AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿ ದೀಪ ಲೋಪ: ಸಚಿವರ ಸೂಚನೆಗೂ ಡೋಂಟ್ ಕೇರ್; ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಕೃಷ್ಣಬೈರೇಗೌಡ

ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್​ ಬೀದಿ ದೀಪಗಳು ಕಾರ್ಯನಿರ್ವಹಿಸದಿರುವುದು ಕಂಡುಬಂದಿದೆ. ಸಚಿವರು ಸೂಚನೆ ನೀಡಿದರೂ ಡೋಂಟ್ ಕೇರ್ ಎನ್ನಲಾಗಿದೆ. ಹೀಗಾಗಿ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಮುಂದಾಗಿದ್ದಾರೆ. ಕಠಿಣ ಶಿಸ್ತು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೀದಿ ದೀಪ ಲೋಪ: ಸಚಿವರ ಸೂಚನೆಗೂ ಡೋಂಟ್ ಕೇರ್; ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಕೃಷ್ಣಬೈರೇಗೌಡ
ಕೃಷ್ಣಬೈರೇಗೌಡImage Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on:Aug 30, 2026 | 4:11 PM

Share

ಬೆಂಗಳೂರು, ಆಗಸ್ಟ್​ 30: ಜಿಬಿಎ (GBA) ವ್ಯಾಪ್ತಿಯಲ್ಲಿ ವಿದ್ಯುತ್​ ಬೀದಿ ದೀಪಗಳ ನಿರ್ವಹಣೆ ಕುರಿತಂತೆ ಈಗಾಗಲೇ ಎರಡು ಬಾರಿ ಸಭೆ ಮಾಡಿ ಸೂಚನೆ ನೀಡಿದರೂ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್​ ಬೀದಿ ದೀಪಗಳು ಕಾರ್ಯನಿರ್ವಹಿಸದಿರುವುದು ಕಂಡು ಬಂದಿದೆ. ಹೀಗಾಗಿ ಕರ್ತವ್ಯ ಲೋಪ ಎಸಗಿರುವವರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ (Krishna Byre Gowda) ಖಡಕ್​ ಸೂಚನೆ ನೀಡಿದ್ದಾರೆ.

222 ಪೈಕಿ 140 ಎಲ್‌ಇಡಿ ದೀಪಗಳು ನಿಷ್ಕ್ರಿಯ

ಈ ಕುರಿತಾಗಿ ಸಚಿವ ಕೃಷ್ಣಬೈರೇಗೌಡ ಟ್ವೀಟ್ ಮಾಡಿದ್ದಾರೆ. ‘ಆಗಸ್ಟ್​​ 28ರ ಸಂಜೆ ನಾನು ಹಡ್ಸನ್​ ವೃತ್ತದಿಂದ ಚಾಲುಕ್ಯ ವೃತ್ತದವರೆಗೆ ರಸ್ತೆಯಲ್ಲಿ ಖುದ್ದಾಗಿ ವಿದ್ಯುತ್ ಬೀದಿ ದೀಪಗಳ ಪರಿವೀಕ್ಷಣೆ ಮಾಡುವ ಸಂದರ್ಭದಲ್ಲಿ ಒಟ್ಟು 222 ಪೈಕಿ 140 ವಿದ್ಯುತ್ ಕಂಬಗಳಲ್ಲಿನ ದೀಪಗಳು ಕಾರ್ಯನಿರ್ವಹಿಸದಿರುವುದು ಕಂಡುಬಂದಿದೆ’

ಸಚಿವ ಕೃಷ್ಣಬೈರೇಗೌಡ ಟ್ವೀಟ್

‘ಜಿಬಿಎ ವ್ಯಾಪ್ತಿಯ ವಿದ್ಯುತ್ ಬೀದಿ ದೀಪಗಳ ನಿರ್ವಹಣೆ ಕುರಿತಂತೆ ಈಗಾಗಲೇ ಎರಡು ಬಾರಿ ಸಭೆಯನ್ನು ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆಗಸ್ಟ್​ 04ರಂದು ಈ ಕುರಿತು ನಡೆದ ಸಭೆಯಲ್ಲಿ ಹಾಜರಾಗಿದ್ದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೂ ಸಹ ಬೀದಿ ದೀಪಗಳ ನಿರ್ವಹಣೆಯಲ್ಲಿ ಯಾವುದೇ ಲೋಪಗಳು ಉಂಟಾಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಲೋಪಗಳನ್ನು ಸರಿಪಡಿಸಲು ಕಾಲಾವಕಾಶ ನೀಡಲಾಗಿತ್ತು’.

ಇದನ್ನೂ ಓದಿ: ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ: ಮತ್ತೊಂದು ಪ್ಲ್ಯಾನ್​ ರೆಡಿ!

‘ಹಡ್ಸನ್​​ ರಸ್ತೆಯು ಬೆಂಗಳೂರು ನಗರದ ಹೃದಯ ಭಾಗದ ಪ್ರಮುಖ ರಸ್ತೆಯಾಗಿದ್ದು, ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ಜೊತೆಗೆ ಈ ರಸ್ತೆ ನ್ಯಾಯಾಲಯ ಸಂಕೀರ್ಣಕ್ಕೆ ಹಾಗೂ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ ನಿವಾಸಕ್ಕೆ ಹೊಂದಿಕೊಂಡಿದೆ. ಈ ರಸ್ತೆಯಲ್ಲಿ ಪ್ರತಿ ನಿಮಿಷಕ್ಕೆ ನೂರಾರು ವಾಹನಗಳು ಸಂಚರಿಸುತ್ತವೆ’

ಕರ್ತವ್ಯ ಲೋಪವೆಸಗಿದವರ ವಿರುದ್ಧ ಕ್ರಮಕ್ಕೆ ಸೂಚನೆ 

‘ಇಂತಹ ಪ್ರಮುಖ ರಸ್ತೆಯಲ್ಲಿನ ವಿದ್ಯುತ್ ಬೀದಿ ದೀಪಗಳು ಸರಿಯಾಗಿ ಕಾರ್ಯನಿರ್ವಹಿಸದಿರುವುದು ಗಮನಿಸಲಾಗಿದ್ದು, ಬೀದಿ ದೀಪಗಳ ನಿರ್ವಹಣೆಯಲ್ಲಿ ಲೋಪವಾಗಿರುವುದು ಸ್ಪಷ್ಟವಾಗುತ್ತದೆ. ಹೀಗಾಗಿ ಸಭೆಯಲ್ಲಿ ನೀಡಿರುವ ಸೂಚನೆಗಳನ್ನು ಪಾಲಿಸದೇ ಕರ್ತವ್ಯ ಲೋಪವೆಸಗಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ’ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:06 pm, Sun, 30 August 26

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!