ಬೆಂಗಳೂರಿನಲ್ಲಿ ಬಂಗಾಳದ ಯುವಕನ ಅನುಮಾನಸ್ಪದ ಸಾವು, ಹೂತಿಟ್ಟ ಶವ ಹೊರತೆಗೆದ ಪೊಲೀಸರು

ಪಶ್ಚಿಮ ಬಂಗಾಳ ಮೂಲದ ಯುವಕ ಸಾವಿನ ಹಿಂದೆ ಅನುಮಾನ ವ್ಯಕ್ತವಾಗಿದ್ದು, ಹೂತಿಟ್ಟ ಮೃತದೇಹವನ್ನು ಹೊರತೆಗೆದ ಬೆಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಯೋ, ಕೊಲೆಯೋ ಎಂಬುದನ್ನ ಪತ್ತೆಹಚ್ಚಲು ಮೃತದೇಹ ಹೊರತೆಗೆಯಲಾಗಿದೆ.

ಬೆಂಗಳೂರಿನಲ್ಲಿ ಬಂಗಾಳದ ಯುವಕನ ಅನುಮಾನಸ್ಪದ ಸಾವು, ಹೂತಿಟ್ಟ ಶವ ಹೊರತೆಗೆದ ಪೊಲೀಸರು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Feb 07, 2023 | 7:39 AM

ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಯುವಕ ಸಾವಿನ (Suspicious death) ಅಸಲಿಯತ್ತು ಪತ್ತೆಯಚ್ಚುವ ನಿಟ್ಟಿನಲ್ಲಿ ಹೂತಿಟ್ಟ ಮೃತದೇಹವನ್ನು ಹೊರತೆಗೆದ ಬೆಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಯೋ, ಕೊಲೆಯೋ ಎಂಬುದನ್ನ ಪತ್ತೆಹಚ್ಚಲು ಮೃತದೇಹ ಹೊರತೆಗೆಯಲಾಗಿದೆ. ಎರಡು ವಾರದ ಹಿಂದೆ ಕೂಲಿ ಕೆಲಸ ಮಾಡಿಕೊಂಡಿದ್ದ ರಸೂಲ್ ಎಂಬ ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಆದರೆ ಸಾವಿನ ವಿಷ್ಯವನ್ನ ಪೊಲೀಸರಿಗೆ ತಿಳಿಸದೇ ಸ್ನೇಹಿರು ಅಂತ್ಯಕ್ರಿಯೆ ಮಾಡಿ ಮುಗಿಸಿದ್ದರು. ಇದೀಗ ಸಾವಿನ ಹಿಂದೆ ಅನುಮಾನ ಹುಟ್ಟಿಕೊಂಡ ಹಿನ್ನಲೆ ಶವ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ನಗರದ ಕಾಡುಗೋಡಿ ಪೊಲೀಸರು ಶವ ಹೊರತೆಗೆದಿದ್ದು, ರಸೂಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಕೊಲೆ ಮಾಡಿ ಹೂತು ಹಾಕಲಾಗಿತ್ತೋ ಎಂಬುದನ್ನ ಪತ್ತೆಹಚ್ಚಲು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ವರದಿ ಬಂದ ನಂತರವಷ್ಟೇ ಸಾವಿನ ಅಸಲಿಯತ್ತು ತಿಳಿದುಬರಲಿದೆ. ಸದ್ಯ ಮರಣೋತ್ತರ ಪರೀಕ್ಷೆ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಇದನ್ನೂ ಓದಿ: ದೆಹಲಿ: ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ ಪಾರ್ಶ್ವವಾಯು ಪೀಡಿತ ಅಪ್ಪನನ್ನು ಹೊಡೆದು ಕೊಂದ ಮಗ

ರಸೂಲ್​ನನ್ನು ಬಿಟ್ಟು ದೂರಾಗಿದ್ದ ಪತ್ನಿ

ಮೃತ ರಸೂಲ್ ಪತ್ನಿ ಆತನ ಬಿಟ್ಟು ಹೋಗಿದ್ದಳು, ಮತ್ತೊಂದೆಡೆ ಮಾಲೀಕ ಸಂಬಳ ಸಹ ಸರಿಯಾಗಿ ನೀಡುತ್ತಿರಲಿಲ್ಲ. ಈ ಎರಡು ವಿಚಾರಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯೂ ಇದೆ. ಆದರೆ ಸ್ನೇಹಿತರು ಮತ್ತು ಮಾಲೀಕ, ಸಾವಿನ ಬಗ್ಗೆ ಯಾರಿಗೂ ತಿಳಿಸದೇ ಸಮಾಧಿ ಮಾಡಿದ ಹಿನ್ನಲೆ ಮೃತ ರಸೂಲ್ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಸಾವಿನ ಮಾಹಿತಿ ನೀಡದೇ ಅಂತ್ಯಕ್ರಿಯೆ ನಡೆಸಿರುವ ಬಗ್ಗೆ ಕಾಡುಗೊಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:39 am, Tue, 7 February 23

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ