ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ

ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ನೆರೆಮನೆಯವನಾದ ಕರ್ನಲ್, ಶರ್ಮಿಳಾರನ್ನು ಅತ್ಯಾಚಾರ ಮಾಡಲು ಯತ್ನಿಸಿ, ನಂತರ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಒಂದುವರೆ ತಿಂಗಳಿಂದ ಆಕೆಯನ್ನು ಹಿಂಬಾಲಿಸುತ್ತಿದ್ದ ಆರೋಪಿ, ಹತ್ಯೆ ನಂತರ ಬೆಂಕಿ ಹಚ್ಚಿ ಅಗ್ನಿಅವಘಡದಿಂದ ಸಾವು ಸಂಭವಿಸಿದೆ ಎಂದು ಬಿಂಬಿಸಲು ಯತ್ನಿಸಿದ್ದ. ಆದರೆ ನಡೆದಿದ್ದೇನು ಎಂಬುದನ್ನು ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ.

ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ
ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ
Edited By:

Updated on: Jan 26, 2026 | 12:57 PM

ಬೆಂಗಳೂರು, ಜನವರಿ 26: ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಹತ್ಯೆ (Techie Sharmila case) ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ತನಿಖೆ ವೇಳೆ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ. ನೆರೆಮನೆಯವನೇ ಆದ ಆರೋಪಿ ಕರ್ನಲ್ (18), ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನುವ ಶಂಕೆ ವ್ಯಕ್ತವಾಗಿತ್ತು. ಮೊದಲಿಗೆ ದೌರ್ಜನ್ಯದ ಆರೋಪವನ್ನು ಕರ್ನಲ್ ತಳ್ಳಿಹಾಕಿದ್ದ. ಆದರೀಗ ಆಕೆಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿರುವುದಾಗಿ ಪೊಲೀಸ್ ತನಿಖೆಯ ವೇಳೆ ಒಪ್ಪಿಕೊಂಡಿದ್ದಾನೆ.

ಹೊಂಚು ಹಾಕಿ ಕಾದು ಕುಳಿತಿದ್ದ ಯುವಕ

34 ವಯಸ್ಸಿನ ಟೆಕ್ಕಿ ಶರ್ಮಿಳಾನ್ನು ಪ್ರೀತಿಸುತ್ತಿದ್ದ. ಆಕೆಯ ಹತ್ಯೆಗೂ ಒಂದುವರೆ ತಿಂಗಳಿಂದ ಪ್ರತಿನಿತ್ಯ ಟೆರಸ್ ಮೇಲೆ ಯುವತಿಯ ಚಲನ ವಲನಗಳನ್ನು ಗಮನಿಸುತ್ತಿದ್ದ. ಶರ್ಮಿಳಾ ಕೆಲಸಕ್ಕೆ ಹೋಗುವಾಗಲೂ ಆಕೆಯನ್ನು ಹಿಂಬಾಲಿಸುತ್ತಿದ್ದ ಯುವಕ, ಕೆಲಸ ಮುಗಿಸಿ ಆಕೆ ವಾಪಸ್ ಬರುವ ವೇಳೆ ಕಾದು ಕೂರುತ್ತಿದ್ದ ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಹಲವು ದಿನಗಳಿಂದ ಆಕೆಯ ಮೇಲೆ ಕಣ್ಣಿಟ್ಟಿದ್ದ ಆರೋಪಿ ಜನವರಿ 3ರ ರಾತ್ರಿ ಟೆಕ್ಕಿಯ ಮನೆಗೆ ನುಗ್ಗಿ, ಆಕೆಯ ಮೇಲೆ ಮೇಲೆ ಅತ್ಯಾಚಾರಕ್ಕೆ ಪ್ರಯತ್ನ ಪಟ್ಟಿದ್ದಾಗಿ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ.

ಇದನ್ನೂ ಓದಿ ಬೆಂಗಳೂರಿನಲ್ಲಿ ಮಂಗಳೂರು ಮೂಲದ ಟೆಕ್ಕಿ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್: ಹತ್ಯೆಗೂ ಮುನ್ನ ರೇಪ್ ಮಾಡಿರುವ ಶಂಕೆ

ಆ ರಾತ್ರಿ ನಡೆದಿದ್ದೇನು?

ಶರ್ಮಿಳಾ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಯತ್ನಿಸಿದ ಸಮಯದಲ್ಲಿ ಆಕೆ ಜೋರಾಗಿ ಕಿರುಚಿಕೊಂಡಿದ್ದರು. ಈ ವೇಳೆ ಆಕೆಯ ಬಾಯಿಯನ್ನು ಗಟ್ಟಿಯಾಗಿ ಮುಚ್ಚಿದ್ದ. ಮಹಿಳೆ ಎಷ್ಟೇ ಬೇಡಿಕೊಂಡರೂ ಕನಿಕರವಿಲ್ಲದೆ ಕತ್ತು ಹಿಸುಕಿ ಕೊಲೆ ಮಾಡಿದ್ದ. ಆ ಬಳಿಕ ಟಿಶ್ಯು ಪೇಪರ್ ಹಾಸಿಗೆ ಮೇಲಿಟ್ಟು ಬೆಂಕಿ ಹಚ್ಚಿದ್ದ ಕಿರಾತಕ‌, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಾಲ್ಕನಿ ಡೋರ್ ಮೂಲಕವೇ ಜಿಗಿದು ಪರಾರಿಯಾಗಿದ್ದ. ಅಗ್ನಿ ಅವಘಡದಿಂದಾಗಿ ಮಹಿಳೆ ಸಾವನ್ನಪ್ಪಿದ್ದಾರೆಂದು ಬಿಂಬಿಸಲು ಹೊರಟಿದ್ದವನ ಸತ್ಯ ವಿಚಾರಣೆ ವೇಳೆ ಹೊರಬಂದಿದೆ. ಸಧ್ಯಕ್ಕೆ ಮೃತರ ಪೋಸ್ಟ್​ಮಾರ್ಟಮ್ ರಿಪೋರ್ಟ್​ ಸೇರಿ ಕೆಲ ಮೆಡಿಕಲ್ ಸ್ಯಾಂಪಲ್​ಗಳನ್ನು ಎಫ್​ಎಸ್​ಎಲ್ಗೆ ಕಳುಹಿಸಲಾಗಿದ್ದು, ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.