AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜನರೇ ಎಚ್ಚರ: ಕರುಳು ಬೇನೆ ಹಾಗೂ ಫುಡ್‌ ಪಾಯ್ಸನ್ ಪ್ರಕರಣಗಳು ಹೆಚ್ಚಳ!

ಬೆಂಗಳೂರಿನಲ್ಲಿ ಈ ಬೇಸಿಗೆಯಲ್ಲಿ ಕರುಳು ಬೇನೆ ಮತ್ತು ವೈರಲ್ ಸೋಂಕುಗಳ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿವೆ. ಕಳೆದ 10 ದಿನಗಳಲ್ಲಿ 5,500 ಕ್ಕೂ ಹೆಚ್ಚು ಕರುಳು ಬೇನೆ ಹಾಗೂ ಪುಡ್ ಪಾಯ್ಸನ್ ಪ್ರಕರಣಗಳು ವರದಿಯಾಗಿವೆ. ಒಂದು ವಾರದಲ್ಲಿ 274 ವೈರಲ್ ಸೋಂಕುಗಳು ಪತ್ತೆಯಾಗಿವೆ. ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು ಜನರೇ ಎಚ್ಚರ: ಕರುಳು ಬೇನೆ ಹಾಗೂ ಫುಡ್‌ ಪಾಯ್ಸನ್ ಪ್ರಕರಣಗಳು ಹೆಚ್ಚಳ!
ಕರುಳು ಬೇನೆ
Vinay Kashappanavar
| Edited By: |

Updated on: Mar 31, 2025 | 7:36 PM

Share

ಬೆಂಗಳೂರು, ಮಾರ್ಚ್​ 31: ಈ ಬಾರಿ ಬೇಸಿಗೆಯಲ್ಲಿನ (Summer) ಬಿರು ಬಿಸಿಲು ರಾಜಧಾನಿ ಬೆಂಗಳೂರು (Bengaluru) ಸೇರಿದ್ದಂತೆ ರಾಜ್ಯದ ಜನರನ್ನು ಹೈರಾಣಾಗಿಸಿದೆ. ಈ ನಡುವೆ ಕಳೆದ ಕೆಲ ದಿನಗಳಿಂದ ವಿವಿಧ ಆರೋಗ್ಯ ಸಮಸ್ಯೆಗಳು ಶುರುವಾಗಿದ್ದು, ಬೆಂಗಳೂರಿನ ಜನರಲ್ಲಿ ಆತಂಕ ಹುಟ್ಟಿಸಿವೆ. ಕಳೆದೊಂದು ತಿಂಗಳಿನಿಂದ ನಿರಂತರವಾಗಿ ಕರುಳು ಬೇನೆ (Gastrointestinal disorders) ಹಾಗೂ ಪುಡ್ ಪಾಯ್ಸನ್ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿವೆ.

ಕಳೆದ 10 ದಿನಗಳಲ್ಲಿ 5,500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಒಂದು ವಾರದಲ್ಲಿ 274 ಮೈಕೈ ನೋವು, ನೆಗಡಿ, ಜ್ವರಗಳಿಂದ ಕೂಡಿದ, ತೀವ್ರ ಸಾಂಕ್ರಾಮಿಕವಾದ ವೈರಸ್ ರೋಗಳು ಪತ್ತೆಯಾಗಿವೆ. ಹೀಗಾಗಿ, ಆರೋಗ್ಯ ಇಲಾಖೆ ಈ ಖಾಯಿಲೆಗಳ ಬಗ್ಗೆ ಹೈ ಅಲರ್ಟ್ ಆಗಿದ್ದು ಜ್ವರ, ಕರುಳು ಬೇನೆ, ಟೈಫಾಯಿಡ್‌, ವೈರಲ್‌ ಹೆಪಟೈಟಿಸ್‌ ನೋವಿನಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ ಅಂತ ಎಚ್ಚರಿಕೆ ನೀಡಿದೆ.

ಹವಾಮಾನ ಬದಲಾವಣೆ ಇತ್ತೀಚೆಗೆ ಸುರಿದ ಮಳೆ ಹಾಗೂ ಬಿಸಲಿನ ತಾಪಮಾನ ಏರಿಕೆಯಿಂದ ಕರಳು ಬೇನೆ ಗ್ಯಾಸ್ಟ್ರೋ ಎಂಟರೈಟಿಸ್ ಸೇರಿದಂತೆ ಕರುಳು ಸಂಬಂಧಿ ಖಾಯಿಲೆ ಹೆಚ್ಚಾಗಿ ಕಂಡು ಬರುತ್ತಿದೆ. ಹೀಗಾಗಿ, ವೈದ್ಯರು ಎಚ್ಚರಿಕೆ ಅತ್ಯಗತ್ಯ ಅಂತಿದ್ದು ಮಳೆ ನೀರು ನಿಂತು ಸಂಗ್ರಹವಾಗಿರುವ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ ಸಾಧ್ಯತೆಗಳು ಹೆಚ್ಚಿದ್ದು, ಇವುಗಳಿಂದಲೂ ಸಾಂಕ್ರಾಮಿಕ ರೋಗ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ರಾಜಧಾನಿಯ ಜನರು ಬೇಸಿಗೆ ಮುಗಿಯುವವರೆಗೂ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೊಗ್ಯ ಇಲಾಖೆ ನಿರ್ದೇಶಕ ಅಹ್ಮದ್ ಅನ್ಸಾರ್ ಹೇಳಿದ್ದಾರೆ.

ಇದನ್ನೂ ಓದಿ
Image
ಕಣ್ಣಿಗೆ ಧೂಳು, ಕಸ ಬಿದ್ದರೆ ಹೀಗೆ ಮಾಡಿ
Image
ಬೇಸಿಗೆಯಲ್ಲಿ ಸ್ನಾನಕ್ಕೆ ಬಿಸಿ ನೀರನ್ನೇ ಆಯ್ಕೆ ಮಾಡಿಕೊಳ್ತೀರಾ?
Image
WITT 2025: ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತ ಏಕೆ ಸಂಭವಿಸುತ್ತದೆ?
Image
ತಾಯಿಗೆ ಮನೆಯಲ್ಲಿಯೇ ಹೆರಿಗೆ ಮಾಡಿಸಿದ 13 ವರ್ಷದ ಬಾಲಕ

ಇದನ್ನೂ ಓದಿ: ಪ್ರೋಟೀನ್ ಹೆಚ್ಚಾದರೆ ಮೂತ್ರಪಿಂಡಕ್ಕೆ ಹಾನಿ, ಇದರ ಆರಂಭಿಕ ಲಕ್ಷಣಗಳು ಯಾವುವು?

ಕರುಳು ಬೇನೆ ರೋಗದ ಲಕ್ಷಣಗಳು ಏನು..?

ಆಗಾಗ್ಗೆ ಭೇದಿ, ವಾಕರಿಕೆ ಜೊತೆಗೆ ವಾಂತಿ, ಕಿಬ್ಬೊಟ್ಟೆಯ ಸೆಳೆತ, ಹೊಟ್ಟೆನೋವು, ಜ್ವರ ಮತ್ತಿತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ರೋಗ ಹೇಗೆ ಬರುತ್ತದೆ?

ಕಲುಷಿತ ನೀರು ಅಥವಾ ಆಹಾರ ಸೇವನೆಯ ಮೂಲಕ ಸೋಂಕಿಗೆ ಒಳಗಾದ ವ್ಯಕ್ತಿಗಳು ಅಥವಾ ಪ್ರಾಣಿಗಳೊಂದಿಗೆ ನೇರ ಸಂಪರ್ಕದಿಂದ ಇವು ಹರಡುತ್ತವೆ ಅಶುಚಿತ್ವ ಕೂಡಾ ರೋಗ ಹರಡಲು ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್