AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ; ರಾಜ್ಯದೆಲ್ಲೆಡೆ ಒಣಹವೆ

Karnataka Weather: ರಾಜ್ಯದೆಲ್ಲೆಡೆ ಇಂದು ಚಳಿಯಿರಲಿದ್ದು, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಹೇಳಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ರಾಜ್ಯ ಚಳಿಗಾಳಿಯಿಂದ ತತ್ತರಿಸುತ್ತಿದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ; ರಾಜ್ಯದೆಲ್ಲೆಡೆ ಒಣಹವೆ
ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ
ಭಾವನಾ ಹೆಗಡೆ
|

Updated on:Dec 26, 2025 | 7:31 AM

Share

ಬೆಂಗಳೂರು, ಡಿಸೆಂಬರ್ 26: ರಾಜ್ಯದಲ್ಲಿ ಇಂದು ಹಲವೆಡೆ ಚಳಿಯ ವಾತಾವರಣವಿದ್ದು (Weather Forecast) , ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣವೂ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯ ದಟ್ಟ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕೆಂದು ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಮಂಜು

ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣದಲ್ಲಿ ಸಾಕಷ್ಟು ಏರು ಪೇರಾಗುತ್ತಿದ್ದು, ಚಳಿಯ ಪ್ರಮಾಣ ಹೆಚ್ಚುತ್ತಿದೆ. ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಎಲ್ಲೆಲ್ಲಿ ಒಣ ಹವೆ

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:29 am, Fri, 26 December 25

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!