ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಚಳಿ, ಒಣ ಹವೆಯ ಹವಾಮಾನ

Karnataka Weather: ಹಲವು ದಿನಗಳಿಂದ ರಾಜ್ಯದಲ್ಲಿ ಮನೆಮಾಡಿರುವ ಶುಷ್ಕ ವಾತಾವರಣ ಇಂದೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲಿತ ಆಹಾರ ಸೇವಿಸಲು ವೈದ್ಯರು ಸಲಹೆ ನೀಡಿದ್ದಾರೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಚಳಿ, ಒಣ ಹವೆಯ ಹವಾಮಾನ
ಬೆಂಗಳೂರಿನಲ್ಲಿಂದು ಚಳಿ, ಒಣ ಹವೆ

Updated on: Feb 08, 2026 | 7:45 AM

ಬೆಂಗಳೂರು, ಫೆಬ್ರುವರಿ 08: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ (Weather Forecast)  ವಾತಾವರಣವೇ ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಚಳಿಯ ವಾತಾವರಣ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.