AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರೀ ಬಸ್ ಪಾಸ್ ಬೆನ್ನಲ್ಲೇ ರಿಯಾಯಿತಿಯಲ್ಲಿ ಮೆಟ್ರೋ ಪಾಸ್ ನೀಡುವಂತೆ ಬೆಂಗಳೂರು ವಿದ್ಯಾರ್ಥಿಗಳ ಮನವಿ

ರಾಜ್ಯ ಸರ್ಕಾರ ಪ್ರಾಥಮಿಕ ಶಾಲೆಯಿಂದ ಸ್ನಾತಕೋತ್ತರ ಹಂತದವರೆಗಿನ ಪುರುಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ಗಳನ್ನು ನೀಡಲು ಘೋಷಣೆ ಮಾಡಿದೆ. ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನವೇ ಈ ಮೊದಲ ಘೋಷಣೆ ಮಾಡಿದ್ದಾರೆ. ಆದರೆ, ಇತ್ತ ಬೆಂಗಳೂರಿನಲ್ಲಿ ನಮ್ಮ ಮೆಟ್ರೋದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ತಿಂಗಳ ಅಥವಾ ಇಯರ್ಲಿ ಪಾಸ್ ನೀಡುವಂತೆ ವಿದ್ಯಾರ್ಥಿಗಳು ಸಿಎಂಗೆ ಮನವಿ ಮಾಡಿದ್ದಾರೆ.

ಫ್ರೀ ಬಸ್ ಪಾಸ್ ಬೆನ್ನಲ್ಲೇ ರಿಯಾಯಿತಿಯಲ್ಲಿ ಮೆಟ್ರೋ ಪಾಸ್ ನೀಡುವಂತೆ ಬೆಂಗಳೂರು ವಿದ್ಯಾರ್ಥಿಗಳ ಮನವಿ
Dk Shivakumar (ಪ್ರಾತಿನಿಧಿಕ ಚಿತ್ರ)
ಕಿರಣ್​ ಸೂರ್ಯ
| Edited By: |

Updated on: Jun 09, 2026 | 10:38 PM

Share

ಬೆಂಗಳೂರು, (ಜೂನ್ 09): ಕಳೆದ ವಾರ ಡಿಕೆ ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ ಮೇಲೆ, ಮೊದಲಿಗೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಲಿಕಾನ್ ‌ಸಿಟಿಯ ವಿದ್ಯಾರ್ಥಿಗಳು ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣ ಮಾಡಲು ಸ್ಟೂಡೆಂಟ್ ಪಾಸ್ ನೀಡಿ, ಫ್ರೀಯಾಗಿ ಬೇಡ ಡಿಸ್ಕ್ಯೌಂಟ್ ನಲ್ಲಿ ನೀಡಿ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಮೆಟ್ರೋ ಪ್ರಯಾಣದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆ ಆಗುತ್ತೆ ಅಂತ IISC ವರದಿ ಕೊಟ್ಟಿದೆ. ಅಲ್ಲದೇ ರಿಯಾಯಿತಿ ನೀಡಿದರೆ ವಿದ್ಯಾರ್ಥಿಗಳು ಮೆಟ್ರೋ ಪ್ರಯಾಣ ಮಾಡಲಿದ್ದು,ಇದರಿಂದ ಬೆಂಗಳೂರು ರಸ್ತೆಗಳಲ್ಲಿ ವಾಹನ ಸಂಚಾರದ ದಟ್ಟಣೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಲು ಸ್ಟೂಡೆಂಟ್ ಪಾಸ್ ಗಾಗಿ ಮನವಿ ಮಾಡುತ್ತಿರುವ ವಿದ್ಯಾರ್ಥಿಗಳು ನಮಗೆ ಉಚಿತ ಪಾಸ್ ಬೇಡ.ಕನಿಷ್ಠ ರಿಯಾಯತಿ ದರದಲ್ಲಿ ಪಾಸ್ ವ್ಯವಸ್ಥೆ ಕಲ್ಪಿಸಿ. ಮೆಟ್ರೋ ಪ್ರಯಾಣದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆ ಆಗುತ್ತೆ ಅಂತ IISC ವರದಿ ಕೊಟ್ಟಿದೆ. ಹಾಗಾಗಿ, ವಿದ್ಯಾರ್ಥಿಗಳು ಮೆಟ್ರೋ ಪ್ರಯಾಣ ಮಾಡುವುದರಿಂದ ಪೊಲ್ಯೂಷನ್ ನಿಂದ ಮುಕ್ತರಾಗಬಹುದು. ಖಾಸಗಿ ವಾಹನಗಳನ್ನ ಬಳಸುವುದರಿಂದ ದೂರವಿಡಬಹುದು. ಬೈಕ್ ಗಳಲ್ಲಿ ಬರುವುದರಿಂದ ಅಪಘಾತಗಳು ಸಂಭವಿಸುತ್ತೆ. ಮೆಟ್ರೋ ಪಾಸ್ ವಿತರಿಸಿದ್ರೆ ಖಾಸಗಿ ವಾಹನದಿಂದ ದೂರ ಆಗಬಹುದು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸ್ ನೀಡಬೇಕೆಂದು ಎಂದಿದ್ದಾರೆ.

ಇದನ್ನೂ ಓದಿ: ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಅರ್ಜಿ ಸಲ್ಲಿಕೆ ಹೇಗೆ? ಏನೇನು ದಾಖಲೆಗಳು ಬೇಕು? ಇಲ್ಲಿದೆ ವಿವರ

ಡಿಕೆ ಶಿವಕುಮಾರ್ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ದಿನ ಸಚಿವ ಸಂಪುಟ ಸಭೆ ಮಾಡಿ, ಶಾಲಾ ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ನೀಡೋದಾಗಿ ಘೋಷಣೆ ಮಾಡಿದ್ದರು. ಸದ್ಯ ಪಾಸ್ ವಿತರಣೆಯ ಸಿದ್ಧತೆ ನಡೆಯುತ್ತಿದೆ. ಇದರ ಮಧ್ಯೆ ಇದೀಗ ಬೆಂಗಳೂರಿನ ವಿದ್ಯಾರ್ಥಿಗಳು ಸಹ ಮೆಟ್ರೋ ಪಾಸ್ ರಿಯಾಯಿತಿ ನೀಡಬೇಕೆಂದು ಮನವಿ ಮಾಡಿದ್ದು, ಈ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಏನು ತೀರ್ಮಾನಿಸುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು