ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ: ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ

Bengaluru Teachers Constituency Bypoll: ವಿಧಾನಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಇದೇ ಫೆಬ್ರವರಿ16ರಂದು ಉಪಚುನಾವಣೆ ನಡೆಯಲಿದ್ದು, ಅಂದು ಕ್ಷೇತ್ರ ವ್ಯಾಪ್ತಿಯ ಅರ್ಹ ಶಿಕ್ಷಕ ಮತದಾರರಿಗೆ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ: ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ
ವಿಧಾನಸೌಧ
Follow us
ರಮೇಶ್ ಬಿ. ಜವಳಗೇರಾ
|

Updated on:Feb 14, 2024 | 10:53 PM

ಬೆಂಗಳೂರು, (ಫೆಬ್ರವರಿ 14): ಕರ್ನಾಟಕ ವಿಧಾನಪರಿಷತ್​ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ(Bengaluru Teachers Constituency Bypoll: )ಇದೇ ಫೆಬ್ರವರಿ 16ರಂದು ನಡೆಯಲಿದ್ದು, ಇದಕ್ಕೆ ಬಿಬಿಎಂಪಿ ಎಲ್ಲಾ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಈ ಸಂಬಂಧ ಮಲ್ಲೇಶ್ವರದ ಐಪಿಪಿ ಸಭಾಂಗಣದಲ್ಲಿ ಅಂತಿಮ ಹಂತದ ಕ್ರಮಗಳ ಕುರಿತು ಸಭೆ ಬಿಬಿಎಂಪಿ ನಡೆಸಿತು. ಇನ್ನು ಮತದಾನದ ದಿನ (ಫೆ.16) ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಇರಲಿದೆ. ಕ್ಷೇತ್ರ ವ್ಯಾಪ್ತಿಯ ಅರ್ಹ ಶಿಕ್ಷಕ ಮತದಾರರಿಗೆ ಅಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,  ರಾಮನಗರ ಜಿಲ್ಲೆಯ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ನಡೆಯಲಿದ್ದು, ಇಲ್ಲಿನ ಸರ್ಕಾರಿ, ಖಾಸಗಿ ಶಾಲಾ ಕಾಲೇಜು, ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಅರ್ಹ ಮತದಾರರಿಗೆ ಈ ರಜೆ ಆದೇಶ ಅನ್ವಯವಾಗಲಿದೆ. ಉಪ ಚುನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸಲು ಪೂರ್ವಾನುಮತಿ ಪಡೆಯಬೇಕೆಂದು ಷರತ್ತಿಗೆ ಒಳಪಟ್ಟು ಈ ರಜೆ ಮಂಜೂರು ಮಾಡುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ  ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶದಲ್ಲಿ ಸೂಚಿಸಿದೆ.

ಇದನ್ನೂ ಓದಿ: ಪರಿಷತ್ ಚುನಾವಣೆಗೆ ಮದ್ಯ ಮಾರಾಟ ನಿರ್ಬಂಧ‌ದಲ್ಲಿ ಮಾರ್ಪಾಡು; ಮತದಾನ, ಎಣಿಕೆ‌‌ ದಿನದಂದು ಮಾತ್ರ ನಿರ್ಬಂಧ

ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 14,432 ಮತದಾರಾರು ಇದ್ದಾರೆ. ಫೆಬ್ರವರಿ 16ರ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಒಟ್ಟು 45 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಮತಗಟ್ಟೆಗಳ ಬಳಿ 144 ಸೆಕ್ಷನ್ ಇರಲಿದೆ.ಇನ್ನು ಫೆಬ್ರವರಿ 20 ರಂದು ಬೆಂಗಳೂರಿನ ನೃಪತುಂಗ ರಸ್ತೆಯ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತದಾನದ ಮೇಲ್ವಿಚಾರಣೆಗೆ FST,SST ಟೀಂ ರಚನೆ ಮಾಡಲಾಗಿದೆ.

‘ಮತದಾನದ ದಿನ ಫೆ.16 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಹಾಗೂ ಮತ ಎಣಿಕೆ ನಡೆಯುವ ಫೆ.20 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಮಾತ್ರ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:50 pm, Wed, 14 February 24

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್