ಬೆಂಗಳೂರಿನಲ್ಲಿ ಟೆಕ್ಕಿ ನಿಗೂಢ ನಾಪತ್ತೆ; ಹುಡುಕಿಕೊಡುವಂತೆ ಎಕ್ಸ್​ ಮೂಲಕ ಪೊಲೀಸ್ ಆಯುಕ್ತರಿಗೆ ಪತ್ನಿ ಮನವಿ

ಬೆಂಗಳೂರಿನ ಟೆಕ್ಕಿಯೊಬ್ಬರು ನಿಗೂಢವಾಗಿ ಕಾಣೆಯಾಗಿದ್ದು ಹುಡುಕಾಡಲು ಪತ್ನಿ ಹರಸಾಹಸ ಪಡುತ್ತಿದ್ದಾರೆ. ನಾಪತ್ತೆಯಾದ ಪತಿ ಹುಡುಕಲು ಸಹಾಯ ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಮಾಡಿ ಕಣ್ಣೀರಿಟ್ಟಿದ್ದಾರೆ. ಅಲ್ಲದೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಎಕ್ಸ್ ಮೂಲಕ ದೂರು ನೀಡಿದ್ದಾರೆ. ಇನ್ನು ಕೋಡಿಗೆಹಳ್ಳಿ ಪೊಲೀಸ್ ಠಾಣೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಬೆಂಗಳೂರಿನಲ್ಲಿ ಟೆಕ್ಕಿ ನಿಗೂಢ ನಾಪತ್ತೆ; ಹುಡುಕಿಕೊಡುವಂತೆ ಎಕ್ಸ್​ ಮೂಲಕ ಪೊಲೀಸ್ ಆಯುಕ್ತರಿಗೆ ಪತ್ನಿ ಮನವಿ
ಬೆಂಗಳೂರಿನಲ್ಲಿ ಟೆಕ್ಕಿ ನಿಗೂಢ ನಾಪತ್ತೆ
Follow us
| Updated By: ಆಯೇಷಾ ಬಾನು

Updated on: Aug 12, 2024 | 9:17 AM

ಬೆಂಗಳೂರು, ಆಗಸ್ಟ್​.12: ಮಾನ್ಯತಾ ಟೆಕ್ ಪಾರ್ಕ್​ನ ಕಂಪನಿಯೊಂದರಲ್ಲಿ ಟೆಕ್ಕಿಯಾಗಿರುವ ವಿಪಿನ್ ಗುಪ್ತಾ (37) ಕಾಣೆಯಾಗಿದ್ದಾರೆ (Missing). ಕೈಯಲ್ಲಿ ಟಿ ಶರ್ಟ್​ ಹಿಡಿದು ತನ್ನ ಕವಾಸಕಿ ಬೈಕ್​ ತೆಗೆದುಕೊಂಡು ಮನೆ ಬಿಟ್ಟಿದ್ದ ಪತಿ ಎಂಟು ದಿನ ಕಳೆದರೂ ಮನೆಗೆ ಬಂದಿಲ್ಲ, ಹುಡುಕಿಕೊಡಿ ಎಂದು ವಿಪಿನ್ ಪತ್ನಿ ನಗರ ಪೊಲೀಸ್ ಆಯುಕ್ತರಿಗೆ ಎಕ್ಸ್​ ಖಾತೆ ಮೂಲಕ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ. ಇನ್ನು ಮನೆ ಬಿಟ್ಟ ಕೆಲವೇ ನಿಮಿಷಗಳಲ್ಲಿ ಟೆಕ್ಕಿ 1 ಲಕ್ಷದ 80 ಸಾವಿರ ಹಣ ಡ್ರಾ ಮಾಡಿ ಕೊಂಡಿದ್ದು ಯಾರಾದರೂ ಬ್ಲಾಕ್ ಮೇಲ್ ಮಾಡಿ ಹಣ ಪಡೆದು ಕಿಡ್ನಾಪ್ (Kidnap) ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಕಳೆದ ಮೂರು ವರ್ಷದಿಂದ ಬೆಂಗಳೂರಿನಲ್ಲಿ ಪತ್ನಿ, ಮಕ್ಕಳ ಜೊತೆ ವಾಸವಿದ್ದ ವಿಪಿನ್ ಲಕ್ನೋ ಮೂಲದವರು. ಕಳೆದ 8 ದಿನಗಳ ಹಿಂದೆ ಅಂದರೆ ಇದೇ ತಿಂಗಳ 04 ರಂದು ಮಧ್ಯಾಹ್ನ 12:44ಕ್ಕೆ ಏಕಾಏಕಿ ಪತ್ನಿಗೂ ಒಂದು ಮಾತು ತಿಳಿಸದೆ ಕೈಯಲ್ಲಿ ಟಿ ಶರ್ಟ್ ಹಿಡಿದು ಮನೆಯಿಂದ ಹೊರಗೆ ಹೆಜ್ಜೆ ಹಾಕಿದ ವಿಪಿನ್ ಬಳಿಕ ತನ್ನ ಕವಾಸಕಿ ಬೈಕ್ ತೆಗೆದುಕೊಂಡಿ ಆಚೆ ಹೋಗಿದ್ದರು. ನಿನ್ನೆ ಬರುತ್ತಾರೆ ಎಂದು ಎಷ್ಟೋ ಕಾದರೂ ಪತಿ ಹಿಂದಿರುಗಿಲ್ಲ. ಅಲ್ಲದೆ ವಿಪಿನ್ ಮನೆ ಬಿಟ್ಟ ಕೆಲವೇ ನಿಮಿಷಗಳಲ್ಲಿ 1 ಲಕ್ಷ 80 ಸಾವಿರ ಹಣ ಡ್ರಾ ಆಗಿದೆ. ಆ ಬಳಿಕ ಟೆಕ್ಕಿ ವಿಪಿನ್ ಮೊಬೈಲ್ ಸ್ವಿಚ್ ಆಫ್ ಆಗಿದೆ.

ಇದನ್ನೂ ಓದಿ: ಕೊಚ್ಚಿಹೋದ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್; ನದಿಗೆ ನೀರು ಬಿಡುಗಡೆ, ನದಿ ಪಾತ್ರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ

ವಿಪಿನ್ ಕಳೆದ ಎಂಟು ದಿನಗಳಿಂದ ಮನೆಗೆ ಬಂದಿಲ್ಲ. ಇದರಿಂದ ಪತ್ನಿ ಹಾಗೂ ಇಬ್ಬರು ಮಕ್ಕಳು ಕಂಗಾಲಾಗಿದ್ದಾರೆ. ಕಾಣೆಯಾದ ಪತಿ ಹುಡುಕಿಕೊಡುವಂತೆ ಕೋಡಿಗೆಹಳ್ಳಿ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದು ದೂರು ನೀಡಿದರೂ ಪೊಲೀಸರು ಬೇಜವಾಬ್ದಾರಿ ತೋರಿಸಿದ್ದಾರೆ. ಪತಿ ಕಾಣೆಯಾಗಿ 8 ದಿನಗಳೆದರೂ ಪೊಲೀಸರು ಯಾವುದೇ ಹುಡುಕುವ ಪ್ರಯತ್ನ ಮಾಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ. ಸದ್ಯ ಈಗ ನಗರ ಪೊಲೀಸ್ ಆಯುಕ್ತರಿಗೆ ಎಕ್ಸ್​ ಖಾತೆ ಮೂಲಕ ಪತಿ ಹುಡುಕಿಕೊಂಡುವಂತೆ ಮನವಿ ಮಾಡಿದ್ದಾರೆ. ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪತಿ ಕಾಣೆಯಾದ ಬಗ್ಗೆ ಮಾಹಿತಿ ಹಂಚಿಕೊಂಡು ಸಹಾಯ ಮಾಡುವಂತೆ ಅಂಗಲಾಚಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ