AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿ ನಾಯಿ, ಸಾಕು ನಾಯಿಗಳಿಗಾಗಿ ವಿಶೇಷ ಪೂಜೆ! ಅಪಾರ್ಟ್ಮೆಂಟ್ ನಿವಾಸಿಗಳಿಂದ ಕಾಲಭೈರವ, ದತ್ತಾತ್ರೇಯ ಪೂಜೆ

ಬೀದಿ ನಾಯಿಗಳು ಹಾಗೂ ಸಾಕು ನಾಯಿಗಳಿಗೆ ಶಾಂತಿ ದೊರಕಲಿ, ಮಾನವರೊಂದಿಗೆ ಸ್ನೇಹಭಾವ ಬೆಳೆಸಲಿ ಎಂದು ನಿವಾಸಿಗಳು ಈ ಮೂಲಕ ಪ್ರಾರ್ಥಿಸಿದ್ದಾರೆ. ಅಪಾರ್ಟ್ಮೆಂಟ್ ಕ್ಲಬ್ ಹೌಸ್‌ನಲ್ಲಿ ನಡೆದ ಈ ಪೂಜೆಯಲ್ಲಿ ನಿವಾಸಿಗಳು, ಮಕ್ಕಳು ಹಾಗೂ ಸಾಕು ನಾಯಿಗಳು ಕೂಡ ಭಾಗವಹಿಸಿತ್ತು. ಪೂಜೆ ನಂತರ ವಿಶೇಷ ಪ್ರಸಾದ ಹಾಗೂ ಆಹಾರ ವ್ಯವಸ್ಥೆ ಮಾಡಲಾಗಿತ್ತು.

ಬೀದಿ ನಾಯಿ, ಸಾಕು ನಾಯಿಗಳಿಗಾಗಿ ವಿಶೇಷ ಪೂಜೆ! ಅಪಾರ್ಟ್ಮೆಂಟ್ ನಿವಾಸಿಗಳಿಂದ ಕಾಲಭೈರವ, ದತ್ತಾತ್ರೇಯ ಪೂಜೆ
ಅಪಾರ್ಟ್ಮೆಂಟ್ ನಿವಾಸಿಗಳಿಂದ ಕಾಲಭೈರವನಿಗೆ ಪೂಜೆ-ಪು‌ನಸ್ಕಾರ
ಕಿರಣ್​ ಸೂರ್ಯ
| Edited By: |

Updated on:Mar 23, 2026 | 4:33 PM

Share

ಬೆಂಗಳೂರು, ಮಾರ್ಚ್​ 23: ನಗರದಲ್ಲಿ ಬೀದಿ ನಾಯಿಗಳಿಂದ ಜನರಿಗೆ ಹಾಗೂ ಜನರಿಂದ ಬೀದಿ ನಾಯಿಗಳಿಗೆ (Dogs) ತೊಂದರೆ ಆಗುತ್ತಿರುವ ವರದಿಗಳು ಆಗ್ಗಾಗೆ ಬರುತ್ತಿದೆ. ಈ ಕಾರಣಕ್ಕೆ ಬೆಂಗಳೂರಿನಲ್ಲಿ ನಾಯಿಗಳ ಮೇಲೆ ಜನರಿಗೆ ಹಾಗೂ ಜನರ ಮೇಲೆ ನಾಯಿಗಳಿಗೆ ಪ್ರೀತಿ ಬರಲಿ ಎಂದು ಶಾಂತಿ ಪೂಜೆಯನ್ನು ಮಾಡಿಸಿದ್ದಾರೆ. ಪ್ರಾಣಿ ಹಾಗೂ ಮನುಷ್ಯ ನಡುವಿನ ಸಂಘರ್ಷಕ್ಕೆ ಕೊನೆಯಾಗಲಿ ಎಂಬುದು ಇಲ್ಲಿನ ಜನರ ಉದ್ದೇಶ. ಈ ಹಿನ್ನೆಲೆಯಲ್ಲಿ ಒಂದು ವಿಶೇಷ ಪೂಜೆಯನ್ನು ಮಾಡಿದ್ದಾರೆ. ನಗರದ ಅಪಾರ್ಟ್ಮೆಂಟ್​ವೊಂದರ ನಿವಾಸಿಗಳು ಕಾಲಭೈರವ ಮತ್ತು ದತ್ತಾತ್ರೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಪ್ರಾಣಿ ಪ್ರಿಯರಿಂದ ಪೂಜೆ, ಪ್ರಸಾದ ಭೋಜನ!

ಬೀದಿ ನಾಯಿಗಳು ಹಾಗೂ ಸಾಕು ನಾಯಿಗಳಿಗೆ ಶಾಂತಿ ದೊರಕಲಿ, ಮಾನವರೊಂದಿಗೆ ಸ್ನೇಹಭಾವ ಬೆಳೆಸಲಿ ಎಂದು ನಿವಾಸಿಗಳು ಈ ಮೂಲಕ ಪ್ರಾರ್ಥಿಸಿದ್ದಾರೆ. ಅಪಾರ್ಟ್ಮೆಂಟ್ ಕ್ಲಬ್ ಹೌಸ್‌ನಲ್ಲಿ ನಡೆದ ಈ ಪೂಜೆಯಲ್ಲಿ ನಿವಾಸಿಗಳು, ಮಕ್ಕಳು ಹಾಗೂ ಸಾಕು ನಾಯಿಗಳು ಕೂಡ ಭಾಗವಹಿಸಿತ್ತು. ಪೂಜೆ ನಂತರ ವಿಶೇಷ ಪ್ರಸಾದ ಹಾಗೂ ಆಹಾರ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದ ವೇಳೆ ಕೆಲ ನಿವಾಸಿಗಳು ಮಾತನಾಡಿ, ಇತ್ತೀಚೆಗೆ ಬೀದಿ ನಾಯಿಗಳಿಂದ ಎದುರಾಗುತ್ತಿರುವ ತೊಂದರೆಗಳ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. ಜತೆಗೆ ನಾಯಿಗಳಿಗೂ ಕೂಡ ಮನುಷ್ಯರಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ನೀವು ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುತ್ತೀದ್ದೀರಾ? ಹಾಗಿದ್ದರೆ ಈ ತಳಿಯ ಶ್ವಾನಗಳನ್ನು ಸಾಕಿ

ನಗರದ ಅನೇಕ ಅಪಾರ್ಟ್ಮೆಂಟ್‌ಗಳಲ್ಲಿ ಬೀದಿ ನಾಯಿ ಹಾಗೂ ಮನುಷ್ಯರ ನಡುವೆ ನಡೆಯುತ್ತಿರುವ ಸಂಘರ್ಷಗಳು ಇತ್ತೀಚೆಗೆ ಭಾರೀ ಸುದ್ದಿ ಮಾಡಿದೆ. ಕೆಲವೆಡೆ ಮಕ್ಕಳಿಗೆ ಹಾಗೂ ನಿವಾಸಿಗಳಿಗೆ ಕಚ್ಚುವ ಘಟನೆಗಳೂ ವರದಿಯಾಗಿವೆ. ಮತ್ತೊಂದು ಕಡೆ ನಾಯಿಗಳ ಮೇಲೆಯೂ ಜನರು ದಾಳಿ ಮಾಡಿದ ಘಟನೆಗಳು ಕೂಡ ವರದಿಯಾಗಿದೆ. ಇಂತಹ ಸಂದರ್ಭದಲ್ಲಿ ಪೂಜೆ ಮತ್ತು ಪ್ರಾರ್ಥನೆಯ ಮೂಲಕ ಮಾನವ-ನಾಯಿ ನಡುವಿನ ಸ್ನೇಹವನ್ನು ಹೆಚ್ಚಿಸಲು ನಿವಾಸಿಗಳು ಮುಂದಾಗಿರುವುದು ವಿಶೇಷವಾಗಿದೆ. ಒಟ್ಟಿನಲ್ಲಿ, ಬೀದಿ ನಾಯಿಗಳು ಮತ್ತು ಜನರ ನಡುವೆ ಪರಸ್ಪರ ಪ್ರೀತಿ, ನಂಬಿಕೆ ಬೆಳೆಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮ ಗಮನಸೆಳೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:17 am, Mon, 23 March 26

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ