AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ಚಾಕು ಇರಿದು ಬಿಕಾಂ ವಿದ್ಯಾರ್ಥಿಯ ಹತ್ಯೆ!

ಬೆಂಗಳೂರಿನ ನಾಗರಬಾವಿಯ ಕಾಲೇಜು ಒಂದರ ಬಳಿ ವಿದ್ಯಾರ್ಥಿಗಳ ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಆರೋಪಿಗಳ ಪತ್ತೆಗೆ ಪೊಲೀಸರು ತಂಡ ರಚಿಸಿದ್ದಾರೆ.

ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ಚಾಕು ಇರಿದು ಬಿಕಾಂ ವಿದ್ಯಾರ್ಥಿಯ ಹತ್ಯೆ!
ಕೊಲೆಯಾದ ವಿದ್ಯಾರ್ಥಿ ಯೋಗೇಶ್Image Credit source: tv9 kannada
ವಿಕಾಸ್​ ಬಿಎಂ
| Edited By: |

Updated on: Sep 30, 2026 | 8:39 PM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ
  • ಓರ್ವ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ
  • ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

ಬೆಂಗಳೂರು, ಸೆಪ್ಟೆಂಬರ್​​ 30: ನಾಗರಬಾವಿ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ನಡೆದ ಮಾರಾಮಾರಿಯಲ್ಲಿ ಬಿಕಾಂ ವಿದ್ಯಾರ್ಥಿಯ ಕೊಲೆ ನಡೆದಿರುವಂತಹ ಘಟನೆ ನಡೆದಿದೆ. ನಾಗರಬಾವಿಯ ಮಹೇಶ್ ಪಿಯು ಕಾಲೇಜಿನ ವಿದ್ಯಾರ್ಥಿ ಯೋಗೇಶ್ (19) ಕೊಲೆಯಾದ ಯುವಕ. ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ನಗರದ ಕಾಲೇಜು ಬಳಿಯೇ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಬಿಕಾಂ ವಿದ್ಯಾರ್ಥಿ ಯೋಗೇಶ್‌ ಗಂಭೀರ ಗಾಯಗೊಂಡಿದ್ದಾನೆ. ತಕ್ಷಣ ಆತನನ್ನು ಸ್ನೇಹಿತರು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಯೋಗೇಶ್‌ ಕೊನೆಯುಸಿರೆಳೆದಿದ್ದಾನೆ.

ಜಿಮ್ ಬಳಿ ಕರೆಸಿಕೊಂಡು ಗಲಾಟೆ: ಚಾಕುವಿನಿಂದ ಎದೆಗೆ ಇರಿತ

ಘಟನೆ ಕುರಿತಾಗಿ ಪಶ್ಚಿಮ ವಿಭಾಗ ಡಿಸಿಪಿ ಯತೀಶ್​ ಪ್ರತಿಕ್ರಿಯಿಸಿದ್ದು, ‘ಇಂದು ಮಧ್ಯಾಹ್ನ ಸುಮಾರು 2:30ರ ಹೊತ್ತಿಗೆ ಕಾಲೇಜಿನ ಹಿಂಭಾಗದಲ್ಲಿ ಈ ದುರಂತ ಸಂಭವಿಸಿದೆ. ಯಾರೋ ಒಬ್ಬ ಯೋಗೇಶ್‌ಗೆ ಕರೆ ಮಾಡಿ ಕೆಳಗೆ ಬರುವಂತೆ ಹೇಳಿದ್ದ’.

ಇದನ್ನೂ ಓದಿ: ಪತ್ನಿಗೆ ವಿಷದ ಇಂಜೆಕ್ಷನ್​ ಕೊಡಿಸಿ ಕೊಲೆ ಯತ್ನ: ಹೆಂಡ್ತಿ ಬದುಕುಳಿಯುತ್ತಿದ್ದಂತೆಯೇ ಪ್ರೇಯಸಿ ಜತೆ ಪತಿ ಆತ್ಮಹತ್ಯೆ

‘ಅದರಂತೆ ಆತ ಕಾಲೇಜಿನ ಹಿಂಭಾಗದಲ್ಲಿರುವ ಜಿಮ್ ಬಳಿ ಬಂದಾಗ, ಅಲ್ಲಿ ನೆರೆದಿದ್ದ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ತೀವ್ರ ಗಲಾಟೆ ನಡೆದಿದೆ. ಈ ಮಾರಾಮಾರಿ ವೇಳೆ ನಾಲ್ಕೈದು ಜನರಿದ್ದ ಗುಂಪಿನಲ್ಲೊಬ್ಬ ಯೋಗೇಶ್‌ನ ಎದೆ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

LIVE TV

ಆರೋಪಿಗಳ ಪತ್ತೆಗೆ ಪೊಲೀಸರ ವಿಶೇಷ ತಂಡ ರಚನೆ

ಘಟನೆ ನಡೆದ ಸ್ಥಳಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೊಲೆಗೈದ ಆರೋಪಿಗಳು ಕಾಲೇಜಿನ ವಿದ್ಯಾರ್ಥಿಗಳಲ್ಲ ಎಂಬ ಸಂಗತಿ ತಿಳಿದುಬಂದಿದೆ. ಗಲಾಟೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ತಲೆಮರೆಸಿಕೊಂಡಿರುವ ನಾಲ್ಕೈದು ಮಂದಿ ಆರೋಪಿಗಳ ಪತ್ತೆಗೆ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ ಎಂದು ಡಿಸಿಪಿ ಯತೀಶ್ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ವಿಕಾಸ್​ ಬಿಎಂ
ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More