AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವನ್ನು, ಸಾಹಸಗಾಥೆಗಳನ್ನು ಹಂಚಿಕೊಳ್ಳಬೇಕು; ಬೆಂಗಳೂರು ಟೆಕ್ ಸಮಿಟ್​ನಲ್ಲಿ ವೆಂಕಯ್ಯ ನಾಯ್ಡು ಭಾಷಣ

ವಿಶ್ವದ ಎಲ್ಲಾ ಅತಿದೊಡ್ಡ ಸಂಸ್ಥೆಗಳಲ್ಲಿ ಭಾರತದವರದ್ದೇ ನೇತೃತ್ವ. ಇದು ಭಾರತೀಯರ ಜ್ಞಾನ, ಶ್ರಮವನ್ನು ಸಾರಿ ಹೇಳುತ್ತದೆ. ಮುಂಬರುವ ದಿನಗಳಲ್ಲಿ ಜ್ಞಾನಾರ್ಜನೆ ಬಗ್ಗೆ ಹೆಚ್ಚು ಒತ್ತು ನೀಡಬೇಕು.

ಜ್ಞಾನವನ್ನು, ಸಾಹಸಗಾಥೆಗಳನ್ನು ಹಂಚಿಕೊಳ್ಳಬೇಕು;  ಬೆಂಗಳೂರು ಟೆಕ್ ಸಮಿಟ್​ನಲ್ಲಿ ವೆಂಕಯ್ಯ ನಾಯ್ಡು ಭಾಷಣ
ಬೆಂಗಳೂರು ಟೆಕ್ ಸಮಿಟ್
TV9 Web
| Updated By: sandhya thejappa|

Updated on:Nov 17, 2021 | 1:29 PM

Share

ಬೆಂಗಳೂರು: ಇಂದಿನಿಂದ ಮೂರು ದಿನ ‘ಬೆಂಗಳೂರು ಟೆಕ್ ಸಮಿಟ್’ ನಡೆಯುತ್ತಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು 24ನೇ ಬೆಂಗಳೂರು ಟೆಕ್ ಸಮಿಟ್ ಅನ್ನು ಇಂದು (ನ.17) ಉದ್ಘಾಟಿಸಿ ಮಾತನಾಡಿದ್ದಾರೆ. ಜ್ಞಾನವನ್ನು, ಸಾಹಸಗಾಥೆಗಳನ್ನು ಹಂಚಿಕೊಳ್ಳಬೇಕು. ಉದ್ಯಮದಲ್ಲಿ ನವ ಚಿಂತನೆ ಅಳವಡಿಸಿಕೊಳ್ಳಬೇಕು. ದೇಶದ ಬಹುಪಾಲು ಜನ ಕೃಷಿ ಅವಲಂಬಿಸಿದ್ದಾರೆ. ಸಾಕಷ್ಟು ನವೀನತೆ ಉದ್ಯಮ ಕ್ಷೇತ್ರದಲ್ಲಿ ಆಗುತ್ತಿದೆ. ಬಿಟಿಎಸ್-2021 ಒಂದು ಅತ್ಯುತ್ತಮ ವೇದಿಕೆ. ಜಗತ್ತಿನ ಎಲ್ಲಾ ನಾಯಕರು ಒಂದಾಗುವ ಅವಕಾಶವಿದೆ ಅಂತ ಅಭಿಪ್ರಾಯಪಟ್ಟರು.

ವಿಶ್ವದ ಎಲ್ಲಾ ಅತಿದೊಡ್ಡ ಸಂಸ್ಥೆಗಳಲ್ಲಿ ಭಾರತದವರದ್ದೇ ನೇತೃತ್ವ. ಇದು ಭಾರತೀಯರ ಜ್ಞಾನ, ಶ್ರಮವನ್ನು ಸಾರಿ ಹೇಳುತ್ತದೆ. ಮುಂಬರುವ ದಿನಗಳಲ್ಲಿ ಜ್ಞಾನಾರ್ಜನೆ ಬಗ್ಗೆ ಹೆಚ್ಚು ಒತ್ತು ನೀಡಬೇಕು. ಇದು ಡಿಜಿಟಲ್ ಇಂಡಿಯಾ ಕಾರ್ಯಕ್ರಮದಲ್ಲಿ ನಡೆಯುತ್ತಿದೆ. ಇದರಿಂದ ಡಿಬಿಟಿಯಲ್ಲಿ ಹೆಚ್ಚು ಪ್ರಗತಿ ಆಗುತ್ತಿದೆ. ರಿಫಾರ್ಮ್, ಪರ್ಫಾರ್ಮ್, ಟ್ರಾನ್ಸ್ ಫಾರ್ಮ್ ಇವು ಪ್ರಧಾನಿ ನರೇಂದ್ರ ಮೋದಿಯವರ ಮೂಲಮಂತ್ರ ಅಂತ ಬೆಂಗಳೂರಿನಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ತಂತ್ರಜ್ಞಾನ ವಲಯದಲ್ಲಿ ಮಹತ್ತರ ಬದಲಾವಣೆಗಳು ಆಗಲಿದೆ. ಯಾವುದೇ ಆವಿಷ್ಕಾರ ಒಬ್ಬ ಮನುಷ್ಯನಿಂದಲೇ ಆರಂಭವಾಗುತ್ತೆ. ನಂತರ ಆ ಆವಿಷ್ಕಾರ ಜಗತ್ತಿಗೆ ನೆರವಾಗುತ್ತದೆ, ಜಗತ್ತು ಬಳಸುತ್ತೆ. ನಮ್ಮ ಬೆಂಗಳೂರು ತಂತ್ರಜ್ಞಾನದ ಹಬ್ ಆಗಿದೆ. ಇಲ್ಲಿ ಅಂತಹ ಆವಿಷ್ಕಾರ ಮಾಡುವ ಮಾನವ ಸಂಪನ್ಮೂಲ ಇದೆ. ಬೆಂಗಳೂರು ಟೆಕ್ ಸಮಿಟ್ ಮತ್ತಷ್ಟು ಯಶಸ್ವಿ ಮಾಡುವ ಗುರಿಯಿದೆ. ರಾಜ್ಯ ಸರ್ಕಾರ ದೂರದೃಷ್ಟಿಯುಳ್ಳ ನೀತಿಗಳನ್ನು ಹೊಂದಿದೆ. ಕರ್ನಾಟಕವನ್ನು ತಂತ್ರಜ್ಞಾನದಲ್ಲಿ ನಾಯಕ ರಾಜ್ಯ ಅನ್ನಬಹುದು. ನಾಯಕತ್ವ ವಹಿಸುವ ಉದ್ಯಮಿಗಳನ್ನು ನಾವು ಹೊಂದಿದ್ದೇವೆ. ಹಲವು ತಂತ್ರಜ್ಞಾನ ಸಾಧಕರು ನಮ್ಮಲ್ಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ಹೊಸ ಯೋಚನೆಗಳ ಬ್ರೈನ್ ಇದ್ದ ಹಾಗೆ. ಭವಿಷ್ಯದ ಸ್ಪೇಸ್ ಕ್ರಾಫ್ಟ್‌ನಲ್ಲಿ ಕುಳಿತು‌ ಪ್ರಯಾಣದ ಅನುಭವ ಆಗುತ್ತಿದೆ. ಬಾಹ್ಯಾಕಾಶದಲ್ಲಿ ಈಗಾಗಲೇ ಸಾಕಷ್ಟು ಕೆಲಸ ಮಾಡಿದ್ದೇವೆ. ಮತ್ತೆ ಹೊಸ ಪ್ರಯೋಗಗಳನ್ನು ‌ಮಾಡುತ್ತಲೇ ಇರುತ್ತೇವೆ ಎಂದು ಹೇಳಿಕೆ ನೀಡಿದ ಬೊಮ್ಮಾಯಿ, ಬೆಂಗಳೂರಿನಲ್ಲಿ ಹೊಸ ಪ್ರಯೋಗಕ್ಕೆ ‌ಎಲ್ಲರಿಗೂ ಸ್ವಾಗತ. ಇಲ್ಲಿನ ಕಾಯ್ದೆಗಳು ಹೊಸ ಪ್ರಯೋಗಗಳಿಗೆ ಅವಕಾಶ ‌ನೀಡುತ್ತೆ. ಕರ್ನಾಟಕದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ನುಡಿದರು.

ಮುಂದುವರಿದು ಮಾತನಾಡಿದ ಸಿಎಂ, ಬೆಂಗಳೂರು ಹಂಸ ಇದ್ದ ಹಾಗೆ. ಹಂಸ ಸರಸ್ವತಿ ವಾಹನ, ಬಹಳ ಎತ್ತರಕ್ಕೆ ಹಂಸ ಹಾರುತ್ತದೆ. ಮಾನಸ ಸರೋವರದಲ್ಲಿ ಹಂಸಗಳು‌ ಕಾಣಿಸುತ್ತವೆ. ಯಾವುದೇ ಹದ್ದುಗಳು ಅಲ್ಲಿ ಕಾಣಿಸುವುದಿಲ್ಲ. ಅದೇ ರೀತಿ ಬೆಂಗಳೂರು ಹಂಸ ನಗರ, ಸರಸ್ವತಿ ನಗರ. ಹೊಸ ಕರ್ನಾಟಕದಿಂದ ನವ ಭಾರತ ನಿರ್ಮಾಣ. ಪ್ರಧಾನಿ ‌ಮೋದಿ ಆಶಯ‌ ಕೂಡ ಇದೇ ಆಗಿದೆ. ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾದಿಂದ ಹೊಸ ಭಾರತ ಕಟ್ಟಲು ಮೋದಿ ಶ್ರಮಿಸುತ್ತಿದ್ದಾರೆ ಅಂತ ಅಭಿಪ್ರಾಯಪಟ್ಟರು.

ಇದನ್ನೂ ಓದಿ

Venkatesh Iyer: ಭಾರತ ತಂಡಕ್ಕೆ ಪದಾರ್ಪಣೆ ಮಾಡಲಿದ್ದಾರಾ ವೆಂಕಟೇಶ್ ಅಯ್ಯರ್?; ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ

ಚಿತ್ರದುರ್ಗ: ಕ್ಷುಲ್ಲಕ ವಿಚಾರಕ್ಕೆ 2 ಕುಟುಂಬಗಳ ನಡುವೆ ಜಗಳ; ವ್ಯಕ್ತಿ ಕೊಲೆಯಲ್ಲಿ ಅಂತ್ಯ

Published On - 1:20 pm, Wed, 17 November 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ