ಬೆಂಗಳೂರು: ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ; ಬಾಲಕ ಸಾವು, ಹಲವರಿಗೆ ಗಾಯ
ಸ್ವಾತಂತ್ರ್ಯೋತ್ಸವ ಸಂಭ್ರಮ ದಿನದಂದು ಬೆಂಗಳೂರಿನಲ್ಲಿ ಭೀಕರ ಘಟನೆಯೊಂದು ನಡೆದಿದೆ. ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದ್ದು ಹಲವರಿಗೆ ಗಾಯಗಳಾಗಿವೆ. ಇದು ಸಿಲಿಂಡರ್ ಬ್ಲಾಸ್ಟ್ ಅಲ್ಲವೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಫೋಟದ ತೀವ್ರತೆಗೆ 8ಕ್ಕೂ ಹೆಚ್ಚು ಮನೆಗಳಿಗೂ ಹಾನಿ ಉಂಟಾಗಿದೆ. ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ಬೆಂಗಳೂರು, ಆಗಸ್ಟ್ 15: ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು (Explodes) ಓರ್ವ ಬಾಲಕ ಸಾವನ್ನಪ್ಪಿದ್ದು (death), 6 ಜನರಿಗೆ ಗಾಯಗಳಾಗಿರುವಂತಹ ಘಟನೆ ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿದ್ದ ಮುಬಾರಕ್(8) ಮೃತ ಬಾಲಕ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗಾಯಗೊಂಡವರು
ಕಸ್ತೂರಮ್ಮ(35), ಸರಸಮ್ಮ(50), ಶಬೀರನಾ ಬಾನು(35), ಸುಬ್ರಮಣಿ(62), ಶೇಖ್ ನಜೀದ್ ಉಲ್ಲಾ(37), 8 ವರ್ಷದ ಬಾಲಕಿ ಫಾತಿಮಾ ಸೇರಿ 12 ಜನರಿಗೆ ಗಾಯಗಳಾಗಿದ್ದು, ಸಂಜಯ್ಗಾಂಧಿ ಮತ್ತು ಜಯನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಆನೇಕಲ್ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ, ಬೆಚ್ಚಿಬಿದ್ದ ಸಾರ್ವಜನಿಕರು
ಗಾಯಾಳು ಕಸ್ತೂರಿಯ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಕಸ್ತೂರಿಗೆ 8 ವರ್ಷದ ಕಯಾಲ್ ಎಂಬಾ ಹೆಣ್ಣು ಮಗುವಿದೆ. ವಿಕ್ಟೋರಿಯಾ ಬರ್ನಿಂಗ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಮುಬಾರಕ್ ಬಾಲಕನ ಪಕ್ಕದ ಮನೆಯಲ್ಲಿ ಕಸ್ತೂರಿ ವಾಸವಿದ್ದರು.
ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 8ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿರುವ ಆಡುಗೋಡಿ ಠಾಣೆ ಪೊಲೀಸರು ಮೇಲ್ನೋಟಕ್ಕೆ ಸಿಲಿಂಡರ್ ಸ್ಟೋಟ ಸಂಭವಿಸಿರಬಹುದು ಎನ್ನತ್ತಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ನಿಂತಿದ್ದ ಖಾಸಗಿ ಶಾಲಾ ಬಸ್ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ಇದೇ ನಗರದ ಸಾಕಷ್ಟು ಜನರು ಬೆಳಗ್ಗೆಯೇ ಲಾಲ್ ಬಾಗ್ನಲ್ಲಿ ಕೆಲಸಕ್ಕೆ ಹೋಗುತ್ತಾರೆ. ಒಂದು ವೇಳೆ ಇಂದು ಕೆಲಸಕ್ಕೆ ಹೋಗದೆ ಇದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಸಿಲಿಂಡರ್ ಬ್ಲಾಸ್ಟ್ ಆಗಿರುವ ಸಾಧ್ಯತೆ ಕಡಿಮೆ ಅಂತ ಸ್ಥಳಿಯರು ಹೇಳುತ್ತಿದ್ದು, ತುಂಬಾ ದೊಡ್ಡ ಬ್ಲಾಸ್ಟ್ ಆಗಿದೆ. ಕೆಲವರ ಕೈ ಮತ್ತು ತಲೆ ಹೋಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಫೋಟಗೊಂಡಿರುವ ಮನೆ ಸುತ್ತ ಮುತ್ತಲಿನ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:25 am, Fri, 15 August 25



