AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಲಿಕೇಶಿನಗರ ಅನುಮಾನಾಸ್ಪದ ಸ್ಫೋಟ: FIR ದಾಖಲು; ತನಿಖೆಗೆ ವಿಶೇಷ ತಂಡಗಳ ರಚನೆ

ಬೆಂಗಳೂರಿನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪುಲಿಕೇಶಿನಗರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸ್ಥಳಕ್ಕೆ ಎಫ್ಎಸ್ಎಲ್ ತಜ್ಞರು ಮತ್ತು ಎಟಿಸಿ ತಂಡದಿಂದಲೂ ಪರಿಶೀಲನೆ ಮಾಡಿದ್ದು ಸ್ಫೋಟದ ಮಾದರಿ ಸಂಗ್ರಹಿಸಿದ್ದಾರೆ. ಸದ್ಯ ಸ್ಫೋಟ ಪ್ರಕರಣವನ್ನ ಭೇದಿಸಲು ವಿಶೇಷ ತಂಡಗಳ ರಚನೆ ಮಾಡಲಾಗಿದೆ.

ಪುಲಿಕೇಶಿನಗರ ಅನುಮಾನಾಸ್ಪದ ಸ್ಫೋಟ: FIR ದಾಖಲು; ತನಿಖೆಗೆ ವಿಶೇಷ ತಂಡಗಳ ರಚನೆ
ಐದಂತಸ್ತಿನ ಕಟ್ಟಡದಲ್ಲಿ ಸ್ಫೋಟ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 21, 2026 | 8:43 PM

Share

ಬೆಂಗಳೂರು, ಅಕ್ಟೋಬರ್​ 21: ಪುಲಿಕೇಶಿನಗರದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರಿನ ಪುಲಿಕೇಶಿನಗರ ಠಾಣೆಯಲ್ಲಿ BNS​​ 61, 3(5), ಸ್ಫೋಟಕ ವಸ್ತು ಕಾಯ್ದೆ 3, 5ರಡಿ ಎಫ್​​ಐಆರ್​ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ಆರಂಭಿಸಿದ್ದು, ಸ್ಫೋಟಕ್ಕೆ ಕಾರಣವಾದ ವಸ್ತುವಿನ ಕುರಿತು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ.

ಕಾಯ್ದೆಗಳ ವಿವರ ಹೀಗಿದೆ  

ಬಿಎನ್ಎಸ್ ಸೆಕ್ಷನ್ 61: ಇಬ್ಬರು ಅಥವಾ ಅದಕ್ಕಿಂತ ಹೆಚ್ಚಿನ ವ್ಯಕ್ತಿಗಳು ಸೇರಿ ಅಪರಾಧಿಕ ಸಂಚು ರೂಪಿಸುವುದು. ಬಿಎನ್ಎಸ್ ಸೆಕ್ಷನ್ 3(5): ಸಾಮಾನ ಉದ್ದೇಶದಿಂದ ಹಲವಾರು ವ್ಯಕ್ತಿಗಳು ಸೇರಿಕೊಂಡು ಅಪರಾಧ ಕೃತ್ಯ ಎಸಗುವುದು.

ಇದನ್ನೂ ಓದಿ: ಪುಲಕೇಶಿನಗರದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಬ್ಲಾಸ್ಟ್ ಕೇಸ್: ಮಹತ್ವದ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ!

ಸ್ಫೋಟಕ ವಸ್ತುಗಳ ಕಾಯ್ದೆ ಸೆಕ್ಷನ್ 3 ಮತ್ತು 5 ಏನು ಹೇಳುತ್ತದೆ ಎಂದು ನೋಡುವುದಾರೆ, ಸೆಕ್ಷನ್ 3- ಸ್ಫೋಟಕ ವಸ್ತುಗಳ ಮೂಲಕ ಜೀವ ಅಥವಾ ಆಸ್ತಿಗೆ ಹಾನಿಯುಂಟು ಮಾಡುವುದು. ಸೆಕ್ಷನ್ 5- ಯಾವುದೇ ಪರವಾನಗಿ ಇಲ್ಲದೆ ಅನುಮಾನಸ್ಪದ ವಸ್ತು ಅಥವಾ ಸ್ಫೋಟಕ ವಸ್ತುಗಳ ತಯಾರಿ ಅಥವಾ ಸಂಗ್ರಹಿಸುವುದು.

ಸ್ಫೋಟದ ಮಾದರಿ ಸಂಗ್ರಹಿಸಿದ FSL ತಜ್ಞರು

ಇನ್ನು ಸ್ಫೋಟ ಸಂಭವಿಸಿದ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿ ಸ್ಫೋಟದ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಯೂ ಸ್ಥಳ ಪರಿಶೀಲನೆ ಮಾಡಿದ್ದಾರೆ. ಸ್ಫೋಟಕ್ಕೆ ಕಾರಣವಾದ ವಸ್ತು ಯಾವುದು ಎಂಬುದನ್ನು ಪತ್ತೆಹಚ್ಚಲು ಅಗತ್ಯ ಪರಿಶೀಲನೆ ಕೈಗೊಳ್ಳಲಾಗಿದೆ. ಅಷ್ಟೇ ಅಲ್ಲದೆ ಭಯೋತ್ಪಾದನಾ ನಿರೋಧಕ ದಳ ತಂಡವೂ ಸ್ಥಳದಲ್ಲಿ ಪರಿಶೀಲನೆ ಮಾಡಿದೆ.

LIVE TV

ಪ್ರಕರಣ ಭೇದಿಸಲು ವಿಶೇಷ ತಂಡಗಳ ರಚನೆ

ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪ್ರಕರಣವನ್ನು ಭೇದಿಸಲು ವಿಶೇಷ ತನಿಖಾ ತಂಡಗಳನ್ನು ರಚನೆ ಮಾಡಲಾಗಿದೆ.

ಪ್ರಕರಣದ ಹಿನ್ನೆಲೆ

ಅಕ್ಟೋಬರ್ 20ರಂದು ಮಧ್ಯಾಹ್ನ 2.30ರ ಸುಮಾರಿಗೆ ಪುಲಕೇಶಿನಗರದಲ್ಲಿರುವ ಐದಂತಸ್ತಿನ ಕಟ್ಟಡದಲ್ಲಿ ಸ್ಫೋಟ ಸಂಭವಿಸಿತ್ತು. ಬ್ಯಾಟರಿ ಆನ್ ಮಾಡುವಾಗ ಬ್ಲಾಸ್ಟ್ ಆಗಿ ಅಲ್ಲಾವುದ್ದೀನ್ ಮತ್ತು ನರೇಶ್ ಎಂಬ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ, ಪುಲಕೇಶಿನಗರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದರು. ‎ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಸಂಭವಿಸಿದ ಸ್ಫೋಟಕ್ಕೆ ಕಾರಣವೇನು ಅನ್ನೋದನ್ನು ಪತ್ತೆಹಚ್ಚಲು ಮುಂದಾಗಿದ್ದರು. ಈ ವೇಳೆ, ಇದು ಕೇವಲ ಬ್ಯಾಟರಿ ಸ್ಫೋಟವಲ್ಲ, ಐಇಡಿ ಅಂದರೆ ಇಂಪ್ರೂವೈಸ್ಡ್ ಎಕ್ಸ್‌ಪ್ಲೋಸಿವ್ ಡಿವೈಸ್ ಆಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಐಇಡಿಯನ್ನು ಭಯೋತ್ಪಾದಕ ದಾಳಿ ಮತ್ತು ವಿಧ್ವಂಸಕ ಕೃತ್ಯಗಳಿಗೆ ಬಳಸಲಾಗುತ್ತದೆ. ಈ ಐಇಡಿ ಪುಲಕೇಶಿನಗರದ ಕಟ್ಟಡಕ್ಕೆ ಬಂದಿದ್ದು ಹೇಗೆ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಇದನ್ನು ಓರ್ವ ವ್ಯಕ್ತಿ ತಂದು ಇಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಅಂಬಾರಿ ಹೊತ್ತ ಆನೆಯ ರಂಪಾಟ: ಜಿಲ್ಲಾಡಳಿತದ ಎಡವಟ್ಟಿನಿಂದ ಈ ಅವಘಡ
ಅಂಬಾರಿ ಹೊತ್ತ ಆನೆಯ ರಂಪಾಟ: ಜಿಲ್ಲಾಡಳಿತದ ಎಡವಟ್ಟಿನಿಂದ ಈ ಅವಘಡ
ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾದ ಕನ್ನಡ ಚಿತ್ರರಂಗದ ತಾರೆಯರು
ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾದ ಕನ್ನಡ ಚಿತ್ರರಂಗದ ತಾರೆಯರು
ಜಂಬೂಸವಾರಿ ವೈಭವ ಕಣ್ತುಂಬಿಕೊಂಡ ತೆಲಂಗಾಣ, ಕೇರಳ ಮುಖ್ಯಮಂತ್ರಿಗಳು
ಜಂಬೂಸವಾರಿ ವೈಭವ ಕಣ್ತುಂಬಿಕೊಂಡ ತೆಲಂಗಾಣ, ಕೇರಳ ಮುಖ್ಯಮಂತ್ರಿಗಳು
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ