AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಇಂದು ಶುಷ್ಕ ಹವೆ; ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳ

Karnataka Weather: ರಾಜ್ಯದ ಹಲವೆಡೆ ಇಂದು ಒಣ ಹವೆಯಿದ್ದು, ಇನ್ನೂ ಕೆಲ ದಿನ ಇದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಟ್ ಸ್ಟ್ರೋಕ್ ಭೀತಿ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಇಂದು ಶುಷ್ಕ ಹವೆ; ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳ
ರಾಜ್ಯದೆಲ್ಲೆಡೆ ಇಂದು ಶುಷ್ಕ ಹವೆ; ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳ
ಭಾವನಾ ಹೆಗಡೆ
|

Updated on: Mar 03, 2026 | 7:47 AM

Share

ಬೆಂಗಳೂರು, ಮಾರ್ಚ್​ 03: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ (Weather Forecast) ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರಲಿದ್ದು, ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣ ಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಮಾರ್ಚ್​ ಎರಡನೇ ವಾರದಲ್ಲಿ ತಾಪಮಾನ ಹೆಚ್ಚಳ

ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!