AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಚಳಿಯ ಜೊತೆಗೆ ಶುಷ್ಕ ಹವಾಮಾನ

Karnataka Weather: ಬೆಂಗಳೂರಿನಲ್ಲಿ ಇಂದು ಚಳಿಯ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಸಾಧಾರಣವಿದ್ದು, ಬೆಳಗ್ಗೆ ಮಂಜು ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲಿತ ಆಹಾರ ಸೇವಿಸಲು ವೈದ್ಯರು ಸಲಹೆ ನೀಡಿದ್ದಾರೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಚಳಿಯ ಜೊತೆಗೆ ಶುಷ್ಕ ಹವಾಮಾನ
ಬೆಂಗಳೂರಿನಲ್ಲಿಂದು ಚಳಿಯ ಜೊತೆಗೆ ಶುಷ್ಕ ಹವಾಮಾನ
ಭಾವನಾ ಹೆಗಡೆ
|

Updated on: Feb 04, 2026 | 7:34 AM

Share

ಬೆಂಗಳೂರು, ಫೆಬ್ರುವರಿ 04: ರಾಜ್ಯದಲ್ಲಿ ಹಲವು ದಿನಗಳಿಂಧ ಶುಷ್ಕ ವಾತಾವರಣವೇ (Weather Forecast) ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕ

ಎಲ್ಲೆಲ್ಲಿ ಒಣಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಚಳಿಯ ವಾತಾವರಣ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!
ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು