದೆ, ಕರ್ನಾಟಕ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ಸ್ ವೇದಿಕೆಯಲ್ಲಿ ಆಟಗಾರರನ್ನು ಸನ್ಮಾನಿಸಿದ್ದಾರೆ. ಸರ್ಕಾರ, ಸಚಿವರ ಮೇಲಿನ ಜನರ ಆಕ್ರೋಶದ ಹಾದಿ ತಪ್ಪಿಸಲು ಎಫ್​ಐಆರ್ ದಾಖಲಿಸಲಾಗಿದೆ ಎಂದು ರಿಟ್ ಅರ್ಜಿಯಲ್ಲಿ ಕೆಎಸ್​​ಸಿಎ ಉಲ್ಲೇಖಿಸಿದೆ.

ಘಟನೆಯ ಹೊಣೆಯನ್ನು ಕೆಎಸ್​​ಸಿಎ ಮೇಲೆ ಹೊರಿಸಲು ಯತ್ನಿಸಲಾಗುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜನದಟ್ಟಣೆ ನಿರ್ವಹಣೆ ಆರ್​ಸಿಬಿ ಹಾಗೂ ಪೊಲೀಸರ ಕರ್ತವ್ಯ. ಕರ್ನಾಟಕದ ಕ್ರಿಕೆಟ್ ನಿಯಂತ್ರಣವಷ್ಟೇ ಕೆಎಸ್​​ಸಿಎ ಜವಾಬ್ದಾರಿ ಎಂದು ಸಂಸ್ಥೆ ಹೇಳಿದೆ.

ಕೆಎಸ್​​ಸಿಎ ಆಡಳಿತ ಮಂಡಳಿ ಸದಸ್ಯರ ಬಂಧನಕ್ಕೆ ಮಾಧ್ಯಮದ ಮೂಲಕ ಆದೇಶ

ಕೆಎಸ್​​ಸಿಎ ಆಡಳಿತ ಮಂಡಳಿಯವರನ್ನು ಬಂಧಿಸಲು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಮಾಧ್ಯಮಗಳ ಮೂಲಕವೇ ಸಿಎಂ ಬಂಧಿಸುವ ಆದೇಶ ನೀಡಿದ್ದಾರೆ. ಪೊಲೀಸರನ್ನು ಅಮಾನತುಗೊಳಿಸುವ ಮೂಲಕ ಲೋಪ ಒಪ್ಪಿಕೊಂಡಿದ್ದಾರೆ. ಈಗ ಕೆಎಸ್​​ಸಿಎ ಮೇಲೆ ಹೊಣೆ ಹೊರಿಸಲು ಯತ್ನಿಸುತ್ತಿದ್ದಾರೆ ಎಂದು ರಿಟ್ ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ
ಸರ್ಕಾರ ಸ್ಥಿಮಿತ ತಪ್ಪಿದೆ, ಸಿಎಂ ಹೇಡಿಯಂತೆ ವರ್ತಿಸಿದ್ದಾರೆ: ಭಾಸ್ಕರ ರಾವ್
RCB ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನ
ಎಡಿಜಿಪಿ ದರ್ಜೆ ಅಧಿಕಾರಿ ಸಸ್ಪೆಂಡ್, ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಮೊದಲು
ಬೆಂಗಳೂರಿಗೆ ನೂತನ ಪೊಲೀಸ್​ ಕಮಿಷನರ್​ ಆಗಿ ಸೀಮಂತ್​ ಕುಮಾರ್ ಸಿಂಗ್ ನೇಮಕ

ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಘಟನೆಗೆ ಸರ್ಕಾರ ಹೊಣೆಯಲ್ಲ. ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ನಡೆದ ದುರಂತಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನೆ ನಡೆದ ದಿನವೇ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತಕ್ಕೆ ಸಿಎಂ, ಡಿಸಿಎಂ ಅವರೇ ನೇರ ಹೊಣೆ ಎಂದ ವಿಪಕ್ಷಗಳು ಎತ್ತಿದ ಸಾಲು ಪ್ರಶ್ನೆಗಳು ಇಲ್ಲಿವೆ

ಅದಾದ ನಂತರ ಘಟನೆ ಸಂಬಂಧ ಯಾವುದೇ ಎಫ್ಐಆರ್ ದಾಖಲಾಗಿರಲಿಲ್ಲ. 11 ಅಸಹಜ ಸಾವು ಪ್ರಕರಣಗಳನ್ನು ಅಷ್ಟೇ ದಾಖಲಿಸಲಾಗಿತ್ತು. ನಂತರ ಜನ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಮತ್ತು ಪ್ರತಿಪಕ್ಷಗಳಿಂದ ತೀವ್ರ ಒತ್ತಡ ಎದುರಾಗುತ್ತಿದ್ದಂತೆಯೇ ಆರ್​​ಸಿಬಿ ಆಡಳಿತ ಮಂಡಳಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಘಟನೆ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್ ಸೋಸಲೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ