ಬೆಂಗಳೂರು: ಶಂಕಿತ ಭಯೋತ್ಪಾದಕ ಆರೀಫ್ ಬಂಧನ, ಎಲ್ಲಿಗೆ ತೆರಳಲು ಪ್ಲಾನ್​ ಮಾಡಿದ್ದ ಗೊತ್ತಾ?

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 11, 2023 | 10:31 AM

ಬೆಂಗಳೂರಿನ ಥಣಿಸಂದ್ರದ ಮಂಜುನಾಥ ನಗರದಲ್ಲಿ ವಾಸವಿದ್ದ ಶಂಕಿತ ಉಗ್ರ ಆರೀಫ್ ಎಂಬಾತನನ್ನ ಇದೀಗ ಐಎಸ್​ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ಕಾರ್ಯಾಚರಣೆಯಿಂದ ಅರೆಸ್ಟ್​ ಮಾಡಲಾಗಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಬೆಂಗಳೂರು: ಶಂಕಿತ ಭಯೋತ್ಪಾದಕ ಆರೀಫ್ ಬಂಧನ, ಎಲ್ಲಿಗೆ ತೆರಳಲು ಪ್ಲಾನ್​ ಮಾಡಿದ್ದ ಗೊತ್ತಾ?
ಶಂಕಿತ ಉಗ್ರ ಆರೀಫ್​
Follow us on

ಬೆಂಗಳೂರು: ಐಎಸ್​ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳಿಂದ ಕಾರ್ಯಾಚರಣೆಯಿಂದ ಥಣಿಸಂದ್ರದ ಮಂಜುನಾಥ ನಗರದಲ್ಲಿ ವಾಸವಿದ್ದ ಶಂಕಿತ ಉಗ್ರ ಆರೀಫ್ ಎಂಬಾತನನ್ನ ಅರೆಸ್ಟ್ ಮಾಡಿದ್ದಾರೆ. 2 ವರ್ಷಗಳಿಂದ ಅಲ್​ಖೈದಾ(ಉಗ್ರ ಸಂಘಟನೆ) ಜೊತೆ ಸಂಪರ್ಕದಲ್ಲಿದ್ದ ಆರೀಫ್​, ಟೆಲಿಗ್ರಾಮ್ ಹಾಗೂ ಡಾರ್ಕ್ ನೆಟ್ ಮೂಲಕ ಅಲ್​ಖೈದಾ ಗ್ರೂಪ್​ಗಳಲ್ಲಿ ಸಕ್ರಿಯನಾಗಿದ್ದನು. ಸಾಫ್ಟ್‌ವೇರ್ ಕಂಪನಿಯಲ್ಲಿ ಇದ್ದ ಇತ, ವರ್ಕ್ ಫ್ರಮ್​ ಹೋಮ್ ಮೂಲಕ ಕೆಲಸ ಮಾಡ್ತಿದ್ದ.

ಮುಂದಿನ ತಿಂಗಳು​ ಇರಾಕ್​ ಮೂಲಕ ಸಿರಿಯಾ ಹಾಗೂ ಆಫ್ಘನ್​ಗೆ ಹೋಗಲು ಪ್ಲ್ಯಾನ್ ಮಾಡಿದ್ದ ಇತ ಫ್ಲೈಟ್ ಟಿಕೆಟ್​ಗೆ ಎಲ್ಲಾ ಸಿದ್ಧತೆ ಸಹ ಮಾಡಿಕೊಂಡಿದ್ದಾನೆ. ಈ ಹಿಂದೆ ಕೂಡ ಸಿರಿಯಾಕ್ಕೆ ಇರಾಕ್ ಮೂಲಕ ತೆರಳಲು ಯತ್ನಿಸಿದ್ದ. ಆದರೆ ಎರಡೂ ದೇಶಗಳಿಂದ ಒಪ್ಪಿಗೆ ಇಲ್ಲದ ಕಾರಣ ಹೋಗಲು ಸಾದ್ಯವಾಗಿರಲಿಲ್ಲಾ. ಈಗ ಮಾರ್ಚ್​ನಲ್ಲಿ ಮತ್ತೆ ಇರಾಕ್ ಮೂಲಕ ಸಿರಿಯಾ ಹಾಗೂ ಅಫ್ಘಾನ್​ಗೆ ತರಳಲು ಪ್ಲಾನ್ ಮಾಡಿ ಫ್ಲೈಟ್ ಟಿಕೆಟ್ ರೆಡಿಯಾಗುತಿತ್ತು. ಈ ಎಲ್ಲಾ ಖಚಿತ ಮಾಹಿತಿ ಮೇರೆಗೆ ಶಂಕಿತ ಭಯೋತ್ಪಾದಕ ಆರೀಫ್​ನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗಿದೆ. ತನಿಖೆ ಬಳಿಕ ಮತ್ತಷ್ಟು ವಿಚಾರ ಬಯಲಿಗೆ ಬರಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ