AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಕಂಪನಿಗಳಿಗೆ ಕೆ-ರೈಡ್ ಸೆಡ್ಡು: ಸಬ್ ಅರ್ಬನ್ ರೈಲ್ವೆ ಕೋಚ್ ನಿರ್ಮಾಣಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್

ಬೆಂಗಳೂರಿಗರ ಹಲವು ವರ್ಷಗಳ ಕನಸನ್ನು ನನಸು ಮಾಡಲು ಟೆಂಡರ್ ಕರೆಯಲಾಗಿತ್ತು. ಟೆಂಡರ್​​ನಲ್ಲಿ ಯಾವುದೇ ಕಂಪನಿಗಳು ಭಾಗಿಯಾಗದ ಹಿನ್ನೆಲೆಯಲ್ಲಿ ಕೆ- ರೈಡ್ ಕಂಪನಿಯೇ ರೈಲ್ವೆ ಕೋಚ್​ಗಳನ್ನು ನಿರ್ಮಾಣ ಮಾಡಲು ಸಿದ್ಧತೆ ಮಾಡಿಕೊಂಡಿದೆ. ರಾಜ್ಯ ‌ಸರ್ಕಾರವು ಅನುದಾನ ಬಿಡುಗಡೆ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ‌.

ಖಾಸಗಿ ಕಂಪನಿಗಳಿಗೆ ಕೆ-ರೈಡ್ ಸೆಡ್ಡು: ಸಬ್ ಅರ್ಬನ್ ರೈಲ್ವೆ ಕೋಚ್ ನಿರ್ಮಾಣಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್
ಸಾಂದರ್ಭಿಕ ಚಿತ್ರ
Kiran Surya
| Edited By: |

Updated on: Dec 02, 2024 | 7:28 AM

Share

ಬೆಂಗಳೂರು, ಡಿಸೆಂಬರ್ 2: ಬೆಂಗಳೂರು ಉಪನಗರ ರೈಲು ಯೋಜನೆಯಡಿ ರೈಲು ಬೋಗಿಗಳನ್ನು ನಿರ್ಮಾಣ ಮಾಡಲು ಟೆಂಡರ್ ಕರೆಯಲಾಗಿತ್ತು. ಆದರೆ, ಯಾವುದೇ ಕಂಪನಿಗಳು ಮುಂದೆ ಬಾರದ ಹಿನ್ನೆಲೆಯಲ್ಲಿ, ಕೆ- ರೈಡ್ (ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ) ತಾನೇ ರೈಲ್ವೆ ಕೋಚ್​ಗಳನ್ನು ನಿರ್ಮಾಣ ಮಾಡಲು ತಿರ್ಮಾನ ಮಾಡಿದೆ. 306 ಕೋಚ್​ಗಳನ್ನು ಕೆ- ರೈಡ್ ನಿರ್ಮಾಣ ಮಾಡಲು ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. 2135 ಕೋಟಿ ರೂಪಾಯಿ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ಸಬ್ ಅರ್ಬನ್ ರೈಲ್ವೆ ಯೋಜನೆಯ ಎರಡನೇ ಕಾರಿಡಾರ್ ಅನ್ನು 2026ರ ಡಿಸೆಂಬರ್ ಹಾಗೂ 4ನೇ ಕಾರಿಡಾರ್‌ ಅನ್ನು 2027ರ ಡಿಸೆಂಬರ್ ವೇಳೆಗೆ ಕಾರ್ಯಾಚರಣೆ ಪ್ರಾರಂಭಿಸಲು ನಿರ್ಧರಿಸಲಾಗಿತ್ತು.

ರೈಲ್ವೆ ಕೋಚ್‌ಗಳ ನಿರ್ಮಾಣಕ್ಕೆ ಆಹ್ವಾನಿಸಿದ್ದ ಟೆಂಡರ್‌ನಲ್ಲಿ, ಯಾವುದೇ ಕಂಪನಿಗಳು ಭಾಗವಹಿಸಿಲ್ಲ. ಹೀಗಾಗಿ 4,300 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ತಲಾ ಶೇ 50 ರಷ್ಟು ಅನುದಾನ ನೀಡಿ ಕೆ-ರೈಡ್ ಮೂಲಕವೇ ಕೋಚ್​ಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಸಚಿವ ಹೆಚ್​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರದಿಂದ 2,135 ಕೋಟಿ ರೂ. ಅನುದಾನ

ಯೋಜನೆಯಡಿ ಮುಂದಿನ ಐದು ವರ್ಷಗಳಲ್ಲಿ 406 ಕೋಚ್‌ಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 2,135 ಕೋಟಿ ರೂಪಾಯಿಗಳನ್ನು ರೈಲು ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಒದಗಿಸಲು ಸರ್ಕಾರ ಒಪ್ಪಿಗೆ ನೀಡಿದೆ‌. ಮುಂದಿನ ಹಂತದಲ್ಲಿ ಕೇಂದ್ರ ಸರ್ಕಾರಕ್ಕೆ ಅನುದಾನ ಮತ್ತು ಅನುಮತಿಗಾಗಿ ಪತ್ರ ಬರೆಯಲಾಗುತ್ತದೆ. ಕೇಂದ್ರದಿಂದ ಒಪ್ಪಿಗೆ ಸಿಕ್ಕಿದ ಕೂಡಲೇ ರೈಲ್ವೆ ಕೋಚ್​ಗಳ ನಿರ್ಮಾಣ ಕಾರ್ಯ ಶುರುವಾಗಲಿದೆ.

ಏತನ್ಮಧ್ಯೆ, ಕೋಚ್ ನಿರ್ಮಾಣ ಬಗ್ಗೆ ಟ್ರಾನ್ಸ್‌ಪೋರ್ಟ್‌ ತಜ್ಞ ಪ್ರೊ. ಶ್ರೀಹರಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರದವರು ರೀ ಟೆಂಡರ್ ಮಾಡಬೇಕು. ಯಾಕೆ ಯಾವುದೇ ಕಂಪನಿಗಳು ಟೆಂಡರ್​ನಲ್ಲಿ ಭಾಗಿಯಾಗಿಲ್ಲ ಎಂದು ಪರಿಶೀಲಿಸಬೇಕು. ಬೆಂಗಳೂರಿನಲ್ಲಿರುವ ಕೋಚ್ ತಯಾರಿಕಾ ಕಂಪನಿಗಳು ಟೆಂಡರ್​ನಲ್ಲಿ ಭಾಗಿಯಾಗಿಲ್ಲ ಅಂದರೆ ಏನರ್ಥ? ನಾವು ಕೋಚ್ ನಿರ್ಮಾಣ ಮಾಡುತ್ತೇವೆ ಎನ್ನುವುದು ಸರಿಯಲ್ಲ. ಇತಿಹಾಸ ಇರಬೇಕು. ಹಿಂದೆ ತಯಾರು ಮಾಡಿರುವ ಅನುಭವ ಇರಬೇಕು ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಸಬ್ ಅರ್ಬನ್ ರೈಲು ಕಾರಿಡಾರ್​ಗಾಗಿ 2,000 ಮರಗಳಿಗೆ ಕುತ್ತು, ಸಾರ್ವಜನಿಕರ ಅಭಿಪ್ರಾಯ ಕೇಳಿದ BBMP

ಒಟ್ಟಿನಲ್ಲಿ ಸಬ್ ಅರ್ಬನ್ ರೈಲುಗಳು ನಗರದಲ್ಲಿ ಆದಷ್ಟು ಬೇಗ‌ ಸಂಚಾರ ಮಾಡಬೇಕು ಎಂಬ ಕನಸು ನಗರದ ಪ್ರಯಾಣಿಕರಿಗಿದೆ. ಆದರೆ, ಕೋಚ್ ನಿರ್ಮಾಣಕ್ಕೆ ಕರೆದಿದ್ದ ಟೆಂಡರ್​​ನಲ್ಲಿ ಯಾವುದೇ ಕಂಪನಿಗಳು ಭಾಗಿಯಾಗದ್ದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ರಾಜ್ಯ ಸರ್ಕಾರದ ಗ್ರೀನ್ ಸಿಗ್ನಲ್ ಬಳಿಕವಾದರೂ ತ್ವರಿತಗತಿಯಲ್ಲಿ ಕೆಲಸ ಕಾರ್ಯಗಳು ನಡೆದು ಉಪನಗರ ರೈಲುಗಳು ಸಂಚಾರ ಮಾಡಬಹುದು ಎಂಬ ಆಶಾಭಾವನೆ ಇದೀಗ ಮೂಡಿರುವುದು ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ