AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ, ಒಣ ಹವೆ!

Karnataka Weather: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯಿದ್ದು, ಇಂದಿನಂತೆ ಕೆಲ ದಿನಗಳ ಕಾಲ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲಿತ ಆಹಾರ ಸೇವಿಸಲು ವೈದ್ಯರು ಸಲಹೆ ನೀಡಿದ್ದಾರೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ, ಒಣ ಹವೆ!
ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ!
ಭಾವನಾ ಹೆಗಡೆ
|

Updated on: Jan 25, 2026 | 7:28 AM

Share

ಬೆಂಗಳೂರು, ಜನವರಿ 25: ಇಂದೂ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ (Weather Forecast) ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಮಂಜು

ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 17°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ