AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟ್ಟಣ್ಣ ಪರ ಸರ್ಕಾರಿ ಅಧಿಕಾರಿಗಳಿಂದ ಪ್ರಚಾರ ಆರೋಪ: ಚುನಾವಣಾಧಿಕಾರಿಗೆ ದೂರು; ಅಧಿಕಾರಿಗಳ ಅಮಾನತಿಗೆ ಛಲವಾದಿ ಆಗ್ರಹ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಸರ್ಕಾರದ ಡಿಡಿಪಿಐ, ಬಿಇಒಗಳು ಮತ್ತು ಶಿಕ್ಷಕರು ಪ್ರಚಾರ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಬಿಜೆಪಿ-ಜೆಡಿಎಸ್ ಈ ಬಗ್ಗೆ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದು, ಬೆಂಬಲ ನೀಡದವರಿಗೆ ಆಡಳಿತಾತ್ಮಕ ಪರಿಣಾಮಗಳ ಎಚ್ಚರಿಕೆ ಕುರಿತು ಗಂಭೀರ ಆರೋಪಗಳಿವೆ. ಛಲವಾದಿ ನಾರಾಯಣಸ್ವಾಮಿ ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿದ್ದಾರೆ.

ಪುಟ್ಟಣ್ಣ ಪರ ಸರ್ಕಾರಿ ಅಧಿಕಾರಿಗಳಿಂದ ಪ್ರಚಾರ ಆರೋಪ: ಚುನಾವಣಾಧಿಕಾರಿಗೆ ದೂರು; ಅಧಿಕಾರಿಗಳ ಅಮಾನತಿಗೆ ಛಲವಾದಿ ಆಗ್ರಹ
ಪುಟ್ಟಣ್ಣ, ಛಲವಾದಿ ನಾರಾಯಣಸ್ವಾಮಿImage Credit source: tv9 kannada
ಕಿರಣ್​ ಹನಿಯಡ್ಕ
| Edited By: |

Updated on:Oct 12, 2026 | 8:15 PM

Share

ಮುಖ್ಯಾಂಶಗಳು

  • ಅ.23ರಂದು ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ
  • ಬೆಂಗಳೂರು ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಆರೋಪ
  • ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ದೂರು ಸಲ್ಲಿಕೆ

ಬೆಂಗಳೂರು, ಅಕ್ಟೋಬರ್​​ 12: ಅ. 23ರಂದು ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಈಗಾಗಲೇ ಅಖಾಡ ರಂಗೇರಿದೆ. ಈ ಮಧ್ಯೆ ಕಾಂಗ್ರೆಸ್​​ ಅಭ್ಯರ್ಥಿ ಪುಟ್ಟಣ್ಣ ಅವರು ಸರ್ಕಾರದ ಡಿಡಿಪಿಐ, ಬಿಇಒಗಳು, ಅಧಿಕಾರಿಗಳು ಮತ್ತು ಶಿಕ್ಷಕರನ್ನು ಕಚೇರಿಗೆ ಕರೆಸಿ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೆ ಬಿಜೆಪಿ ಮತ್ತು ಜೆಡಿಎಸ್​ ನಿಯೋಗ ಈ ಕುರಿತಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದೆ.

ದೂರಿನಲ್ಲಿ ಏನಿದೆ?

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಪರವಾಗಿ ಮತಯಾಚನೆ ನಡೆಸುತ್ತಿರುವ ಬಗ್ಗೆ ತಕ್ಷಣ ಗಮನ ಹರಿಸುವಂತೆ ರಾಜ್ಯ ಚುನಾವಣಾಧಿಕಾರಿಗೆ ಬಿಜೆಪಿ ಮತ್ತು ಜೆಡಿಎಸ್​ ನಿಯೋಗ ಮನವಿ ಮಾಡಿದೆ.

ಇದನ್ನೂ ಓದಿ: 4 ಶಾಸಕರ ಅವಧಿ ಅಂತ್ಯ: ಕರ್ನಾಟಕ ವಿಧಾನ ಪರಿಷತ್​​ ನಾಲ್ಕು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗಳಿಗೆ ಸಂಬಂಧಿಸಿದ ಡಿಡಿಪಿಐಗಳು, ಡಿಡಿಪಿಯುಗಳು, ಬಿಇಒಗಳು, ಶಿಕ್ಷಕರು ಹಾಗೂ ಇತರ ಅಧಿಕಾರಿಗಳು ಮತ್ತು ಕ್ಷೇತ್ರಮಟ್ಟದ ಸಿಬ್ಬಂದಿ ಪುಟ್ಟಣ್ಣ ಪರವಾಗಿ ಪ್ರಚಾರ ನಡೆಸಿ, ಬೆಂಬಲ ನೀಡುವಂತೆ ಮತದಾರರನ್ನು ಒತ್ತಾಯಿಸುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಈ ರೀತಿಯಾಗಿ ಚುನಾವಣಾ ಬೆಂಬಲ ನೀಡುವಂತೆ ಒತ್ತಾಯಿಸುವುದು ಸಾಮಾನ್ಯ ರಾಜಕೀಯ ಪ್ರಚಾರಕ್ಕೆ ಸಮಾನವಲ್ಲ.

LIVE TV

ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಸಿಬ್ಬಂದಿ ಮತ್ತು ಆಡಳಿತ ಮಂಡಳಿಗಳನ್ನು ಸಂಪರ್ಕ ಮಾಡಿ, ಪುಟ್ಟಣ್ಣ ಪರ ಬೆಂಬಲ ನೀಡುವಂತೆ ಒತ್ತಡ ಹೇರಲಾಗುತ್ತಿರುವುದು ತಿಳಿದುಬಂದಿದೆ. ಅಷ್ಟೇ ಅಲ್ಲದೆ ಪುಟ್ಟಣ್ಣ ಪರ ಬೆಂಬಲ ನೀಡದಿದ್ದರೆ ಆಡಳಿತಾತ್ಮಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂಬ ಗಂಭೀರ ದೂರುಗಳು ಕೇಳಿಬಂದಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಪರ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ 

ಇನ್ನು ಈ ಕುರಿತಾಗಿ ದೂರು ನೀಡಿದ ಬಳಿಕ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ‘ಕಾಂಗ್ರೆಸ್ ಅಭ್ಯರ್ಥಿಗೆ ಪ್ರಚಾರ ಮಾಡಲು ಜನರು ಸಿಗುತ್ತಿಲ್ಲ. ಹೀಗಾಗಿ ಸರ್ಕಾರದ ಡಿಡಿಪಿಐ, ಬಿಇಒಗಳು, ಅಧಿಕಾರಿಗಳು, ಶಿಕ್ಷಕರನ್ನು ಕಚೇರಿಗೆ ಕರೆಸಿ ಪ್ರಚಾರ ಮಾಡುತ್ತಿದ್ದಾರೆ’ ಎಂದು ವಾಗ್ದಾಳಿ ಮಾಡಿದರು.

ಅಧಿಕಾರಿಗಳ ಸಸ್ಪೆಂಡ್​ಗೆ ಆಗ್ರಹ

‘ಬೆಂಗಳೂರು ಶಿಕ್ಷಣ ಇಲಾಖೆ ಡಿಡಿ ನೀಲಕಂಠೇಗೌಡ ಮತ್ತು ನಾರಾಯಣ ಎಂಬ ಅಧಿಕಾರಿಯಿಂದಲೂ ಪ್ರಚಾರ ನಡೆಯುತ್ತಿದೆ. ಪುಟ್ಟಣ್ಣ ನಾಮಪತ್ರ ಸಲ್ಲಿಕೆ ವೇಳೆಯೂ ನಾರಾಯಣ ಜೊತೆಗಿದ್ದಾರೆ. ತಕ್ಷಣ ಅಧಿಕಾರಿ ನಾರಾಯಣ ಅವರನ್ನು ಸಸ್ಪೆಂಡ್ ಮಾಡುವಂತೆ’ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಜೆಡಿಎಸ್​​ಗೆ 1 ಸೀಟು!

‘ಆನೇಕಲ್​​ನಲ್ಲಿ ಕೊನೇ ವೇಳೆ ಮತಪಟ್ಟಿಗೆ ಹೆಸರು ಸೇರಿಸಲು ಯತ್ನಿಸಲಾಗಿದೆ. ಸೆ.30ರಂದು ನಡೆದ ಘಟನೆ ಬಗ್ಗೆ ದೂರು ನೀಡಿದರೂ ಕ್ರಮವಾಗಿಲ್ಲ. ಚುನಾವಣೆ ಗೆಲ್ಲಲು ಕಾಂಗ್ರೆಸ್ ಯಾವ ಮಟ್ಟಕ್ಕಾದ್ರೂ ಹೋಗುತ್ತೆ. ಅಧಿಕಾರಿಗಳ ಶಾಮೀಲಾತಿಯಲ್ಲಿ ನೈಟ್​​ಪಾರ್ಟಿ, ಗಿಫ್ಟ್ ಹಂಚಿಕೆ ಆಗುತ್ತಿದೆ’ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:11 pm, Mon, 12 October 26

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ
ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ