AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಕನಸಿನ ಯೋಜನೆಗೆ ಸಿಕ್ತು ವೇಗ: 153 ಮೆಟ್ರೋ ಕೋಚ್‌ ಖರೀದಿಗೆ ಐಸಿಎಫ್ ಜೊತೆ ಒಪ್ಪಂದ

ಕೆ-ರೈಡ್​ ಸಂಸ್ಥೆ ಕೋಟ್ಯಂತರ ರೂ ವೆಚ್ಚದಲ್ಲಿ 153 ಹವಾನಿಯಂತ್ರಿತ ಮೆಟ್ರೋ ಮಾದರಿಯ ಬೋಗಿಗಳನ್ನು ಪೂರೈಸಲು ಚೆನ್ನೈನ ಐಸಿಎಫ್​ನಿಂದ ಖರೀದಿಸಲು ಒಪ್ಪಂದ ಮಾಡಿಕೊಂಡಿದೆ. ಆ ಮೂಲಕ ಬೆಂಗಳೂರಿನ ಕನಸಿನ ಯೋಜನೆಯಾದ ಉಪನಗರ ರೈಲು ಯೋಜನೆಗೆ ಇದೀಗ ವೇಗ ಸಿಕ್ಕಂತಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ಬೆಂಗಳೂರಿನ ಕನಸಿನ ಯೋಜನೆಗೆ ಸಿಕ್ತು ವೇಗ: 153 ಮೆಟ್ರೋ ಕೋಚ್‌ ಖರೀದಿಗೆ ಐಸಿಎಫ್ ಜೊತೆ ಒಪ್ಪಂದ
ಪ್ರಾತಿನಿಧಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on:May 11, 2026 | 6:52 PM

Share

ಬೆಂಗಳೂರು, ಮೇ 11: ಬೆಂಗಳೂರಿನ (Bangaluru) ಮಹತ್ವಾಕಾಂಕ್ಷಿ ಉಪನಗರ ರೈಲು ಯೋಜನೆಗೆ (Suburban Rail Project) ಮಹತ್ವದ ವೇಗ ದೊರೆತಿದ್ದು, 153 ಹವಾನಿಯಂತ್ರಿತ ಮೆಟ್ರೋ ಮಾದರಿಯ ಬೋಗಿಗಳನ್ನು ಪೂರೈಸಲು ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಜೊತೆ ಕರ್ನಾಟಕ ರೈಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಎಂಟರ್‌ಪ್ರೈಸ್ (ಕೆ-ರೈಡ್) 1,513.75 ಕೋಟಿ ರೂ ವೆಚ್ಚದ ಒಪ್ಪಂದ ಮಾಡಿಕೊಂಡಿದೆ.

ಮುಖ್ಯಾಂಶಗಳು

  • 1,513.75 ಕೋಟಿ ರೂ ಬೃಹತ್ ಕಾರ್ಯಾದೇಶ
  • 153 ಹವಾನಿಯಂತ್ರಿತ ಬ್ರಾಡ್-ಗೇಜ್ ಮೆಟ್ರೋ ಮಾದರಿಯ ಬೋಗಿಗಳು ಒದಗಿಸಲು ಒಪ್ಪಂದ
  • ಮುಂದಿನ 18 ತಿಂಗಳೊಳಗೆ ಬೋಗಿಗಳ ಪೂರೈಕೆಗೆ ಗಡುವು

ಇದನ್ನೂ ಓದಿ: ಮಲ್ಟಿ ಟ್ರ್ಯಾಕಿಂಗ್ ರೈಲ್ವೆ ಯೋಜನೆಗೆ ಕೇಂದ್ರ ಒಪ್ಪಿಗೆ: ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಬಂಪರ್ ಕೊಡುಗೆ

ಒಟ್ಟು 1,513.75 ಕೋಟಿ ರೂ ಮೊತ್ತದ ಕಾರ್ಯಾದೇಶವನ್ನು ಮೇ 6ರಂದು ಐಸಿಎಫ್‌ಗೆ ನೀಡಲಾಗಿದೆ. ಯೋಜನೆಯ ಕಾರಿಡಾರ್-2 ಮತ್ತು ಕಾರಿಡಾರ್-4ಕ್ಕೆ ಬ್ರಾಡ್-ಗೇಜ್ ಮೆಟ್ರೋ ಮಾದರಿಯ 153 ಬೋಗಿಗಳನ್ನು ಪೂರೈಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ.

ಒಪ್ಪಂದದ ಪ್ರಕಾರ ಮುಂದಿನ 18 ತಿಂಗಳೊಳಗೆ ಐಸಿಎಫ್ ಸಂಸ್ಥೆ ಕಡ್ಡಾಯವಾಗಿ ಬೋಗಿಗಳ ಪೂರೈಕೆ ಆರಂಭಿಸಬೇಕಿದೆ. ಏಕೆಂದರೆ ಕಾರಿಡಾರ್-2 ವ್ಯಾಪ್ತಿಯ ಚಿಕ್ಕಬಾಣಾವರ ಟು ಯಶವಂತಪುರ ಮಾರ್ಗವನ್ನು ನಿಗದಿತ ಸಮಯದಲ್ಲಿಯೇ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವ ಗುರಿ ಹೊಂದಲಾಗಿದೆ. ಶೀಘ್ರದಲ್ಲೇ ಉಭಯ ಸಂಸ್ಥೆಗಳ ನಡುವೆ ಅಧಿಕೃತ ಒಡಂಬಡಿಕೆಗೆ (ಎಂಒಯು) ಸಹಿ ಬೀಳಲಿದೆ.

ಕಾರ್ಯಾದೇಶದ ಪ್ರಮುಖ ಅಂಶಗಳು

ಚೆನ್ನೈನ ಐಸಿಎಫ್‌ಗೆ ನೀಡಲಾದ ಈ ಸಮಗ್ರ ಗುತ್ತಿಗೆಯು ಕೇವಲ ಬೋಗಿಗಳ ನಿರ್ಮಾಣವನ್ನಷ್ಟೇ ಅಲ್ಲದೆ, ಈ ಕೆಳಗಿನ ಜವಾಬ್ದಾರಿಗಳನ್ನು ಒಳಗೊಂಡಿದೆ.

  • ರೈಲು ಬೋಗಿಗಳ ವಿನ್ಯಾಸ ಮತ್ತು ಸಂಪೂರ್ಣ ಉತ್ಪಾದನೆ
  • ಗುಣಮಟ್ಟ ಪರಿಶೀಲನೆ, ಜೋಡಣೆ, ಪರೀಕ್ಷೆ ಹಾಗೂ ಕಾರ್ಯಾರಂಭ
  • ಆರ್‌ಡಿಎಸ್‌ಒನಿಂದ ಅಗತ್ಯವಿರುವ ಶಾಸನಬದ್ಧ ಅನುಮೋದನೆಗಳನ್ನು ಪಡೆಯುವುದು
  • ಸಿಗ್ನಲಿಂಗ್, ವಿದ್ಯುತ್ ಪೂರೈಕೆ, ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ ಗುತ್ತಿಗೆಗಳೊಂದಿಗೆ ಸುಗಮ ಸಮನ್ವಯ
  • ಕಾರಿಡಾರ್‌ಗಳ ಯಶಸ್ವಿ ಕಾರ್ಯಾಚರಣೆಗೆ ಕಡ್ಡಾಯವಾಗಿರುವ ವಿಶ್ವಾಸಾರ್ಹತೆ, ಲಭ್ಯತೆ, ನಿರ್ವಹಣೆ ಮತ್ತು ಸುರಕ್ಷತಾ ಮಾನದಂಡಗಳ ಪೂರೈಕೆ ಮಾಡುವುದು

ಇದನ್ನೂ ಓದಿ: ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ: ರಾಜ್ಯಾದ್ಯಂತ ರೈಲು ಸಂಚಾರ ಬಂದ್ ಮಾಡುವ ಎಚ್ಚರಿಕೆ ನೀಡಿದ ಕರವೇ

ಈ ಬೃಹತ್ ಕಾರ್ಯಾದೇಶದಿಂದ ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿಗೆ ಮತ್ತಷ್ಟು ವೇಗ ದೊರೆಯುವ ನಿರೀಕ್ಷೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:50 pm, Mon, 11 May 26

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ