ಬೆಂಗಳೂರು: ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿಯ ಬರ್ಬರ ಕೊಲೆ; ನಾಲ್ವರಿಂದ ಅತ್ಯಾಚಾರ ಶಂಕೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯೋರ್ವಳ ಕೊಲೆಯಾಗಿದ್ದು, ನಾಲ್ವರು ಯುವಕರು ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿಯ ಬರ್ಬರ ಕೊಲೆ; ನಾಲ್ವರಿಂದ ಅತ್ಯಾಚಾರ ಶಂಕೆ
ಸಾಂದರ್ಭಿಕ ಚಿತ್ರ
Follow us
Rakesh Nayak Manchi
|

Updated on: Mar 25, 2023 | 6:38 PM

ಬೆಂಗಳೂರು: ವಿದ್ಯಾರ್ಥಿನಿಯನ್ನು ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಕೊಲೆ ಮಾಡಿದ ಘಟನೆ ನಗರದ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ನಾಲ್ವರು ಯುವಕರಿಂದ ಅತ್ಯಾಚಾರ (Rape And Murder In Bengaluru) ಎಸಗಿರುವ ಶಂಕೆಯೂ ವ್ಯಕ್ತವಾಗಿದೆ. ವಿದ್ಯಾರ್ಥಿನಿ ಮೃತಪಟ್ಟ ವೇಳೆ ಆರೋಪಿಗಳು ಫೋಟೋ ತೆಗೆದಿದ್ದು, ಮೃತದೇಹದ ಅಕ್ಕಪಕ್ಕದಲ್ಲಿ ಮೂವರು ಯುವಕರು ಕಂಡುಬಂದಿದ್ದಾರೆ. ಕೃತ್ಯ ಸಂಬಂಧ ಪ್ರಕರಣ ದಾಖಲಿಸಿಕೊಂಡ ಕಗ್ಗಲಿಪುರ ಠಾಣಾ ಪೊಲೀಸರು ವೆಂಕಟೇಶ್ ಎಂಬಾತನನ್ನು ಬಂಧಿಸಿ ತೀವ್ರ ವಿಚಾರಣೆ ಆರಂಭಿಸಿದ್ದು, ಪರಾರಿಯಾಗಿರುವ ಉಳಿದ ಆರೋಪಿಗಳ ಬಂಧನಕ್ಕೆ ತನಿಖೆ ಮುಂದುವರಿಸಲಾಗಿದೆ.

ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆಯಾಗಿದ್ದು, ವಿದ್ಯಾರ್ಥಿನಿ ಮೃತಪಟ್ಟ ವೇಳೆ ತೆಗೆದಿರುವ ಫೋಟೋ ಟಿವಿ9ಗೆ ಲಭ್ಯವಾಗಿದೆ. ಫೋಟೋದಲ್ಲಿ ಮೂವರ ಯುವಕರು ಪತ್ತೆಯಾಗಿದ್ದಾರೆ. ಓರ್ವ ಯುವಕ ಯುವತಿಯ ಮೃತದೇಹವನ್ನ ಎತ್ತುತ್ತಿರುವ ಮತ್ತೋರ್ವ ದ್ವಿಕಚಕ್ರ ವಾಹನದಲ್ಲಿ ಕುಳಿತಿದ್ದು, ಮತ್ತೋರ್ವ ದ್ವಿಚಕ್ರ ವಾಹನದ ಕಿಕ್ಕರ್ ತುಳಿಯುವುದನ್ನು ಕಾಣಬಹುದು. ಮತ್ತೋರ್ವ ವ್ಯಕ್ತಿ ಫೋಟೋ ತೆಗೆದವನಾಗಿದ್ದಾನೆ.

ಇದನ್ನೂ ಓದಿ: Delhi Crime: 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಶಾಲೆಯ ಪ್ಯೂನ್ ಬಂಧನ

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಕಾರವಾರ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹನುಮಂತ ನಗರದಲ್ಲಿ ನಡೆದಿದೆ. ಈಶ್ವರ ಮಂಜುನಾಥ ನಾಯ್ಕ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಬೇಕರಿ ಅಂಗಡಿಯೊಂದರಲ್ಲಿ ಕೆಸಲ ಮಾಡಿಕೊಂಡಿದ್ದ ಮಂಜುನಾಥ, ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಭಟ್ಕಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವಕನ ಆತ್ಮಹತ್ಯೆಗೆ ನಿಖರವಾದ ಕಾರಣ ತನಿಖೆ ನಂತರ ತಿಳಿದುಬರಬೇಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್