AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು 14 ಡಿಗ್ರಿಗಿಳಿದ ತಾಪಮಾನ! ರಾಜ್ಯದೆಲ್ಲೆಡೆ ಒಣ ಹವೆ

Karnataka Weather: ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಜಾಸ್ತಿಯಿದ್ದು, ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲಿತ ಆಹಾರ ಸೇವಿಸಲು ವೈದ್ಯರು ಸಲಹೆ ನೀಡಿದ್ದಾರೆ. ಹಲವು ದಿನಗಳಿಂದ ರಾಜ್ಯದಲ್ಲಿ ಮನೆಮಾಡಿರುವ ಶುಷ್ಕ ವಾತಾವರಣ ಇಂದೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು 14 ಡಿಗ್ರಿಗಿಳಿದ ತಾಪಮಾನ! ರಾಜ್ಯದೆಲ್ಲೆಡೆ ಒಣ ಹವೆ
ಬೆಂಗಳೂರಿನಲ್ಲಿಂದು 14 ಡಿಗ್ರಿಗಿಳಿದ ತಾಪಮಾನ!
ಭಾವನಾ ಹೆಗಡೆ
|

Updated on: Feb 07, 2026 | 7:41 AM

Share

ಬೆಂಗಳೂರು, ಫೆಬ್ರುವರಿ 07: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ (Weather Forecast) ವಾತಾವರಣವೇ ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಚಳಿಯ ವಾತಾವರಣ

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 14°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ