Atul Subhash: ಬಂಧನವಾದ್ರಾ ಅತುಲ್ ಸುಭಾಷ್ ಸಾವಿಗೆ ಕಾರಣವಾದವರು? ಬೆಂಗಳೂರು ಪೊಲೀಸ್​ ಆಯುಕ್ತ ಹೇಳಿದ್ದಿಷ್ಟು

| Updated By: ಡಾ. ಭಾಸ್ಕರ ಹೆಗಡೆ

Updated on: Dec 13, 2024 | 3:34 PM

ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಕರ್ನಾಟಕದಾದ್ಯಂತ ಸಾಕಷ್ಟು ಚರ್ಚೆಯಾಗುತ್ತಿದೆ. ಪ್ರಕರಣದ ತನಿಖೆಯನ್ನು ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ನಡೆಸುತ್ತಿದ್ದಾರೆ. ಮಾರತಹಳ್ಳಿ ಪೊಲೀಸರು ಉತ್ತರ ಪ್ರದೇಶಕ್ಕೆ ತೆರಳಿ, ತನಿಖೆ ನಡೆಸಿದ್ದು ಹಲವು ಮಹತ್ವದ ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್​ ಬಿ ದಯಾನಂದ್​ ಸುದ್ದಿಗೋಷ್ಠಿ ನಡೆಸಿ ಹಲವು ವಿಚಾರಗಳನ್ನು ತಿಳಸಿದ್ದಾರೆ.

Atul Subhash: ಬಂಧನವಾದ್ರಾ ಅತುಲ್ ಸುಭಾಷ್ ಸಾವಿಗೆ ಕಾರಣವಾದವರು? ಬೆಂಗಳೂರು ಪೊಲೀಸ್​ ಆಯುಕ್ತ ಹೇಳಿದ್ದಿಷ್ಟು
ಅತುಲ್ ಸುಭಾಷ್, ಬಿ ದಯಾನಂದ್​
Follow us on

ಬೆಂಗಳೂರು, ಡಿಸೆಂಬರ್​ 13: ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಸಹೋದರ ಮಾರತ್ತಹಳ್ಳಿ ಪೊಲೀಸ್ (Police)​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಾರತ್ತಹಳ್ಳಿ ಠಾಣೆ ಇನ್ಸ್​ಪೆಕ್ಟರ್ ಪ್ರಕರಣದ ತನಿಖೆ ಮಾಡುತ್ತಿದ್ದಾರೆ. ಸಾಕ್ಷಿ ಸಂಗ್ರಹಿಸಲಾಗುತ್ತಿದೆ. ಇದುವರೆಗು ಯಾರ ಬಂಧನ ಆಗಿಲ್ಲ, ಶೋಧ ಕಾರ್ಯ ನಡೆಯತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ (B Dayananda) ಹೇಳಿದರು.

ಉತ್ತರ ಪ್ರದೇಶಕ್ಕೆ ತೆರಳಿರುವ ಬೆಂಗಳೂರು ಪೊಲೀಸರು

ಪ್ರಕರಣದ ತನಿಖೆ ನಡೆಸುತ್ತಿರುವ ಬೆಂಗಳೂರು ಪೊಲೀಸರು ಗುರುವಾರ ಉತ್ತರ ಪ್ರದೇಶಕ್ಕೆ ತೆರಳಿದ್ದರು. ಸ್ಥಳೀಯ ಪೊಲೀಸರ ಸಹಾಯದಿಂದ ಅತುಲ್ ಸುಭಾಷ್ ಅವರ ಅತ್ತೆ ಮನೆಗೆ ಹೋಗಿದ್ದರು. ಆದರೆ, ಪೊಲೀಸರು ಬರುವ ಮುನ್ನವೇ ಅತುಲ್​ ಅತ್ತೆ ಮನೆಯವರು ಫೋನ್ ಸ್ವಿಚ್ಡ್​ ಆಫ್ ಮಾಡಿಕೊಂಡು, ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ಮನೆಯ ಪ್ರವೇಶದ್ವಾರದಲ್ಲಿ ನೋಟಿಸ್ ಅಂಟಿಸಿದ್ದು, ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ನೋಟಿಸ್​ನಲ್ಲಿ ಹೇಳಿದ್ದಾರೆ.

ಪ್ರಕರಣ ಸಂಬಂಧ ಬೆಂಗಳೂರು ಡಿಸಿಪಿ ಶಿವಕುಮಾರ್‌ ಗುಣಾರೆ ಮಾತನಾಡಿ, ನಾವು ಸ್ಥಳೀಯ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಶಂಕಿತರ ಪತ್ತೆಗೆ ಅವರು ನಮ್ಮೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಅತುಲ್ ಸುಭಾಷ್ ಆತ್ಮಹತ್ಯೆ ‌ಕೇಸ್: ರಾಷ್ಟ್ರಪತಿ, ಸುಪ್ರೀಂ ಜಡ್ಜ್​​ಗೆ ಮೇಲ್​​ ಮಾಡಿದ್ದ ಟೆಕ್ಕಿ

ಅತುಲ್ ಸುಭಾಷ್ ಸಾವು

ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಸಾಯುವ ಮುನ್ನ 24 ಪುಟಗಳ ಡೆತ್​ನೋಟ್​ ಬರೆದಿಟ್ಟಿದ್ದಷ್ಟೇ ಅಲ್ಲದೆ 90 ನಿಮಿಷಗಳ ವಿಡಿಯೋವನ್ನು ಕೂಡ ಮಾಡಿಟ್ಟಿದ್ದರು. ತಮ್ಮ ಸಾವಿಗೆ ಪತ್ನಿ ನಿಕಿತಾ ಮತ್ತು ಅವರ ಕುಟುಂಬಸ್ಥರು ಕಾರಣ ಎಂದು ಆರೋಪಿಸಿದ್ದರು.

ಪತಿ ಅತುಲ್​ ವಿರುದ್ಧ ಪತ್ನಿ ನಿಕಿತಾ ವರದಕ್ಷಿಣೆ ಕಿರುಕುಳ ಸೇರಿದಂತೆ ಒಟ್ಟು 9 ಪ್ರಕರಣಗಳನ್ನು ದಾಖಲಿಸಿದ್ದರು. 6 ಪ್ರಕರಣಗಳು ಕೆಳ ನ್ಯಾಯಾಲಯದಲ್ಲಿದ್ದರೆ 3 ಪ್ರಕರಣಗಳು ಹೈಕೋರ್ಟ್​ನಲ್ಲಿದ್ದವು. ಅತುಲ್ ಮತ್ತು ನಿಕಿತಾ ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಪರಿಚಯವಾಗಿದ್ದರು. 2019ರ ಏಪ್ರಿಲ್ 26ರಂದು ವಾರಾಣಸಿಯಲ್ಲಿ ವಿವಾಹವಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:47 pm, Fri, 13 December 24