AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru ಐವರು ಶಂಕಿತ ಉಗ್ರರ ಬಂಧನ: ಪ್ರಕರಣವನ್ನು ಎನ್​ಐಎಗೆ ನೀಡುವಂತೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರ ಪೊಲೀಸರು ಬಂಧಿಸಿದ್ದು, ಈ ಪ್ರಕರಣವನ್ನು ಕೂಡಲೇ ಎನ್​ಐಎ ತನಿಖೆಗೆ ವಹಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

Bengaluru ಐವರು ಶಂಕಿತ ಉಗ್ರರ ಬಂಧನ: ಪ್ರಕರಣವನ್ನು ಎನ್​ಐಎಗೆ ನೀಡುವಂತೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
Anil Kalkere
| Updated By: ವಿವೇಕ ಬಿರಾದಾರ|

Updated on:Jul 19, 2023 | 2:32 PM

Share

ಬೆಂಗಳೂರು ಜು.18: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯ ಬಿಜೆಪಿ (BJP) ನಾಯಕರು ಕಾಂಗ್ರೆಸ್ (Congress) ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡುತ್ತಿದ್ದಾರೆ. ಈ ಮಧ್ಯೆ ಬೆಂಗಳೂರಿನಲ್ಲಿ (Bengaluru) ಐವರು ಶಂಕಿತ ಭಯೋತ್ಪಾದಕರ (Suspect Terrorist) ಪೊಲೀಸರು ಬಂಧಿಸಿದ್ದು, ಈ ಪ್ರಕರಣವನ್ನು ಕೂಡಲೇ ಎನ್​ಐಎ (NIA) ತನಿಖೆಗೆ ವಹಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದರು. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕ್ಲಬ್​​ಗಳಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗಿವೆ. ಹಫ್ತಾ ವಸೂಲಿ ತೀವ್ರವಾಗುತ್ತಿದೆ. ಬೆಂಗಳೂರು ಉಗ್ರರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ. ಕ್ರಿಮಿನಲ್ ಚಟುವಟಿಕೆಗೆ ಕುಮ್ಮಕ್ಕು ಕೊಡುವಂತಹ ಕೆಲಸ ಆಗುತ್ತಿದೆ ಎಂದರು.

ಶಂಕಿತ ಭಯೋತ್ಪಾದಕರಿಗೆ ಅಂತಾರಾಷ್ಟ್ರೀಯ ಸಂಸ್ಥೆಗಳ ಬೆಂಬಲವಿದೆ. ಬೆಂಗಳೂರಿನಲ್ಲಿ ಸ್ಫೋಟ ಮಾಡುವ ಹುನ್ನಾರ ಇತ್ತು. ಈ ಸರ್ಕಾರವನ್ನು ಮಧ್ಯವರ್ತಿಗಳು ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು ಎಂದು ಆಗ್ರಹಿಸಿದರು.

ಸೆಂಟ್ರಲ್ ಏಜನ್ಸಿಗಳಿಗೆ ತನಿಖೆಗೆ ಕೊಡಬೇಕು

ಕಳೆದ 2 ತಿಂಗಳಲ್ಲಿ ಬಿಲದಲ್ಲಿ ಇದ್ದ ಇಂತ ದುಷ್ಟ ಶಕ್ತಿಗಳಿಗೆ ಹೊಸ ಸರ್ಕಾರದಿಂದ ಪ್ರೇರಣೆ ಸಿಕ್ಕಿದೆ ಅಂತ ಕಾಣುತ್ತೆ. ಇಡೀ ರಾಜ್ಯದಲ್ಲಿ ಬಿಲದಲ್ಲಿ ಇದ್ದವರು ಹೊರಗೆ ಬರುತ್ತಿದ್ದಾರೆ. ಇದನ್ನ ಬಿಗಿ ಮಾಡುವಂತಹ ಕೆಲಸ ಮಾಡಬೇಕಾಗಿದೆ. ನಮ್ಮ ಸರ್ಕಾರದಲ್ಲೂ ಇಂತ ಘಟನೆಗಳು ನಡೆದಿದ್ದವು. ನಾವು ಇವನ್ನು ಅಷ್ಟು ಸುಲಭವಾಗಿ ಬಿಡಲಿಲ್ಲ. ಮಂಗಳೂರು ಬಾಂಬ್ ಬ್ಲಾಸ್ಟ್​ನಲ್ಲಿ ಸಿಕ್ಕ ವ್ಯಕ್ತಿಯನ್ನು ಬಂಧಿಸಿ ಅವನಿಗೆ ಚಿಕಿತ್ಸೆ ಕೊಡಿಸಿ ಹೊರಗೆ ಎಷ್ಟು ಲಿಂಕ್ ಇತ್ತು ಅನ್ನೋದು ಎನ್​ಐಎಗೆ ಗೊತ್ತಾಗಿದೆ. ಹೀಗಾಗಿ ಇದನ್ನು FIR ಹಾಕಿ ಬಿಡೋದಲ್ಲ, ಮೂಲವನ್ನ ಕೆದಕಬೇಕು. ಸೆಂಟ್ರಲ್ ಏಜನ್ಸಿಗಳಿಗೆ ತನಿಖೆಗೆ ಕೊಡಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಶಂಕಿತ ಉಗ್ರರಿಂದ ಭಾರಿ ವಿಧ್ವಂಸಕ ಕೃತ್ಯವೆಸಗಲು ಸಂಚು​, ಸ್ಟೋಟಕ ಮಾಹಿತಿ ಬಹಿರಂಗಪಡಿಸಿದ ಪೊಲೀಸ್ ಕಮಿಷನರ್

ಸಿಸಿಬಿ ಪೋಲಿಸರು ಒಳ್ಳೆ ಕೆಲಸ ಮಾಡಿದ್ದಾರೆ, ಅವರಿಗೆ ಅಭಿನಂಧಿಸುತ್ತೇನೆ. ಮುಂದೆಯೂ ಒಳ್ಳೆ ಕೆಲಸ ಮಾಡಬೇಕು. ಸಿಕ್ಕಿರುವ ಶಂಕಿತ ಉಗ್ರರನ್ನ ನೋಡಿದಾಗ, ಅವರ ಬಳಿ ಸಿಕ್ಕಿರುವ ವೆಪನ್ ನೋಡಿದಾಗ ಶಾಂತಿ ಸುವ್ಯವಸ್ಥಿತಯನ್ನ ಹಾಳು ಮಾಡುವ ಕೆಲಸ ಮಾಡಲು ಸಜ್ಜಾಗಿದ್ದರು ಎಂದು ಕಾಣಿಸುತ್ತೆ. ನಾವು ಅಪಾಯಕಾರಿ ಸನ್ನಿವೇಶದಲ್ಲಿ ಇದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.

ಸರ್ಕಾರ ಹೆಚ್ಚು ಗಮನ ಕೊಡಬೇಕು

ಭಯೋತ್ಪಾದಕರನ್ನು ಹಿಡಿದಿದ್ದಾರೆ. ನಮ್ಮ ಪೊಲೀಸ್‌ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಇಂತಹ ಸೂಕ್ಷ್ಮ ವಿಚಾರದಲ್ಲಿ ಮೈ ಮರೆಯದೆ ಕೆಲಸ ಮಾಡಿದ್ದಾರೆ. ಉಗ್ರರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರ್ಕಾರ ಕೂಡ ಈ ಬಗ್ಗೆ ಹೆಚ್ಚು ಗಮನ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​​ ಡಿ ಕುಮಾರಸ್ವಾಮಿ ಹೇಳಿದರು.

ಬಂಧಿತ ಐವರು ಭಯೋತ್ಪಾದಕ ಶಂಕಿತರು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ವರದಿಯಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ತಿಳಿಸಿದ್ದಾರೆ. ಬಂಧಿತರಿಂದ ಪೊಲೀಸರು ಸ್ಫೋಟಕ ವಸ್ತುಗಳನ್ನು ಪತ್ತೆ ಹಚ್ಚಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಬುಧವಾರ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರ ಮೇಲೆ ದಾಳಿ ನಡೆಸಿದ್ದು, ಭಯೋತ್ಪಾದನಾ ಚಟುವಟಿಕೆಗಳ ಶಂಕೆಯ ಮೇಲೆ ಐವರನ್ನು ಬಂಧಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:20 pm, Wed, 19 July 23

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?