Bengaluru: ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ: ಲವ್ ಬ್ರೇಕಪ್ ಶಂಕೆ

| Updated By: Rakesh Nayak Manchi

Updated on: Dec 19, 2022 | 3:26 PM

ಡೆತ್ ನೋಟ್ ಬರೆದಿಟ್ಟು ಬೆಂಗಳೂರು ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Bengaluru: ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ: ಲವ್ ಬ್ರೇಕಪ್ ಶಂಕೆ
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ವಾಣಿ
Follow us on

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಬೆಂಗಳೂರು ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟಡದ ಮೇಲಿನಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ (Student Suicide) ಮಾಡಿಕೊಂಡಿದ್ದು, ಪ್ರಕರಣದ ಹಿಂದೆ ಪ್ರೇಮ ವೈಫಲ್ಯ (Love Break Up) ಆಗಿರುವ ಶಂಕೆ ವ್ಯಕ್ತವಾಗಿದೆ. ಮೂಲತಃ ಬೆಂಗಳೂರಿನ ನಿವಾಸಿಯಾಗಿರುವ ವಾಣಿ(23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ವಿವಿ ಪುರಂ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿನಿ ವಾಣಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಶ್ವೇಶ್ವರಯ್ಯಪುರ ಕಾಲೇಜ್ ಆಫ್ ಲಾ ಸಂಸ್ಥೆಯಲ್ಲಿ ಕಾನೂನು ಪದವಿ ವ್ಯಾಸಾಂಗ ಮಾಡುತ್ತಿದ್ದ ವಾಣಿ ಬೆಂಗಳೂರಿನ ತಾಂತ್ರಿಕ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನ.24 ರಿಂದ ಪ್ರಥಮ ವರ್ಷದ ಕಾನೂನು ಪದವಿ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿತ್ತು. ನಿತ್ಯ ತರಗತಿಗೆ ಹಾಜರಾಗುತ್ತಿದ್ದ ವಿದ್ಯಾರ್ಥಿನಿ ವಾಣಿ, ಇಂದು ಗೈರಾಗಿದ್ದಳು. ಅಲ್ಲದೆ ಒಂದು ಪುಟದ ಪೂರ್ತಿ ಡೆತ್ ನೋಟು ಬರೆದಿಟ್ಟು ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ: ಮೈಸೂರು ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಪುತ್ರಿ ಆತ್ಮಹತ್ಯೆ: ಕಾರಣ ನಿಗೂಢ

ಪ್ರಕರಣ ಸಂಬಂಧ ವಿಶ್ವೇಶ್ವರಪುರ ಕಾನೂನು ವಿಶ್ವವಿದ್ಯಾಲಯ ಪ್ರಾಂಶುಪಾಲೆ ಸುಧಾ ಅವರು ಟಿವಿ9ಗೆ ಪ್ರತಿಕ್ರಿಯಿಸಿ, ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ನಾನು ಬೋರ್ಡ್ ಮೀಟಿಂಗ್​ನಲ್ಲಿದ್ದಾಗ ವಿಚಾರ ತಿಳಿದುಬಂತು. ಕೂಡಲೇ ಸ್ಥಳಕ್ಕೆ ಬಂದಿದ್ದೇನೆ. 6ನೇ ಅಂತಸ್ತಿನಿಂದ ಬಿದ್ದ ಹಿನ್ನಲೆ ಸ್ಥಳದಲ್ಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಳು. ಕಾಲೇಜು ಆರಂಭವಾಗಿ ಎರಡು ತಿಂಗಳು ಸಹ ಆಗಿಲ್ಲ. ಕಾಲೇಜು, ಆಡಳಿತ ಮಂಡಳಿಯ ವಿಚಾರಕ್ಕೆ ವಿದ್ಯಾರ್ಥಿನಿ ಮನನೊಂದಿಲ್ಲ. ಕೌಂಟುಂಬಿಕ, ವೈಯಕ್ತಿಕ ವಿಚಾರವಾಗಿ ಸಾವನ್ನಪ್ಪಿರುವ ಸಾಧ್ಯತೆ ಇದೆ. ಘಟನೆ ತಿಳಿದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ, ವಿದ್ಯಾರ್ಥಿನಿಯ ಬ್ಯಾಗ್​ನಲ್ಲಿ ಡೆತ್ ನೋಟ್ ಇತ್ತು. ಆಕೆಯ ವಸ್ತುಗಳನ್ನೆಲ್ಲ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Mon, 19 December 22