ವಿಧಾನಪರಿಷತ್‌ ಚುನಾವಣೆ: ಸತತ 5 ಬಾರಿ ಗೆದ್ದಿದ್ದ ಕಾಂಗ್ರೆಸ್​​ನ ಪುಟ್ಟಣ್ಣಗೆ ಸೋಲು; ಎನ್‌ಡಿಎ ಅಭ್ಯರ್ಥಿ ರಂಗನಾಥ್​​ಗೆ ಜಯ

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಸತತ 5 ಬಾರಿ ಗೆದ್ದಿದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರಿಗೆ ಸೋಲಾಗಿದ್ದು, ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎ.ಪಿ. ರಂಗನಾಥ್ 908 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಪ್ರಚಂಡ ಗೆಲುವು ದಾಖಲಿಸಿದ NDA ಮೈತ್ರಿಕೂಟದ ಅಭ್ಯರ್ಥಿ ವಿಜಯಕ್ಕೆ ಬಿಜೆಪಿ-ಜೆಡಿಎಸ್​​ ಸಂತಸ ವ್ಯಕ್ತಪಡಿಸಿದೆ.

ವಿಧಾನಪರಿಷತ್‌ ಚುನಾವಣೆ: ಸತತ 5 ಬಾರಿ ಗೆದ್ದಿದ್ದ ಕಾಂಗ್ರೆಸ್​​ನ ಪುಟ್ಟಣ್ಣಗೆ ಸೋಲು; ಎನ್‌ಡಿಎ ಅಭ್ಯರ್ಥಿ ರಂಗನಾಥ್​​ಗೆ ಜಯ
ಎ.ಪಿ.ರಂಗನಾಥ್‌
Image Credit source: Ranganatha AP Facebook Page
Edited By:

Updated on: Oct 27, 2026 | 6:56 PM

ಬೆಂಗಳೂರು, ಅಕ್ಟೋಬರ್​​ 27: ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಸತತ 5 ಬಾರಿ ಗೆದ್ದಿದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಸೋಲುಂಡಿದ್ದು, ಎನ್‌ಡಿಎ ಅಭ್ಯರ್ಥಿ ಎ.ಪಿ.ರಂಗನಾಥ್‌ ಗೆಲುವಿನ ನಗೆ ಬೀರಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 27,405 ಮತದಾರರಿದ್ದು, 22,468 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ ನ್ ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ 10,810 ವೋಟ್​​ ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಪರ 9,902 ಮತಗಳು ಬಂದಿವೆ. ಅಂತಿಮವಾಗಿ 908 ಮತಗಳ ಅಂತರದಲ್ಲಿ ಎನ್​​ಡಿಎ ಅಭ್ಯರ್ಥಿ ಗೆದ್ದು ಬೀಗಿದ್ದಾರೆ. ಚಲಾವಣೆಯಾಗಿದ್ದ ಒಟ್ಟು ಮತಗಳ ಪೈಕಿ 20,611 ಸಿಂಧುವಾಗಿದ್ದರೆ, 1,857 ಅಸಿಂಧುವಾಗಿವೆ.

ಬಿಜೆಪಿ-ಜೆಡಿಎಸ್​​ ಸಂತಸ

2026ರ ಕರ್ನಾಟಕ ವಿಧಾನಪರಿಷತ್ ಚುನಾವಣೆಯ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಪ್ರಚಂಡ ಗೆಲುವು ದಾಖಲಿಸಿದ ಎನ್.ಡಿ.ಎ (ಬಿಜೆಪಿ – ಜೆಡಿಎಸ್) ಮೈತ್ರಿಕೂಟದ ಅಭ್ಯರ್ಥಿ ಎ.ಪಿ.ರಂಗನಾಥ್‌ ಅವರಿಗೆ ಜೆಡಿಎಸ್​​ ಅಭಿನಂದನೆ ತಿಳಿಸಿದೆ. ರಂಗನಾಥ್ ಅವರ ಮೇಲೆ ವಿಶ್ವಾಸವಿಟ್ಟು, ಶಿಕ್ಷಕರ ಹಿತರಕ್ಷಣೆ ಮತ್ತು ಶಿಕ್ಷಣ ಕ್ಷೇತ್ರದ ಏಳಿಗೆಗಾಗಿ ಮತ ನೀಡಿ ಬೆಂಬಲಿಸಿದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಸಮಸ್ತ ಶಿಕ್ಷಕ ಹಾಗೂ ಅಧ್ಯಾಪಕ ಬಂಧುಗಳಿಗೆ ಅನಂತ ಧನ್ಯವಾದಗಳು. ಹಾಗೆಯೇ, ಈ ಐತಿಹಾಸಿಕ ಗೆಲುವಿಗಾಗಿ ಒಗ್ಗಟ್ಟಿನಿಂದ ಶ್ರಮಿಸಿದ ಬಿಜೆಪಿ ಮತ್ತು ಜೆಡಿಎಸ್​​ ಪಕ್ಷದ ಎಲ್ಲಾ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರಿಗೂ ವಿಶೇಷ ಕೃತಜ್ಞತೆಗಳು ಎಂದು ತಿಳಿಸಿದೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಖಂಡಿಸಿ ಬೆಂಗಳೂರಲ್ಲಿ ಬಿಜೆಪಿ ಪ್ರೊಟೆಸ್ಟ್​​: ಆಚಾರವಿಲ್ಲದ ನಾಲಿಗೆ ಎಂದು ಪೋಸ್ಟ್​​ ಮಾಡಿ ಕುಮಾರಸ್ವಾಮಿ ಕಿಡಿ

ಶಿಕ್ಷಕರ ಒಗ್ಗಟ್ಟಿಗೆ ಜಯ, ವಿಶ್ವಾಸಕ್ಕೆ ವಿಜಯ, ಸೇವಾ ಸಂಕಲ್ಪಕ್ಕೆ ಹೊಸ ಶಕ್ತಿ ಎಂದು ಬಿಜೆಪಿ ಶಾಸಕ ಸುರೇಶ್​​ ಕುಮಾರ್​​ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ 600ಕ್ಕೂ ಅಧಿಕ ಮತಗಳ ಅಂತರದಿಂದ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ–ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಯಾದ ಎ.ಪಿ. ರಂಗನಾಥ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಶಿಕ್ಷಕರ ಧ್ವನಿಯಾಗಿ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯ ಹರಿಕಾರರಾಗಿ, ಶಿಕ್ಷಕ ಸಮುದಾಯದ ಆಶೋತ್ತರಗಳನ್ನು ಈಡೇರಿಸುವಲ್ಲಿ ನಿಮ್ಮ ಕಾರ್ಯ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
Loading...
Unable to load recommendations.
Follow Us