ಬೆಂಗಳೂರಿನಲ್ಲಿ ಮೂವರನ್ನು ಬಲಿ ಪಡೆದ ಮಳೆ ನೀರಿನ ಇಂಗು ಗುಂಡಿ

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಮಳೆನೀರಿನ ಇಂಗು ಗುಂಡಿ ಸ್ವಚ್ಛಗೊಳಿಸಲು ಹೋಗಿ ಮೂವರು ದುರಂತ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸ್ವಚ್ಛಗೊಳಿಸಲು ರಾಸಾಯನಿಕ ಬಳಸಿದ್ದರಿಂದ ಉಸಿರಾಟ ತೊಂದರೆ ಆಗಿ ಮೂರ್ಛೆ ಹೋಗಿದ್ದರು. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೂವರು ಮೃತಪಟ್ಟಿದ್ದಾರೆ. ವೈಟ್‌ಫೀಲ್ಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಬೆಂಗಳೂರಿನಲ್ಲಿ ಮೂವರನ್ನು ಬಲಿ ಪಡೆದ ಮಳೆ ನೀರಿನ ಇಂಗು ಗುಂಡಿ
ಇಂಗು ಗುಂಡಿ
Image Credit source: tv9 kannada
Edited By:

Updated on: Feb 28, 2026 | 10:31 PM

ಬೆಂಗಳೂರು, ಫೆಬ್ರವರಿ 28: ಮಳೆ ನೀರಿನ ಇಂಗು ಗುಂಡಿಗೆ ಮೂರು ಬಲಿ (death) ಆಗಿರುವಂತಹ ಘಟನೆ ನಗರದ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿ ದೇಗುಲದ ವೃತ್ತದ ಬಳಿ ನಡೆದಿದೆ. ಮುನಿಶಾಮಪ್ಪ(67), ರುದ್ರಕುಮಾರ್(40) ಮತ್ತು ವಿಶ್ವನಾಥ್ ಆಚಾರಿ(24) ಮೃತರು. ವೈಟ್‌ಫೀಲ್ಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಮಾಲೀಕ ಮುನಿಶಾಮಪ್ಪ 12 ವರ್ಷಗಳ ಹಿಂದೆಯೇ ಇಂಗು ಗುಂಡಿ ನಿರ್ಮಿಸಿದ್ದರೂ ಬಳಸುತ್ತಿರಲಿಲ್ಲ. ಹೀಗಾಗಿ ನೀರಿನಲ್ಲಿ ಬಿದ್ದ ವಸ್ತುಗಳು ಕೊಳೆತು ನಾರುತ್ತಿದ್ದವು. ಕೆಮಿಕಲ್ ಹಾಕಿ ಕ್ಲೀನ್ ಮಾಡಲು ಮುಂದಾಗಿದ್ದರು. ಈ ವೇಳೆ  ಉಸಿರಾಟದ ತೊಂದರೆಯಾಗಿ ಮುನಿಶಾಮಪ್ಪ ಮೂರ್ಛೆ ಹೋಗಿದ್ದಾರೆ.

ಇದನ್ನೂ ಓದಿ: ಕುಡಿದ ನಶೆಯಲ್ಲಿ ವ್ಯಕ್ತಿ ಮೇಲೆ ಕಾರು ಹರಿಸಿ ಕೊಲೆ; ಪ್ರಭಾವಿ ಮುಖಂಡರ ಮಕ್ಕಳು ಅಂದರ್!

ಮಾಲೀಕನನ್ನು ರಕ್ಷಿಸಲು ಹೋದ ಪ್ಲಂಬರ್ ರುದ್ರಕುಮಾರ್​​ ಮೂರ್ಛೆ ಹೋಗಿದ್ದಾರೆ. ಇವರಿಬ್ಬರನ್ನು ನೋಡಲು ಹೋದ ವಿಶ್ವನಾಥ್ ಆಚಾರಿ ಎಂಬ ಯುವಕ ಕೂಡ ಮೂರ್ಛೆಹೋಗಿದ್ದಾನೆ. ವಿಶ್ವನಾಥ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೂವರು ಮೃತಪಟ್ಟಿದ್ದಾರೆ.

ಸಾರಿಗೆ ಬಸ್​ ಹರಿದು ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

ಸಾರಿಗೆ ಬಸ್​ ಹರಿದು ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿ ನಡೆದಿದೆ. ಬಸವರಾಜ್​(21) ಮೃತ ವಿದ್ಯಾರ್ಥಿ. ಆಟೋದಲ್ಲಿ ಹೋಗ್ತಿದ್ದಾಗ ಬಸವರಾಜ್ ಆಯತಪ್ಪಿ ಕೆಳಗೆ ಬಿದಿದ್ದಾರೆ. ಬಿಎಸ್ಸಿ ಅಂತಿಮ ವರ್ಷದಲ್ಲಿ ಓದುತ್ತಿದ್ದ. ರಾಯಚೂರು ಸಂಚಾರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಓರ್ವ ಸಾವು, ಮೂವರಿಗೆ ಗಾಯ

ಹಾಸನ‌ ಜಿಲ್ಲೆ ಸಕಲೇಶಪುರ ತಾಲೂಕಿನ ಗುಲಗಳಲೆ ಬಳಿ ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ಮೂವರಿಗೆ ಗಾಯವಾಗಿರುವಂತಹ ಘಟನೆ ನಡೆದಿದೆ. ತಮಿಳುನಾಡು ಮೂಲದ ಧನುಷ್(25) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್, ಗಾಂಜಾ ಜಪ್ತಿ: ಮಹಿಳೆಯರಿಬ್ಬರು ಸೇರಿ 16 ಆರೋಪಿಗಳ ಬಂಧನ

ಗಂಭೀರ ಗಾಯಗೊಂಡ ಮೂವರಿಗೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ನೇಹಿತರ ಜೊತೆ ಕಾರಿನಲ್ಲಿ ಧರ್ಮಸ್ಥಳಕ್ಕೆ ಧನುಷ್ ಹೊರಟಿದ್ದರು. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us