ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ನಿಯಂತ್ರಣಕ್ಕೆ ಅತ್ಯಾಧುನಿಕ ಕ್ಯಾಮೆರಾಗಳ ಕಣ್ಗಾವಲು

ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆಗಳನ್ನು ನಿಯಂತ್ರಿಸಲು ನಗರ ಸಂಚಾರಿ ಪೊಲೀಸರು ಪ್ರಮುಖ 50 ಜಂಕ್ಷನ್​ಗಳಲ್ಲಿ ಅತ್ಯಾಧುನಿ ಕ್ಯಾಮೆರಾಗಳನ್ನು ಅಳವಡಿಸಲಿದ್ದಾರೆ.

ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ನಿಯಂತ್ರಣಕ್ಕೆ ಅತ್ಯಾಧುನಿಕ ಕ್ಯಾಮೆರಾಗಳ ಕಣ್ಗಾವಲು
ಬೆಂಗಳೂರಿನ ಸಂಚಾರಿ ನಿಯಮ ಉಲ್ಲಂಘನೆ ನಿಯಂತ್ರಣಕ್ಕೆ ಪ್ರಮುಖ ಜಂಕ್ಷನ್​ಗಳಲ್ಲಿ ಅತ್ಯಾಧುನಿಕ ಕ್ಯಾಮೆರಾಗಳ ಕಣ್ಗಾವಲು
Follow us
TV9 Web
| Updated By: Rakesh Nayak Manchi

Updated on:Dec 08, 2022 | 7:32 AM

ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ITMS) ಅನ್ನು ಪ್ರಾರಂಭಿಸಲು ಮುಂದಾಗಿದ್ದು, ಪ್ರಮುಖ 50 ಜಂಕ್ಷನ್​ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಬೆಂಗಳೂರು ಪೊಲೀಸರ (Bengaluru Police) ಪ್ರಕಾರ, ಪೊಲೀಸರ ಸಹಾಯವಿಲ್ಲದೆ ಸಂಚಾರ ಉಲ್ಲಂಘನೆಯನ್ನು ಐಟಿಎಂಎಸ್ ಪತ್ತೆಹಚ್ಚುತ್ತದೆ. 50 ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಲಾಗಿರುವ 250 ಎಎನ್‌ಪಿಆರ್‌ ಕ್ಯಾಮೆರಾಗಳ (ANPR Camera) ಮೂಲಕ ಸಂಚಾರ ನಿಯಮ ಉಲ್ಲಂಘನೆ (Traffic rule violations)ಯನ್ನು ಸೆರೆಹಿಡಿಯಲಾಗುತ್ತದೆ. ಸ್ವಯಂಚಾಲಿತ ವ್ಯವಸ್ಥೆಯು ನೋಟಿಸ್ ರಚಿಸುತ್ತದೆ. ಮಾತ್ರವಲ್ಲದೆ ಚಲನ್ ಅನ್ನು ಉಲ್ಲಂಘಿಸುವವರಿಗೆ SMS ಕೂಡ ಕಳುಹಿಸುವ ಕೆಲಸ ಮಾಡುತ್ತದೆ.

ಅತಿವೇಗ, ಕೆಂಪು ದೀಪ ಉಲ್ಲಂಘನೆ, ಸ್ಟಾಪ್ ಲೇನ್ ಉಲ್ಲಂಘನೆ, ಹೆಲ್ಮೆಟ್ ಉಲ್ಲಂಘನೆ, ತ್ರಿಬಲ್ ರೈಡಿಂಗ್, ಚಾಲನೆ ವೇಳೆ ಮೊಬೈಲ್ ಬಳಕೆ ಮತ್ತು ಸೀಟ್ ಬೆಲ್ಟ್ ಇಲ್ಲದೆ ವಾಹನ ಚಲಾಯಿಸುವುದು ಮುಂತಾದ ಅನೇಕ ಸಂಚಾರ ಉಲ್ಲಂಘನೆಗಳನ್ನು ಐಟಿಎಂಎಸ್ ಪತ್ತೆ ಮಾಡಲಿದೆ. ಆದರೆ ಈ ಕ್ರಮವನ್ನು ವಾಹನ ಸವಾರರಿಂದ ದಂಡ ವಸೂಲಿ ಮಾಡಲು ಅಳವಡಿಸಲಾಗುತ್ತಿಲ್ಲ. ನಗರದಲ್ಲಿ ಸಂಚಾರ ಶಿಸ್ತು ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಅಳವಡಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಭಾರಿ ಮಳೆ ಮುನ್ಸೂಚನೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ಐಟಿಎಂಎಸ್ ವ್ಯವಸ್ಥೆಯನ್ನು 50 ಜಂಕ್ಷನ್​ಗಳಲ್ಲಿ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಯಾವುದೇ ಸಂಚಾರ ನಿಯಮಗಳನ್ನು ಉಲ್ಲಂಘಿಸಬೇಡಿ. ಉದ್ದೇಶವು ದಂಡವನ್ನು ಸಂಗ್ರಹಿಸುವುದು ಅಲ್ಲ. ಇದು ಸಂಪರ್ಕರಹಿತವಾಗಿದೆ, ವಾರದ 7 ದಿನವೂ ಈ ವ್ಯವಸ್ಥೆ ಸಕ್ರಿಯವಾಗಿರಲಿದೆ. ಉತ್ತಮ ರಸ್ತೆ ನಡವಳಿಕೆ ಮತ್ತು ಅನುಸರಣೆಯನ್ನು ಹೆಚ್ಚಿಸುವುದು ಗುರಿಯಾಗಿದೆ ಎಂದು ಪೊಲೀಸ್ ಆಯುಕ್ತರು ಟ್ವೀಟ್ ಮಾಡಿದ್ದಾರೆ.

ಸಂಚಾರ ಉಲ್ಲಂಘನೆಯನ್ನು ಗುರುತಿಸದ ಹೊರತು ನಿಯಮಿತ ತಪಾಸಣೆಗಾಗಿ ಯಾವುದೇ ವಾಹನವನ್ನು ನಿಲ್ಲಿಸಲಾಗುವುದಿಲ್ಲ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಜುಲೈನಲ್ಲಿ ಹೇಳಿದ್ದರು. ದಾಖಲೆ ಪರಿಶೀಲನೆಯ ಹೆಸರಿನಲ್ಲಿ ಟ್ರಾಫಿಕ್ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂಬ ಹಲವು ದೂರುಗಳ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 am, Thu, 8 December 22

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ