ಬೆಂಗಳೂರು ಉಪನಗರ ರೈಲ್ವೆ ಕಾರಿಡಾರ್​​ಗಳು 2028ಕ್ಕೆ ಪೂರ್ಣ; ಸಚಿವ ಎಂಬಿ ಪಾಟೀಲ್

Bengaluru Suburban Railway Project; ಎಲ್ಲಾ ನಾಲ್ಕು ಕಾರಿಡಾರ್‌ಗಳ ಕೆಲಸವನ್ನು 2026 ರ ವೇಳೆಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಒಂದು ವೇಳೆ ವಿಳಂಬವಾದರೂ ಕಾಮಗಾರಿ 2028 ರ ವೇಳೆಗೆ ಪೂರ್ಣಗೊಳ್ಳಲಿದೆ. ಈ ಗಡುವಿನೊಳಗೆ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪಾಟೀಲ್ ಹೇಳಿದರು.

ಬೆಂಗಳೂರು ಉಪನಗರ ರೈಲ್ವೆ ಕಾರಿಡಾರ್​​ಗಳು 2028ಕ್ಕೆ ಪೂರ್ಣ; ಸಚಿವ ಎಂಬಿ ಪಾಟೀಲ್
ಕೆಜೆ ಜಾರ್ಜ್ ಹಾಗೂ ಎಂಬಿ ಪಾಟೀಲ್​

Updated on: Aug 11, 2023 | 6:16 PM

ಬೆಂಗಳೂರು: ಬೆಂಗಳೂರು ಉಪನಗರ ರೈಲ್ವೆ ಯೋಜನೆಯ (Bengaluru Suburban Railway Project) ನಾಲ್ಕು ಕಾರಿಡಾರ್‌ಗಳು 2028 ರ ವೇಳೆಗೆ ಸಿದ್ಧವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ (MB Patil) ಶುಕ್ರವಾರ ಹೇಳಿದ್ದಾರೆ. ಪಾಟೀಲ್ ಅವರು ಲಿಂಗರಾಜಪುರ, ಶಾಂಪುರ, ಹೆಬ್ಬಾಳ ಮತ್ತು ಯಶವಂತಪುರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಮಾಹಿತಿ ನೀಡಿದರು. ಅವರೊಂದಿಗೆ ಇಂಧನ ಸಚಿವ ಕೆಜೆ ಜಾರ್ಜ್, ಶಾಸಕ ಮುನಿರತ್ನ ಇದ್ದರು.

ಎಲ್ಲಾ ನಾಲ್ಕು ಕಾರಿಡಾರ್‌ಗಳ ಕೆಲಸವನ್ನು 2026 ರ ವೇಳೆಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಪಾಟೀಲ್ ಹೇಳಿದರು. ಒಂದು ವೇಳೆ ವಿಳಂಬವಾದರೂ ಕಾಮಗಾರಿ 2028 ರ ವೇಳೆಗೆ ಪೂರ್ಣಗೊಳ್ಳಲಿದೆ. ಈ ಗಡುವಿನೊಳಗೆ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಚಿಕ್ಕಬಾಣಾವರ ಮತ್ತು ಬೆನ್ನಿಗಾನ ಹಳ್ಳಿ ನಡುವಿನ ಕಾರಿಡಾರ್​ಗೆ ಸಂಬಂಧಿಸಿದ ಎರಡು ಕಾಮಗಾರಿಗಳು 26 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಯೋಜನೆಯ ಕಾಮಗಾರಿಗಳಿಗೆ 7,438 ಕೋಟಿ ರೂಪಾಯಿ ಸಾಲದ ಅವಶ್ಯಕತೆ ಇದೆ ಎಂದು ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಜರ್ಮನ್ ಮತ್ತು ಯುರೋಪಿಯನ್ ಬ್ಯಾಂಕುಗಳೊಂದಿಗೆ ಚರ್ಚಿಸಲಾಗಿದೆ. 2016 ರಲ್ಲಿ, ನಾವು ಯೋಜನೆಯ ಕಾರಿಡಾರ್ 2 ರ ಕೆಲಸವನ್ನು ಪ್ರಾರಂಭಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.


ತಾಂತ್ರಿಕ ಸಮಸ್ಯೆಗಳು ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಕಾಮಗಾರಿ ವಿಳಂಬವಾಗಿದೆ ಎಂದು ಸಚಿವರು ಹೇಳಿದ್ದಾರೆ. ಯೋಜನೆ ಕಾಮಗಾರಿಗಾಗಿ ಸುಮಾರು 157 ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿದೆ. ಆರು ಚಿಕ್ಕ ಸೇತುವೆಗಳು, ಏಳು ತಡೆಗೋಡೆಗಳು ಮತ್ತು ಆರು ಲೆವೆಲ್ ಕ್ರಾಸಿಂಗ್‌ಗಳು ಇರುತ್ತವೆ. ಇದು ಟ್ರಾಫಿಕ್ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಬಲೇಶ್ವರ, ತಿಕೋಟಾದಲ್ಲಿ ಪ್ರತಿ ನಿವಾಸಿಗೆ ದಿನಕ್ಕೆ 135 ಲೀಟರ್ ನೀರು​: ಸಚಿವ ಎಂಬಿ ಪಾಟೀಲ್

ಈ ಯೋಜನೆಯನ್ನು ಬೆಂಗಳೂರಿನಿಂದ ಹೊರಗಿರುವ ಇತರ ಸ್ಥಳಗಳಿಗೂ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಪಾಟೀಲ್ ಹೇಳಿದ್ದಾರೆ. ತುಮಕೂರು, ಮೈಸೂರು, ಕೋಲಾರ ಮತ್ತು ರಾಜ್ಯದ ಹಲವು ಸ್ಥಳಗಳಿಗೆ ವಿಸ್ತರಣೆ ಮಾಡುವ ಬಗ್ಗೆ ನಾವು ಚರ್ಚಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us